Wednesday, June 19, 2024

ಸತ್ಯ | ನ್ಯಾಯ |ಧರ್ಮ

ಅಂಬೇಡ್ಕರ್‌, ಫುಲೆಯವರಿಗೆ ಅವಮಾನ: ಮಹಾ ಗಡಿ ಉಸ್ತುವಾರಿ ಸಚಿವನ ಮುಖಕ್ಕೆ ಮಸಿ

ಪುಣೆ: ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಸಮಾಜ ಸುಧಾರಕ ಮಹಾತ್ಮ ಜ್ಯೋತಿಬಾ ಫುಲೆ ಅವರ ಕುರಿತ ವಿವಾದಾತ್ಮಕ ಹೇಳಿಕೆಯನ್ನು ವಿರೋಧಿಸಿ ಮಹಾರಾಷ್ಟ್ರದ ಸಚಿವ ಹಾಗೂ ಬಿಜೆಪಿ ಮುಖಂಡ ಚಂದ್ರಕಾಂತ್ ಪಾಟೀಲ್ ಅವರ ಮೇಲೆ ಶನಿವಾರ ಇಲ್ಲಿಗೆ ಸಮೀಪದ ಪಿಂಪ್ರಿ ನಗರದಲ್ಲಿ ಮಸಿ ಎರಚಲಾಗಿದೆ.


ಪಾಟೀಲ್ ಮೇಲೆ ಶಾಯಿ ಎಸೆದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪಿಂಪ್ರಿ-ಚಿಂಚ್‌ವಾಡ್ ಪೊಲೀಸ್ ಕಮಿಷನರ್ ಅಂಕುಶ್ ಶಿಂಧೆ ತಿಳಿಸಿದ್ದಾರೆ.


ಘಟನೆ ಕುರಿತು ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಪಾಟೀಲ್ ಹೇಳಿಕೆಯನ್ನು ಜನರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದಿದ್ದಾರೆ.

ಘಟನೆಯ ವೀಡಿಯೋದಲ್ಲಿ ವ್ಯಕ್ತಿಯೊಬ್ಬ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಕಟ್ಟಡದಿಂದ ಹೊರಬರುತ್ತಿದ್ದಂತೆ ಆತನ ಮೇಲೆ ಮಸಿ ಎಸೆದಿರುವುದು ಕಂಡುಬಂದಿದೆ. ಸಚಿವರ ಸುತ್ತ ಇದ್ದ ಭದ್ರತಾ ಸಿಬ್ಬಂದಿ ತಕ್ಷಣ ವ್ಯಕ್ತಿಯನ್ನು ಹಿಡಿದರು.

ಮಸಿ ಎರಚುವ ಘಟನೆಗೂ ಮುನ್ನ ಕೆಲವು ಪ್ರತಿಭಟನಾಕಾರರು ಪಿಂಪ್ರಿಯಲ್ಲಿ ಸಚಿವರ ಬೆಂಗಾವಲು ಪಡೆಗೆ ಕಪ್ಪು ಬಾವುಟ ಪ್ರದರ್ಶಿಸಲು ಯತ್ನಿಸಿದರು.

ಶುಕ್ರವಾರ ಔರಂಗಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮರಾಠಿಯಲ್ಲಿ ಮಾತನಾಡಿದ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವ ಪಾಟೀಲ್, ಅಂಬೇಡ್ಕರ್ ಮತ್ತು ಫುಲೆ ಅವರು ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರದ ಅನುದಾನವನ್ನು ಕೇಳಲಿಲ್ಲ, ಅವರು ಶಾಲೆ ಮತ್ತು ಕಾಲೇಜುಗಳನ್ನು ಪ್ರಾರಂಭಿಸಲು ಹಣವನ್ನು ಸಂಗ್ರಹಿಸಲು ಜನರಲ್ಲಿ “ಭಿಕ್ಷೆ” ಕೇಳಿದರು ಎಂದಿದ್ದರು.

ನಾಗ್ಪುರದಲ್ಲಿ ಮಾತನಾಡಿದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಪಿಂಪ್ರಿಯಲ್ಲಿ ನಡೆದ ಘಟನೆ ಅತ್ಯಂತ ದುರದೃಷ್ಟಕರ, ಪಾಟೀಲ್ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಪಾಟೀಲ್ ಅವರು ತಪ್ಪು ಪದ ಬಳಸಿದ್ದರೂ, ಅವರ ಮಾತಿನ ಅರ್ಥವನ್ನು ತಿಳಿಯಲು ಪ್ರಯತ್ನಿಸಬೇಕು ಎಂದು ಫಡ್ನವಿಸ್ ಸುದ್ದಿಗಾರರಿಗೆ ತಿಳಿಸಿದರು.

ಅಂಬೇಡ್ಕರ್ ಅಥವಾ ಶಿಕ್ಷಣ ತಜ್ಞ ಭಾವುರಾವ್ ಪಾಟೀಲ್ ಅವರಂತಹ ಜನರು ಶಿಕ್ಷಣ ಸಂಸ್ಥೆಗಳನ್ನು ನಡೆಸಲು ಸರ್ಕಾರದಿಂದ ಹಣವನ್ನು ತೆಗೆದುಕೊಂಡಿಲ್ಲ ಎಂದು ಅವರು ತಿಳಿಸಲು ಪ್ರಯತ್ನಿಸುತ್ತಿದ್ದರು ಎಂದು ಬಿಜೆಪಿ ನಾಯಕ ಹೇಳಿದರು.

ಘಟನೆಗೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪಾಟೀಲ್ ಮನೆಯಿಂದ ಹೊರಬರುತ್ತಿದ್ದಂತೆ ವ್ಯಕ್ತಿಯೊಬ್ಬ ಬಾಟಲಿಯಲ್ಲಿದ್ದ ಶಾಯಿಯನ್ನು ಅವರ ಮುಖಕ್ಕೆ ಎಸೆದಿದ್ದಾನೆ. ಪಾಟೀಲ ವಿರುದ್ಧ ಘೋಷಣೆ ಕೂಗುತ್ತಿದ್ದ ವ್ಯಕ್ತಿ ಹಾಗೂ ಇಬ್ಬರನ್ನು ಸ್ಥಳದಲ್ಲಿದ್ದ ಪೊಲೀಸರು ವಶಕ್ಕೆ ಪಡೆದರು.

“… ಮೂವರು ವ್ಯಕ್ತಿಗಳಿದ್ದರು… ಅವರಲ್ಲಿ ಒಬ್ಬರು ಸಚಿವರ ಮೇಲೆ ಶಾಯಿ ಎಸೆದರು ಮತ್ತು ಇಬ್ಬರು ಘೋಷಣೆಗಳನ್ನು ಕೂಗಿದರು. ಸ್ಥಳದಲ್ಲಿದ್ದ ಪೊಲೀಸರು ಮೂವರನ್ನೂ ಬಂಧಿಸಿದ್ದಾರೆ” ಎಂದು ಪಿಂಪ್ರಿ-ಚಿಂಚ್‌ವಾಡ್ ಪೊಲೀಸ್ ಕಮಿಷನರ್ ಅಂಕುಶ್ ಶಿಂಧೆ ತಿಳಿಸಿದ್ದಾರೆ.

ಶುಕ್ರವಾರ ಪೈಥಾನ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನೀಡಿದ ಸಚಿವರ ಹೇಳಿಕೆ ಎನ್‌ಸಿಪಿ, ಕಾಂಗ್ರೆಸ್ ಮತ್ತು ಶಿವಸೇನೆ (ಯುಬಿಟಿ) ಸೇರಿದಂತೆ ಪ್ರತಿಪಕ್ಷಗಳ ಟೀಕೆಗೆ ಗುರಿಯಾಗಿದ್ದವು.

Related Articles

ಇತ್ತೀಚಿನ ಸುದ್ದಿಗಳು