ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅಕ್ರಮ ಹಣ ವರ್ಗಾವಣೆ ಪ್ರಕರಣ: ಛತ್ತೀಸ್ಗಢ ಸಿಎಂ ಭೂಪೇಶ್ ಬಘೇಲ್ ಅವರ ಉಪ ಕಾರ್ಯದರ್ಶಿಯವರನ್ನು ಬಂಧಿಸಿದ ಇ.ಡಿ

PPeepal Media Desk

Peepal Media Desk • ದೇಶ

• 1 ನಿಮಿಷದ ಓದು

<strong>ಅಕ್ರಮ ಹಣ ವರ್ಗಾವಣೆ ಪ್ರಕರಣ: ಛತ್ತೀಸ್ಗಢ ಸಿಎಂ ಭೂಪೇಶ್ ಬಘೇಲ್ ಅವರ ಉಪ ಕಾರ್ಯದರ್ಶಿಯವರನ್ನು ಬಂಧಿಸಿದ ಇ.ಡಿ</strong>

ಛತ್ತೀಸ್‌ಗಢ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಉಪ ಕಾರ್ಯದರ್ಶಿ ಸೌಮ್ಯ ಚೌರಾಸಿಯಾ ಅವರನ್ನು ಜಾರಿ ನಿರ್ದೇಶನಾಲಯವು(ಇಡಿ) ಶುಕ್ರವಾರ ಬಂಧಿಸಿದೆ.

ಈ ಹಿನ್ನೆಲೆಯಲ್ಲಿ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್ಎ) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಚೌರಾಸಿಯಾ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಇಡಿ ತಿಳಿಸಿದೆ.

ಹಿರಿಯ ಅಧಿಕಾರಿಗಳು, ಉದ್ಯಮಿಗಳು, ರಾಜಕಾರಣಿಗಳು ಮತ್ತು ಮಧ್ಯವರ್ತಿಗಳನ್ನು ಒಳಗೊಂಡ ಕಾರ್ಟೆಲ್ ಮೂಲಕ ಛತ್ತೀಸ್ಗಢದಲ್ಲಿ ಸಾಗಿಸಲಾಗುವ ಪ್ರತಿ ಟನ್ ಕಲ್ಲಿದ್ದಲಿನಿಂದ, ಪ್ರತಿ ಟನ್ಗೆ 25 ರೂ.ಗಳ ಅಕ್ರಮ ಲೆವಿಯನ್ನು ಸುಲಿಗೆ ಮಾಡಲಾಗುತ್ತಿದ್ದ  ಹಗರಣಕ್ಕೆ ಸಂಬಂಧಿಸಿದಂತೆ 2002 ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಇಡಿ ಶೋಧ ಕಾರ್ಯಾಚರಣೆಗಳನ್ನು ನಡೆಸಿತ್ತು.

ಈ ಪ್ರಕರಣದಲ್ಲಿ ಹಲವಾರು ದಾಳಿಗಳನ್ನು ನಡೆಸಿದ ನಂತರ ಏಜೆನ್ಸಿಯು ಅಕ್ಟೋಬರ್‌ನಲ್ಲಿ ರಾಜ್ಯದ ಐಎಎಸ್ ಅಧಿಕಾರಿ ಸಮೀರ್ ವಿಷ್ಣೋಯ್ ಮತ್ತು ಇತರ ಇಬ್ಬರನ್ನು ಬಂಧಿಸಿತ್ತು.

ಈ ಕುರಿತು ಕಳೆದ ವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಘೇಲ್‌ರವರು, ತನಿಖಾ ಸಂಸ್ಥೆ ತನ್ನ ಮಿತಿಯನ್ನು ಮೀರುತ್ತಿದೆ ಮತ್ತು ರಾಜ್ಯದಲ್ಲಿನ ಜನರನ್ನು ಅಮಾನವೀಯವಾಗಿ ನಡೆಸಿಕೊಳ್ಳುತ್ತಿದೆ ಎಂದು ಆರೋಪಿಸಿ, ಇಡಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಈ ಕುರಿತು ಕೇಂದ್ರ ತನಿಖಾ ಸಂಸ್ಥೆಗಳಿಗೆ ಎಚ್ಚರಿಕೆ ನೀಡಿದ್ದ ಅವರು, ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿರ್ವಹಿಸುವಾಗ ‘ಹಿಂಸಾಚಾರ ಮತ್ತು ಬೆದರಿಕೆʼನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಇಡಿ ಮತ್ತು ಐಟಿ ಅಧಿಕಾರಿಗಳ ಹಿಂಸಾಚಾರದ ದೂರುಗಳು ತನಗೆ ತಲುಪುತ್ತಿದ್ದು, ಇದು ಸರಿಯಲ್ಲ ಎಂದು ಹೇಳಿದ್ದರು.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು