ಭರ್ಜರಿ ಬಹುಮತದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ಕೊನೆಗೂ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿದೆ. ಗುರುವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.
ನಗರದ ಕಂಠೀರವ ಸ್ಟೇಡಿಯಂನಲ್ಲಿ ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ರಾಜ್ಯಪಾಲ ಥೋವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಲಿದ್ದಾರೆ.