ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಂಗಳೂರು: ಜ್ಯುವೆಲ್ಲರಿ ಶಾಪ್ ನಿಂದ ಚಿನ್ನ ಕದಿಯಲು ಯತ್ನಿಸಿದ ಕುಖ್ಯಾತ ಸಾಹಿಬ್ ಗಂಜ್ ಗ್ಯಾಂಗ್‌ನಾ 9 ಮಂದಿ ಬಂಧನ

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

ಮಂಗಳೂರು: ಜ್ಯುವೆಲ್ಲರಿ ಶಾಪ್ ನಿಂದ ಚಿನ್ನ ಕದಿಯಲು ಯತ್ನಿಸಿದ ಕುಖ್ಯಾತ ಸಾಹಿಬ್ ಗಂಜ್ ಗ್ಯಾಂಗ್‌ನಾ 9 ಮಂದಿ ಬಂಧನ

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜ್ಯುವೆಲ್ಲರಿ ಶಾಪ್ ನಿಂದ ಚಿನ್ನ  ದೋಚಲು ಯತ್ನಿಸಿದ ಕುಖ್ಯಾತ ಸಾಹಿಬ್ ಗಂಜ್ ಡಕಾಯಿತಿ ಗ್ಯಾಂಗ್‌ನ 9 ಮಂದಿಯನ್ನು ನಗರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಉಳ್ಳಾಲದ ಮಂಚಿಲ ಎಂಬಲ್ಲಿ 9 ಮಂದಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ಚಿನ್ನದ ಅಂಗಡಿಯಲ್ಲಿ ರಂಧ್ರ ಕೊರೆದು ಆಭರಣ ಲೂಟಿ ಮಾಡಲು ಸಂಚು ರೂಪಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಸಿಸಿಬಿ ಪೊಲೀಸರಿಗೆ ಸಿಕ್ಕಿದೆ. ನಂತರ ಪೊಲೀಸರು ಮನೆಯ ಮೇಲೆ ದಾಳಿ ನಡೆಸಿ, ಪ್ರಸ್ತುತ ಗುಜರಾತ್‌ನ ಗಾಂಧಿವಾಡಿಯಲ್ಲಿ ವಾಸಿಸುತ್ತಿರುವ ಕನ್ಯಾನ ಚೆನ್ನಯ್ಯ ಮೂಲ್ ನಿವಾಸಿ ಭಾಸ್ಕರ ಬೆಲ್ಚಪಾಡಾ (65), ಕನ್ಯಾನ ಚೆನ್ನಯ್ಯ ಮೂಲ್, ದಿನೇಶ್ ರಾವಲ್ ಅಲಿಯಾಸ್ ಸಾಗರ್ (38), ಬಿಸ್ತಾ ರೂಪ್ ಸಿಂಗ್ (34) ಮತ್ತು ಕೃಷ್ಣ ಬಹದ್ದೂರ್ ಬೊಗಾಟಿ (41), ನೇಪಾಳದ ನಿವಾಸಿಗಳಾದ ಮೊಹಮ್ಮದ್ ಜಮೀಲ್ ಶೇಖ್ (29), ಇನ್ಮಾಮಮ್ ಉಲ್ ಹಕ್ (27), ಇಮಾದುಲ್ ರಜಾಕ್ ಶೇಖ್ (32), ಇಮಾದುಲ್ ರಜಾಕ್ ಶೇಖ್ (32), ಬಿವುಲ್ ಶೇಖ್ (32) ಮತ್ತು ಇಮ್ರಾನ್ ಶೇಖ್ (32) ಅವರನ್ನು ಬಂಧಿಸಿದ್ದಾರೆ.

ಪೊಲೀಸರಿಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಕಳ್ಳತನ ಮಾಡಿರುವ 9 ಮಂದಿಯು ಜಾರ್ಖಂಡ್ ನ ನಿವಾಸಿಗಳು ಎಂದು ತಿಳಿಸಿದ್ದಾರೆ. 

ಪೊಲೀಸರು ದಾಳಿ ನಡೆಸಿದ ನಂತರ, ಮೂರು ಸ್ಕೂಟರ್ಗಳು, ಗ್ಯಾಸ್ ಕಟ್ಟರ್, ಆಕ್ಸಿಜನ್ ಸಿಲಿಂಡರ್, ಗ್ಯಾಸ್ ಸಿಲಿಂಡರ್, ಗ್ಯಾಸ್ ಕಟಿಂಗ್ ನಾಜಲ್ ಮತ್ತು ಡಕಾಯಿತಿಗೆ ಬಳಸಿದ ಇತರ ಅನೇಕ ವಸ್ತುಗಳ ಜೊತೆ 2.9 ಲಕ್ಷ ರೂ. ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಲ್ಲಾ ಆರೋಪಿಗಳು ಉತ್ತರ ಭಾರತ ಮೂಲದ ಕುಖ್ಯಾತ ಸಾಹಿಬ್ ಗಂಜ್ ಗ್ಯಾಂಗ್ ನ ಸದಸ್ಯರು. 15 ದಿನಗಳ ಹಿಂದೆ ತೊಕ್ಕೊಟ್ಟುವಿನ ಸೂಪರ್ ಜ್ಯುವೆಲ್ಲರಿ ಅಂಗಡಿಯನ್ನು ಲೂಟಿ ಮಾಡುವ ಉದ್ದೇಶದಿಂದ ಅವರು ರೈಲಿನಲ್ಲಿ ಮಂಗಳೂರಿಗೆ ಬಂದಿದ್ದರು. ಆರಂಭದಲ್ಲಿ ಅವರು ತೊಕೊಟ್ಟುವಿನ ಲಾಡ್ಜ್ ನಲ್ಲಿ ವಾಸಿಸುತ್ತಿದ್ದರು. ನಂತರ ಮಂಚಿಲಾದಲ್ಲಿನ ಬಾಡಿಗೆ ಮನೆಗೆ ಸ್ಥಳಾಂತರಗೊಂಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಟೆಕಲ್, ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬಿಕಾ ರಸ್ತೆ ಮತ್ತು ಉಚ್ಚಿಲದಲ್ಲಿ ಕಳೆದ ರಾತ್ರಿ ಆರೋಪಿಗಳು ಪ್ರಯಾಣಿಕರಿಂದ ಕಬ್ಬಿಣದ ರಾಡ್ ಗಳಿಂದ ಹಲ್ಲೆ ನಡೆಸಿ ಹಿಂದಿ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಯಾಣಿಕರಿಂದ ಮೂರು ಸ್ಕೂಟರ್ ಗಳನ್ನು ದೋಚಿದ್ದರು. ಆರೋಪಿಗಳು ಯಾವುದೇ ಅನುಮಾನವಿಲ್ಲದೆ ಸ್ಥಳೀಯ ನಂಬರ್ ಪ್ಲೇಟ್ ಸ್ಕೂಟರ್ ಗಳಲ್ಲಿ ಓಡಾಡುತ್ತಿದ್ದರು ಎಂದು ತಿಳಿಸಿದ ಪೊಲೀಸರು, ಈ ಎಲ್ಲಾ ಆರೋಪಿಗಳ ವಿರುದ್ಧ ಅನೇಕ ರಾಜ್ಯಗಳಲ್ಲಿ ಹಲವಾರು ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದ್ದಾರೆ..

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು