Saturday, June 15, 2024

ಸತ್ಯ | ನ್ಯಾಯ |ಧರ್ಮ

ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಡಿ.ಕೆ.ಶಿವಕುಮಾರ್ ಗೆ ಬಿಗ್ ರಿಲೀಫ್ ನೀಡಿದ ಸು.ಕೋರ್ಟ್

ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಸಿಬಿಐ ನಡೆಸುತ್ತಿರುವ ವಿಚಾರಣೆ ತಡೆಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಮಧ್ಯಂತರ ಆದೇಶ ವಿರುದ್ಧ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಇಂದು ಸುಪ್ರೀಂಕೋರ್ಟ್ ನಡೆಸಿ, ಕರ್ನಾಟಕ ಹೈಕೋರ್ಟ್ ಆದೇಶವನ್ನೇ ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.

ಕಳೆದ 2013ರಿಂದ 2018ರವರೆಗಿನ ಡಿಕೆ ಶಿವಕುಮಾರ್ ಅವರ ಆದಾಯ ಗಳಿಕೆ ಬಗ್ಗೆ ಸಿಬಿಐ ತನಿಖೆ ನಡೆಸಲಾಗುತ್ತಿತ್ತು. ಇದಕ್ಕೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು. ಅದರ ವಿಚಾರಣೆ ಇಂದು ನಡೆಯಿತು.

ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಈ ಹಿಂದೆ ಕರ್ನಾಟಕ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆ ನೀಡಿತ್ತು. ತಡೆಯಾಜ್ಞೆ ತೆರವು ಮಾಡುವಂತೆ ಸಿಬಿಐ ತನಿಖಾಧಿಕಾರಿಗಳು ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಆದಾಯ ಮೀತಿ ಆಸ್ತಿ ಗಳಿಸಿದ ಆರೋಪ ಹಿನ್ನೆಲೆಯಲ್ಲಿ ಸಿಬಿಐ ತನಿಖೆ ನಡೆಸಲು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಸರ್ಕಾರ ಈ ನಿರ್ಧಾರ ಪ್ರಶ್ನಿಸಿ ಡಿಕೆ ಶಿವಕುಮಾರ್ ಅವರು ಹೈಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದರು. ಇದನ್ನು ಹೈಕೋರ್ಟ್ ವಜಾಗೊಳಿಸಿತ್ತು.

ಸಧ್ಯ ವಾದ ವಿವಾದಗಳನ್ನು ಆಲಿಸಿದ ಸುಪ್ರೀಂಕೋರ್ಟ್ ಹೈಕೋರ್ಟ್ ನ್ಯಾಯಪೀಠ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿ ಹೊರಡಿಸಿದ ಆದೇಶವನ್ನೇ ಎತ್ತಿ ಹಿಡಿದಿದೆ. ಸುಪ್ರೀಂ ಕೋರ್ಟ್ ನಿರ್ಧಾರದಿಂದ ಬಳಿಕ ಡಿಕೆ ಶಿವಕುಮಾರ್ ಮತ್ತೊಮ್ಮೆ ನಿರಾಳರಾಗಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು