Sunday, June 23, 2024

ಸತ್ಯ | ನ್ಯಾಯ |ಧರ್ಮ

ಪುಲ್ವಾಮಾ: ಗುಂಡಿಕ್ಕಿಕೊಂಡು ಸಿಆರ್‌ಪಿಎಫ್ ಆತ್ಮಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಯೋಧ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರ ಮಧ್ಯರಾತ್ರಿ ಕರ್ತವ್ಯದ ವೇಳೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ಖಿನ್ನತೆಯೇ ಕಾರಣವೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಸಿಆರ್‌ಪಿಎಫ್ ಅಧಿಕಾರಿಗಳು ತಿಳಿಸಿದ್ದಾರೆ.

ಸಿಆರ್‌ಪಿಎಫ್ ಜವಾನ್ ಅಜಯ್ ಕುಮಾರ್ ಅವರು ದಕ್ಷಿಣ ಕಾಶ್ಮೀರ ಜಿಲ್ಲೆಯ ಆವಂತಿಪೋರಾದ ಎಸ್‌ಎಐಎಲ್ ಪ್ರದೇಶದ ಚೆಕ್ ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಜಯ್ ಕೆಲ ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ಎಂದಿನಂತೆ ಕರ್ತವ್ಯ ನಿರ್ವಹಿಸುತ್ತಿದ್ದ ಅಜಯ್ ಮಧ್ಯರಾತ್ರಿ 1:55ರ ಸುಮಾರಿಗೆ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗುಂಡಿನ ಸದ್ದು ಕೇಳಿ ಸ್ಥಳಕ್ಕಾಗಮಿಸಿದ ಇತರ ಯೋಧರು ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಜಯ್‌ ಅವರನ್ನು ಕಂಡರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಅಜಯ್ ಸಾವಿನ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಿಆರ್‌ಪಿಎಫ್ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.

* ನಿಮ್ಮಲ್ಲಿ ಆತ್ಮಹತ್ಯೆಯಂತಹ ಯೋಚನೆಗಳು ಮೂಡುತ್ತಿದ್ದಲ್ಲಿ ಸಹಾಯಕ್ಕಾಗಿ ಈ ಸಂಖ್ಯೆಯನ್ನು ಸಂಪರ್ಕಿಸಿ: Phone080 2549 7777

Related Articles

ಇತ್ತೀಚಿನ ಸುದ್ದಿಗಳು