Friday, June 14, 2024

ಸತ್ಯ | ನ್ಯಾಯ |ಧರ್ಮ

ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿ: ಶಾಸಕ ಯತೀಂದ್ರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚುನಾವಣೆಗಳಲ್ಲಿ ವರುಣಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದಾಗಲೆಲ್ಲಾ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಮುಂಬರುವ ವಿಧಾನಸಭಾ ʼವರುಣಾದಿಂದ ಸ್ಪರ್ಧಿಸಬೇಕೆಂದು ನಾವು ಬಯಸುತ್ತೇವೆʼ ಎಂದು ಸಿದ್ದರಾಮಯ್ಯನವರ ಪುತ್ರ, ವರುಣಾ ಕ್ಷೇತ್ರದ ಶಾಸಕರಾದ ಯತೀಂದ್ರ ಸಿದ್ದರಾಮಯ್ಯನವರು ಅಭಿಪ್ರಯಾಪಟ್ಟಿದ್ದಾರೆ.

ಕಳೆದ ಒಂದು ವರ್ಷದಿಂದ ಸಿದ್ದರಾಮಯ್ಯ ಅವರು, ಮುಂದಿನ ವರ್ಷ(2023) ಏಪ್ರಿಲ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ, ತಾವು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುವುದರ ಬಗ್ಗೆ ತಮ್ಮ ಆಯ್ಕೆಗಳನ್ನು ತೆರೆದಿಟ್ಟಿದ್ದಾರೆ. ಸಿದ್ದರಾಮಯ್ಯ ಅವರು ಈ ಹಿಂದೆ ಹೇಳಿದಂತೆ ʼರಾಜ್ಯದ ಯಾವುದೇ ಕ್ಷೇತ್ರದಿಂದ ‌ಸ್ಪರ್ಧಿಸಿದರು ಗೆಲ್ಲುವ ವಿಶ್ವಾಸವಿದೆʼ ಎಂದಿದ್ದರು. ಆದರೆ ಚುನಾವಣೆಗೆ ಕೇವಲ ನಾಲ್ಕು ತಿಂಗಳುಗಳು ಮಾತ್ರ ಬಾಕಿ ಇದೆ. ಆದರೆ ಅವರಿಗೆ ಈಗ ಚುನಾವಣೆಯಲ್ಲಿ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕೆಂಬ ಗೊಂದಲ ಉಂಟಾಗಿದೆ. ಇದು ಅವರು ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಿದರು ಗೆಲ್ಲುವ ಕೊರತೆ ಕಂಡುಬರುತ್ತಿದೆಯೇ? ಎನ್ನುವ ಊಹಾಪೋಹಗಳಿಗೆ ಕಾರಣವಾಗಿದೆ.

ಒಂದು ವಾರದ ಹಿಂದಷ್ಟೇ ಅವರ ಪುತ್ರ ಯತೀಂದ್ರ ಅವರ ಹೇಳಿಕೆ ಪ್ರಕಾರ, ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸಬಹುದು ಎನ್ನುವ ಸುದ್ದಿ ಕೇಳಿಬರುತ್ತಿದೆ. ಈ ಕ್ಷೇತ್ರವನ್ನು ಅವರ ತಂದೆ 2018 ರಲ್ಲಿ ಖಾಲಿ ಮಾಡಿದ್ದರು. ಆದರೆ ಅವರು ವರುಣಾಕ್ಕೆ ಬಂದು ಗೆದ್ದರೆ, ಅವರು ಸಿಎಂ ಆಗುವ ಸಾಧ್ಯತೆ ಇದೆ. ಅವರು ವರುಣಾದಿಂದ ಸ್ಪರ್ಧಿಸಿದಾಗಲೆಲ್ಲಾ ಅವರು ಅಧಿಕಾರ ವಹಿಸಿಕೊಂಡಿದ್ದಾರೆ ʼಆದ್ದರಿಂದ, ಅವರು ಇಲ್ಲಿಂದ ಸ್ಪರ್ಧಿಸಬೇಕೆಂದು ನಾವು ಬಯಸುತ್ತೇವೆʼ ಎಂದು ಯತೀಂದ್ರರವರು ಹೇಳಿದ್ದಾರೆ.

2018 ರ ಚುನಾವಣೆಗೆ ಮೊದಲು, ಸಿದ್ದರಾಮಯ್ಯ ಅವರು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು, ಆದರೆ ಅವರು ಸ್ಪರ್ಧಿಸಿದ ಎರಡು ಕ್ಷೇತ್ರಗಳಲ್ಲಿ ಒಂದರಲ್ಲಿ ಸೋತು, ಇನ್ನೊಂದರಲ್ಲಿ ಅಲ್ಪ ಅಂತರದಿಂದ ಗೆದ್ದಿದ್ದರಿಂದ ಮುಖಭಂಗ ಅನುಭವಿಸಬೇಕಾಯಿತು.

ಸಿದ್ದರಾಮಯ್ಯನವರು 2018 ರ ಚುನಾವಣೆಗೆ ಮೊದಲು ಮೈಸೂರು ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ನ ಜಿ.ಟಿ.ದೇವೇಗೌಡ ವಿರುದ್ಧ 36,042 ಮತಗಳ ಅಂತರದಿಂದ ಸೋತಿದ್ದರೆ, ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ವಿರುದ್ಧ ಸಿದ್ದರಾಮಯ್ಯ ಕೇವಲ 1,696 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಕಳೆದ ಒಂದು ವರ್ಷದಿಂದ, ಸಿದ್ಧರಾಮಯ್ಯ ಅವರನ್ನು ವಿವಿಧ ಕ್ಷೇತ್ರಗಳ ಜನರು ತಮ್ಮ ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ವಿನಂತಿಸುತ್ತಿರುವುದರಿಂದ ತಮ್ಮ ಆಯ್ಕೆಗಳು ಮುಕ್ತವಾಗಿವೆ ಎಂದು ಸಿದ್ದರಾಮಯ್ಯ ತಿಳಿಸಿದ್ದರು. ಆದರೆ ಅವರು ಯಾವ ಕ್ಷೇತ್ರದಲ್ಲಿ ಸ್ಪರ್ಧೆಗೆ ಇಳಿಯುವ ಮೊದಲು ಅಲ್ಲಿನ ವಾತಾವರಣ ಪರೀಕ್ಷೆ ಮಾಡುತ್ತಿದ್ದಾರೆ. ಹೀಗಾಗಿಯೇ ಅವರು ಹೆಬ್ಬಾಳ, ಬಾದಾಮಿ, ಚಾಮರಾಜಪೇಟೆ ಮತ್ತು ಇತ್ತೀಚೆಗೆ ಕೋಲಾರವನ್ನು ಆಯ್ಕೆಮಾಡಿದ್ದರು ಎನ್ನಲಾಗಿದೆ.

ಕೇವಲ ಒಂದು ಚುನಾವಣೆಯ ನಂತರ ಯತೀಂದ್ರ ಅವರು ತಮ್ಮ ಸ್ಥಾನವನ್ನು ಖಾಲಿ ಮಾಡಲು ಮುಂದಾಗಿರುವುದು ಸಿದ್ದರಾಮಯ್ಯ ಅವರು ವರುಣಾಕ್ಕೆ ಮರಳಬಹುದು ಎನ್ನುವ ಅನುಮಾನ ಸೃಷ್ಟಿಯಾಗಿದೆ ಎಂದು ಕಾಂಗ್ರೆಸ್‌ ಪಕ್ಷದ ಕೆಲವು ಶಾಸಕರು ಅಭಿಪ್ರಾಯಪಟ್ಟಿದ್ದಾರೆ. ಅವರ ಪ್ರಕಾರ ʼಸಿದ್ದರಾಮಯ್ಯನವರು ಮತ್ತೆ ಬಾದಾಮಿಯನ್ನು ಗೆಲ್ಲುವ ಸಾಧ್ಯತೆಗಳು ತುಂಬಾ ಕಡಿಮೆ. ಹೆಬ್ಬಾಳ ಮತ್ತು ಚಾಮರಾಜಪೇಟೆಯಂತಹ ನಗರ ಕ್ಷೇತ್ರಗಳು ಸಹ ಅವರಿಗೆ ಕಠಿಣವಾಗಿರುತ್ತವೆ. ಹೀಗಾಗಿ ಕೋಲಾರದಿಂದ ಸ್ಪರ್ಧಿಸುವ ಬಗ್ಗೆ ಅವರು ಸುಳಿವು ನೀಡಿದ್ದರೂ, ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿದ್ದಕ್ಕಾಗಿ ಈ ವರ್ಷ ಜೆಡಿಎಸ್‌ನಿಂದ ಉಚ್ಛಾಟಿಸಲ್ಪಟ್ಟ ಕೆ.ಶ್ರೀನಿವಾಸ್ ಗೌಡ ಅವರನ್ನು ಕಣಕ್ಕಿಳಿಸುವುದು ಹೆಚ್ಚು ವಿವೇಕಯುತವಾಗಿದೆ ಎಂದು ಕಾಂಗ್ರೆಸ್ ಭಾವಿಸಿರುವುದರಿಂದ ಅದು ತಪ್ಪು ಎನ್ನುವುದು ಕೆಲವರ ಅಭಿಪ್ರಯಾವಾಗಿದೆ.

ಎಂಟು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರವನ್ನು ಐದು ಬಾರಿ, ವರುಣಾ ಕ್ಷೇತ್ರವನ್ನು ಎರಡು ಬಾರಿ ಮತ್ತು ಬಾದಾಮಿಯನ್ನು ಒಂದು ಬಾರಿ ಪ್ರತಿನಿಧಿಸಿದ್ದಾರೆ.

ಮುಂದಿನ ಚುನಾವಣೆಗೆ ಸಿದ್ದರಾಮಯ್ಯನವರು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎನ್ನವು ಗೊಂದಲವು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಒಂದು ರೀತಿಯ ಅನುಕೂಲಕರ ಎಂದು ಹೇಳಲಾಗುತ್ತಿದೆ, ಏಕೆಂದರೆ 2023 ರಲ್ಲಿ ಕಾಂಗ್ರೆಸ್ ಬಹುಮತ ಗಳಿಸಿದರೆ, ಇಬ್ಬರೂ ನಾಯಕರು ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ನಡೆಸಬೇಕಾಗುತ್ತದೆ ಎನ್ನಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು