Wednesday, June 26, 2024

ಸತ್ಯ | ನ್ಯಾಯ |ಧರ್ಮ

‘ಮೋದಿ ಸರ್ ನೇಮ್’ ವಿವಾದ ; ಸು.ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ

‘ಮೋದಿ ಸರ್ ನೇಮ್’ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಮರುಪರಿಶೀಲನಾ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾ ಮಾಡಿದ ನಂತರ, ಗುಜರಾತ್ ಹೈಕೋರ್ಟ್ ತೀರ್ಪಿನ ವಿರುದ್ಧ ರಾಹುಲ್ ಗಾಂಧಿಯವರು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

2019 ರಲ್ಲಿ ಕರ್ನಾಟಕದ ಕೋಲಾರದಲ್ಲಿ ಮಾಡಿದ ಭಾಷಣವೊಂದು ರಾಹುಲ್ ಗಾಂಧಿಯವರ ಸದಸ್ಯತ್ವ ಅನರ್ಹಗೊಳ್ಳುವ ಮಟ್ಟಕ್ಕೆ ಬರಬಹುದು ಎಂದು ನಿರೀಕ್ಷಿಸಿರಲಿಲ್ಲ. ಅಂದು ‘.. ಕಳ್ಳರೆಲ್ಲರಿಗೂ ಮೋದಿ ಉಪಾನಾಮ ಏಕೆ ಇರುತ್ತದೆ..’ ಎಂದು ರಾಹುಲ್ ಗಾಂಧಿಯವರು ಪ್ರಶ್ನಿಸಿದ್ದರು. ಸಧ್ಯ ಈಗ ಇದೇ ಒಂದು ಅಂಶ ರಾಹುಲ್ ಗಾಂಧಿಯವರಿಗೆ ದೊಡ್ಡ ಮುಳುವಾಗಿ ಪರಿಣಮಿಸಿದೆ.

ಇದರಿಂದ ಮೋದಿ ಉಪನಾಮ ಹೊಂದಿರುವ ಎಲ್ಲರಿಗೂ ಅಪಮಾನ ಮಾಡಿದಂತಾಗಿದೆ ಎಂದು ಗುಜರಾತ್ ಶಾಸಕ ಪೂರ್ಣೇಶ್ ಮೋದಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದರ ಬೆನ್ನಲ್ಲೇ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಕೂಡಾ ರದ್ದು ಮಾಡಲಾಗಿತ್ತು. ಹಾಗೆಯೇ ಸೂರತ್ ಕೋರ್ಟ್, ರಾಹುಲ್ ಗಾಂಧಿಯವರನ್ನು ತಪ್ಪಿತಸ್ಥ ಎಂದು ಘೋಷಣೆ ಮಾಡಿತ್ತು. ಹಾಗೂ 2 ವರ್ಷಗಳ ಸಜೆಯ ಶಿಕ್ಷೆ ಕೂಡಾ ವಿಧಿಸಿತ್ತು.

ನಂತರ ಗುಜರಾತ್ ಹೈಕೋರ್ಟ್ ಗೆ ರಾಹುಲ್ ಗಾಂಧಿ ಮೇಲ್ಮನವಿ ಸಲ್ಲಿಸಿದ್ದರು. ಗುಜರಾತ್ ಹೈಕೋರ್ಟ್ ಕೂಡಾ ರಾಹುಲ್ ಗಾಂಧಿಯವರ ಮೇಲ್ಮನವಿಯನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ನಿರೀಕ್ಷಿತವಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ

ಈ ಪ್ರಕರಣದಲ್ಲಿ ರಾಹುಲ್ ಗಾಂಧಿಯವರ ಪರವಾಗಿ ವಾದ ಮಂಡಿಸುತ್ತಿರುವ ಹಿರಿಯ ವಕೀಲ ಅಭಿಷೇಕ್ ಮನು ಸಿಂಗ್ವಿ, ಅವರ ಪರವಾಗಿ ಎಸ್.ಪ್ರಸನ್ನ ಅವರು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು