Wednesday, June 26, 2024

ಸತ್ಯ | ನ್ಯಾಯ |ಧರ್ಮ

ಮಸೂದ್ ಮನೆಗೂ ಭೇಟಿ ನೀಡಿ: ಡಿವೈಎಫ್ಐ ಆಗ್ರಹ

ಮಂಗಳೂರು:  ಬೊಮ್ಮಾಯಿಯವರು ಕರ್ನಾಟಕ ರಾಜ್ಯಕ್ಕೆ ಮುಖ್ಯಮಂತ್ರಿ. ಆರು ಕೋಟಿ ಕನ್ನಡಿಗರಿಗೂ ಅವರೇ ಮುಖ್ಯಮಂತ್ರಿ. ಬಿಜೆಪಿ ಪಕ್ಷದವರಿಗೆ, ಒಂದು ಮತ ಧರ್ಮಕ್ಕೆ ಮಾತ್ರ ಮುಖ್ಯಮಂತ್ರಿ ಅಲ್ಲ. ಪ್ರವೀಣ್‌ ನೆಟ್ಟಾರು ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಕೊಲೆಗೀಡಾದ ಮಸೂದ್‌ ಮನೆಗೂ ಭೇಟಿ ನೀಡಿ ಎಂದು ಡಿವೈಎಫ್ಐ ಕರ್ನಾಟಕ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.

ಈ ಕುರಿತು ಫೇಸ್‌ಬುಕ್ ನಲ್ಲಿ ಈ ಕುರಿತು ಪೋಸ್ಟ್‌ ಬರೆದಿರುವ ಮುನೀರ್‌ ಕಾಟಿಪಳ್ಳ, ಬೆಳ್ಳಾರೆಯಲ್ಲಿ ಕೊಲೆಗೀಡಾದ ಪ್ರವೀಣ್ ನೆಟ್ಟಾರು ಮನೆಗೆ ಇಂದು ನೀವು ಭೇಟಿ ನೀಡುವಾಗ, ಅದೇ ಗ್ರಾಮದಲ್ಲಿ ವಾರದ ಹಿಂದೆ ಮತೀಯ ದ್ವೇಷಕ್ಕೆ ಬಲಿಯಾದ ಅಮಾಯಕ ಹುಡುಗ ಮಹಮ್ಮದ್ ಮಸೂದ್ ಮನೆಗೂ ಭೇಟಿ ನೀಡಬೇಕು. ಪ್ರವೀಣ್ ನ ವಿಧವೆ ಹೆಂಡತಿ, ಅನಾಥ ತಂದೆ ತಾಯಿಯರಿಗೆ ಸಾಂತ್ವನ ಹೇಳುವಾಗ, ಮಸೂದ್ ನ ವಿಧವೆ ತಾಯಿಗೂ ಸಾಂತ್ವನ ಹೇಳಬೇಕು. ಯಾವುದೇ ಕಾರಣಕ್ಕೂ ತಾರತಮ್ಯ ಎಸಗಬಾರದು ಎಂದು ಆಗ್ರಹಿಸಿದ್ದಾರೆ.

 ಕೊಲೆಗೀಡಾದ ಎರಡೂ ಕುಟುಂಬದ ಹೆಣ್ಣು ಜೀವಗಳು ಸಮಾನವಾಗಿ ನೊಂದಿವೆ. ಮುಖ್ಯಮಂತ್ರಿಗಳೇ ರಾಜಧರ್ಮ ಪಾಲಿಸಿ.‌ ಇಲ್ಲದಿದ್ದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ನೀವು ಅಯೋಗ್ಯರಾಗಿ ಬಿಡುತ್ತೀರಿ. ಕನ್ನಡ ನಾಡಿನ ಮಹಾನ್ ಪರಂಪರೆಗೆ, ಮುಖ್ಯಮಂತ್ರಿ ಸ್ಥಾನದ ಘನತೆಗೆ ಅಪಚಾರ ಎಸಗಬೇಡಿ‌ ಎಂದು  ಅವರು ಮನವಿ ಮಾಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು