ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್ ಜಾಮೀನು ವಿಸ್ತರಣೆ

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್ ಜಾಮೀನು ವಿಸ್ತರಣೆ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸುತ್ತಿದ್ದ ಆಮ್ ಆದ್ಮಿ ಪಕ್ಷದ ನಾಯಕ ಹಾಗೂ ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ನೀಡಲಾಗಿದ್ದ ವೈದ್ಯಕೀಯ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಸೋಮವಾರ ಹೆಚ್ಚುವರಿ ಐದು ವಾರಗಳವರೆಗೆ ವಿಸ್ತರಿಸಿದೆ.

ಸಂಕ್ಷಿಪ್ತ ವಿಚಾರಣೆಯ ಸಂದರ್ಭದಲ್ಲಿ, ಸತ್ಯೇಂದ್ರ ಜೈನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಸತ್ಯೇಂದ್ರ ಜೈನ್ ಅವರ ಅನಾರೋಗ್ಯದ ವಿಚಾರವಾಗಿ ವಾದ ಮಂಡಿಸಿದ್ದಾರೆ. ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ಬೇಲಾ ಎಂ ತ್ರಿವೇದಿ ಅವರ ಪೀಠಕ್ಕೆ ಜುಲೈ 21 ರಂದು ಜೈನ್ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಮತ್ತು ಚೇತರಿಸಿಕೊಳ್ಳಲು ಸಮಯ ಬೇಕಾಗುತ್ತದೆ ಎಂದು ಅಭಿಷೇಕ್ ಸಿಂಘ್ವಿ ತಿಳಿಸಿದ್ದಾರೆ.

ಹೆಚ್ಚುವರಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಸತ್ಯೇಂದ್ರ ಜೈನ್ ಅವರಿಗೆ ಈಗ ವಿಶ್ರಾಂತಿಯ ಅವಶ್ಯಕತೆ ಇದೆ. ಶಸ್ತ್ರಚಿಕಿತ್ಸೆ ಮಾಡಿರುವ ವೈದ್ಯರೇ ಸೂಚಿಸಿದಂತೆ ಇದೀಗ ಅವರ ಕುತ್ತಿಗೆಯ ಭಾಗಕ್ಕೂ ಶಸ್ತ್ರಚಿಕಿತ್ಸೆ ಆಗಿದ್ದು ಸರಿಯಾಗಿ ತಿರುಗಲು ಸಹ ಸಾಧ್ಯವಿಲ್ಲ ಎಂದು ಸಿಂಘ್ವಿ ನ್ಯಾಯಪೀಠಕ್ಕೆ ಒತ್ತಿ ಹೇಳಿದರು.

ಇಡಿಯನ್ನು ಪ್ರತಿನಿಧಿಸುವ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ಅವರು ಮಧ್ಯಂತರ ಜಾಮೀನು ವಿಸ್ತರಣೆಯನ್ನು ತಾನು ವಿರೋಧಿಸುತ್ತಿಲ್ಲ ಆದರೆ ಜೈನ್ ಅವರ ಆರೋಗ್ಯ ಸ್ಥಿತಿಯ ಸ್ವತಂತ್ರ ಮೌಲ್ಯಮಾಪನವನ್ನು ತಾವು ಬಯಸುವುದಾಗಿ ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, “ಸತ್ಯೇಂದ್ರ ಜೈನ್ ಈಗಷ್ಟೇ (ಜುಲೈ 21) ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಯಾವುದೇ ಸ್ವತಂತ್ರ ಮೌಲ್ಯಮಾಪನವು ಕೂಡಾ ಅವರು ಕೆಟ್ಟ ಸ್ಥಿತಿಯಲ್ಲಿದ್ದಾರೆ ಎಂದು ಹೇಳುತ್ತದೆ. ನಾಲ್ಕು ವಾರಗಳ ನಂತರ, ಅವರು ಚೇತರಿಸಿಕೊಂಡ ನಂತರ ಸ್ವತಂತ್ರ ಮೌಲ್ಯಮಾಪನವು ಸ್ವಲ್ಪ ಅರ್ಥವನ್ನು ನೀಡುತ್ತದೆ.” ಎಂದು ಎಸ್‌ವಿ ರಾಜು ಅವರಿಗೆ ಸ್ಪಷ್ಟನೆ ನೀಡಿದೆ.

ಆ ನಂತರ ಸುಪ್ರೀಂ ಕೋರ್ಟ್ ನ ಎ.ಎಸ್.ಬೋಪಣ್ಣ ಮತ್ತು ಬೇಲಾ ಎಂ ತ್ರಿವೇದಿ ಅವರ ಪೀಠವು ಸತ್ಯೇಂದ್ರ ಜೈನ್‌ಗೆ ಆರು ವಾರಗಳ ಮಧ್ಯಂತರ ಜಾಮೀನು ನೀಡಿತು. ಆದರೆ ಮಾಧ್ಯಮಗಳೊಂದಿಗೆ ಮಾತನಾಡಬಾರದು ಮತ್ತು ಅನುಮತಿಯಿಲ್ಲದೆ ದೆಹಲಿಯಿಂದ ಹೊರಹೋಗಬಾರದು ಸೇರಿದಂತೆ ಕೆಲವು ಪ್ರಮುಖ ಷರತ್ತುಗಳನ್ನು ವಿಧಿಸಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು