Wednesday, June 19, 2024

ಸತ್ಯ | ನ್ಯಾಯ |ಧರ್ಮ

ಹಿರಿಯ ಪತ್ರಕರ್ತ ಮುಳ್ಳಳ್ಳಿ ಸೂರಿ ನಿಧನ

ಬೆಂಗಳೂರು: ಹಿರಿಯ ಪತ್ರಕರ್ತರಾದ ಮುಳ್ಳಳ್ಳಿ ಸೂರಿ ಅವರು ಇಂದು ನಿಧನರಾಗಿದ್ದಾರೆ.

ನಾಲ್ಕು ತಿಂಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ಬ್ರೈನ್ ಟ್ಯೂಮರ್ ಆಪರೇಶನ್ ಗೆ ಒಳಗಾಗಿದ್ದ ಅವರು ಬಳಿಕ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚೇತರಿಸಿಕೊಳ್ಳುವ ಹೊತ್ತಿನಲ್ಲಿ ಕೊನೆಯುಸಿರೆಳೆದಿದ್ದಾರೆ.

ತಾಯಿನಾಡು, ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಯಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ಅವರು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, ಪತ್ರಕರ್ತರ ಸಹಕಾರ ಸಂಘ ಮತ್ತು ಪ್ರೆಸ್ ಕ್ಲಬ್ ನಲ್ಲಿ ಸಕ್ರೀಯವಾಗಿದ್ದರು.

ಅನಾರೋಗ್ಯದಿಂದ ಬಳಲುತ್ತಿರುವ ಸಂದರ್ಭದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಮತ್ತು ಪತ್ರಕರ್ತರ ಆಪತ್ಭಾಂಧವ ನಿಧಿಯಿಂದ ಆರ್ಥಿಕ ನೆರವು ನೀಡುವ ಮೂಲಕ ಅವರು ಗುಣಮುಖರಾಗಲೆಂದು ಪತ್ರಕರ್ತರು ಹಾರೈಸಿದ್ದರು.

ಕೆಯುಡಬ್ಲ್ಯೂಜೆ ಸಂತಾಪ:

ಹಿರಿಯ ಪತ್ರಕರ್ತ ಮುಳ್ಳಳ್ಳಿ ಸೂರಿ‌ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಸಂತಾಪ ವ್ಯಕ್ತಪಡಿಸಿದೆ.

ಸಂಘಟನಾತ್ಮಕ ಚಟುವಟಿಕೆಗಳ ಮೂಲಕ ಸದಾ ಕ್ರಿಯಾಶೀಲವಾಗಿ ಇರುತ್ತಿದ್ದ ಮುಳ್ಳಳ್ಳಿ ಸೂರಿ ಅವರ ನಿಧನದಿಂದ ಸುದ್ದಿ ಮನೆಯ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ ಎಂದು ಕೆಯುಡಬ್ಲ್ಯೂಜೆ ಶೋಕ ವ್ಯಕ್ತಪಡಿಸಿದೆ.

Related Articles

ಇತ್ತೀಚಿನ ಸುದ್ದಿಗಳು