Sunday, June 23, 2024

ಸತ್ಯ | ನ್ಯಾಯ |ಧರ್ಮ

ನವಾಬ್ ಮಲಿಕ್ ಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿದ್ದ ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆರೋಗ್ಯ ನಿಯಮಗಳ ಅಡಿಯಲ್ಲಿ ಎರಡು ತಿಂಗಳ ಜಾಮೀನು ನೀಡಿ ತೀರ್ಪು ನೀಡಿತು.

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಾಯಕ ನವಾಬ್ ಮಲಿಕ್ ಅವರನ್ನು ಫೆಬ್ರವರಿ 2022 ರಲ್ಲಿ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಬಂಧಿಸಿತ್ತು.

ಪರಾರಿಯಾದ ಭಯೋತ್ಪಾದಕ ದಾವೂದ್ ಇಬ್ರಾಹಿಂ ಜೊತೆ ಅಕ್ರಮ ವಹಿವಾಟು ನಡೆಸಿದ ಆರೋಪದ ಮೇಲೆ 2022ರಲ್ಲಿ ಮನಿ ಲಾಂಡರಿಂಗ್ ಪ್ರಕರಣದಲ್ಲಿ ನವಾಬ್ ಮಲಿಕ್ ಅವರನ್ನು ಇಡಿ ಬಂಧಿಸಿತ್ತು. ಅಕ್ಟೋಬರ್ 2021ರಲ್ಲಿ, ನಾರ್ಕೋಟಿಕ್ಸ್ ಬ್ಯೂರೋದ ಮಾಜಿ ನಿರ್ದೇಶಕ ಸಮೀರ್ ವಾಂಖೆಡೆ ಮುಂಬೈನಲ್ಲಿ ಕ್ರೂಸ್ ಹಡಗಿನ ಮೇಲೆ ದಾಳಿ ಮಾಡಿದರು. ಈ ದಾಳಿಯಲ್ಲಿ ನವಾಬ್ ಮಲಿಕ್ ಅವರ ಸೋದರ ಸಂಬಂಧಿ ಸಮೀರ್ ಖಾನ್ ನನ್ನು ಡ್ರಗ್ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಸಚಿವ ನವಾಬ್ ಮಲಿಕ್ ಅಕ್ರಮ ವ್ಯವಹಾರದ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ.

ಈ ವರ್ಷ ಜುಲೈನಲ್ಲಿ ಮುಂಬೈ ಕೋರ್ಟ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಅವರು ಆರೋಗ್ಯವಾಗಿದ್ದಾರೆ ಮತ್ತು ಫಿಟ್ ಆಗಿದ್ದಾರೆ ಎಂದು ಅದು ಹೇಳಿತ್ತು. ಆ ಬಳಿಕ ಅವರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಕಳೆದ ಕೆಲವು ತಿಂಗಳುಗಳಿಂದ ನವಾಬ್ ಮಲಿಕ್ ಅವರ ಆರೋಗ್ಯ ಕ್ರಮೇಣ ಹದಗೆಟ್ಟಿದೆ ಎಂದು ಅವರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಕಿಡ್ನಿ ಸಂಬಂಧಿ ಖಾಯಿಲೆಯು 2ನೇ ಹಂತದಿಂದ 3ನೇ ಹಂತಕ್ಕೆ ತಲುಪಿರುವ ಕಾರಣ ಜಾಮೀನು ಕೋರಲಾಗಿದೆ. ನ್ಯಾಯಾಲಯ ಎರಡು ತಿಂಗಳ ಕಾಲ ಜಾಮೀನು ನೀಡಿದೆ.

Related Articles

ಇತ್ತೀಚಿನ ಸುದ್ದಿಗಳು