Saturday, June 15, 2024

ಸತ್ಯ | ನ್ಯಾಯ |ಧರ್ಮ

ಏಷ್ಯಾ ಕಪ್‌ 2023: ಭಾರತದ ಪರವಾಗಿ ಆಡಲಿದ್ದಾರೆ ಈ ಆಟಗಾರರು, ಕನ್ನಡಿಗರಿಗೂ ಸಿಕ್ಕಿದೆ ಅವಕಾಶ

ಏಷ್ಯಾ ಕಪ್ 2023 ಆಗಸ್ಟ್ 30ರಿಂದ ಪ್ರಾರಂಭವಾಗಲಿದ್ದು (Team India Squad for Asia Cup 2023), ಫೈನಲ್ ಪಂದ್ಯವು ಸೆಪ್ಟೆಂಬರ್ 17ರಂದು ನಡೆಯಲಿದೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು ಈ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಿದೆ. ಆಯ್ಕೆಗಾರರು ಬಲಿಷ್ಠ ತಂಡವನ್ನು ಆಯ್ಕೆ ಮಾಡಿದ್ದು, ಈ ತಂಡದ ಚುಕ್ಕಾಣಿ ರೋಹಿತ್ ಶರ್ಮಾ ಕೈಯಲ್ಲಿರಲಿದೆ.

ರೋಹಿತ್ ಶರ್ಮಾ (ನಾಯಕ) (Rohit Sharma) ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ (Virat Kohli), ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್​ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ. ಇನ್ನು ಸಂಜು ಸ್ಯಾಮ್ಸನ್​ ಅವರಿಗೆ ಮೀಸಲು ಆಟಗಾರನಾಗುವ ಅವಕಾಶ ನೀಡಲಾಗಿದೆ.

ಅಜಿತ್ ಅಗರ್ಕರ್ ನೇತೃತ್ವದ ಭಾರತೀಯ ಆಯ್ಕೆ ಸಮಿತಿಯು ಏಷ್ಯಾಕಪ್‌’ಗೆ 17 ಸದಸ್ಯರ ತಂಡವನ್ನು ಪ್ರಕಟಿಸಿದೆ. ದೆಹಲಿಯಲ್ಲಿ ನಡೆದ ಆಯ್ಕೆ ಸಭೆಯ ನಂತರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ರೋಹಿತ್-ವಿರಾಟ್ ಸೇರಿದಂತೆ ಹಲವು ಸ್ಟಾರ್ ಆಟಗಾರರು ಈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಮತ್ತೊಂದೆಡೆ, ಶ್ರೇಯಸ್​ ಅಯ್ಯರ್, ಜಸ್ಪ್ರೀತ್ ಬುಮ್ರಾ ಕೂಡ ಏಕದಿನ ತಂಡಕ್ಕೆ ಮರಳಿದ್ದಾರೆ. ಇವರ ಜೊತೆಗೆ ಗಾಯದಿಂದ ಚೇತರಿಸಿಕೊಂಡಿರುವ ಕೆಎಲ್ ರಾಹುಲ್ ಕಂಬ್ಯಾಕ್ ಮಾಡಿದ್ದಾರೆ. 

ಕಣದಲ್ಲಿರಲಿವೆ ಆರು ತಂಡಗಳು

ಈ ಬಾರಿ ಏಷ್ಯಾಕಪ್ ನಲ್ಲಿ ಲೀಗ್ ಹಂತ, ಸೂಪರ್-4 ಹಾಗೂ ಫೈನಲ್ ಸೇರಿದಂತೆ ಒಟ್ಟು 13 ಪಂದ್ಯಗಳು ಏಕದಿನ ಮಾದರಿಯಲ್ಲಿ ನಡೆಯಲಿದೆ. ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ನೇಪಾಳದ ತಂಡಗಳು ಕಾದಾಡಲಿವೆ. ಭಾರತ, ಪಾಕಿಸ್ತಾನ ಮತ್ತು ನೇಪಾಳ ತಂಡಗಳು ಒಂದು ಗುಂಪಿನಲ್ಲಿ ಸ್ಥಾನ ಪಡೆದರೆ, ಹಾಲಿ ಚಾಂಪಿಯನ್ ಶ್ರೀಲಂಕಾ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ಮತ್ತೊಂದು ಗುಂಪಿನಲ್ಲಿವೆ. ಟೀಂ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಸೆಪ್ಟೆಂಬರ್ 2 ರಂದು ಆಡಲಿದೆ. ಇದಾದ ಬಳಿಕ ಸೆಪ್ಟೆಂಬರ್ 4ರಂದು ನೇಪಾಳವನ್ನು ಎದುರಿಸಲಿದೆ.

ಹೈಬ್ರಿಡ್ ಮಾದರಿಯಲ್ಲಿ ಏಷ್ಯಾಕಪ್ ನಡೆಯುತ್ತಿರುವ ಕಾರಣ ಪಾಕಿಸ್ತಾನ ಮತ್ತು ಶ್ರೀಲಂಕಾ ಜಂಟಿಯಾಗಿ ಟೂರ್ನಿಗೆ ಆತಿಥ್ಯ ನೀಡುತ್ತಿವೆ. ಈಗಾಗಲೇ ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳ ತಂಡಗಳು ಪ್ರಕಟವಾಗಿದ್ದವು. ಆಗಸ್ಟ್​ 30ರಿಂದ ಈ ಟೂರ್ನಿ ಆರಂಭವಾಗಲಿದ್ದು, ಸೆಪ್ಟೆಂಬರ್ 17ಕ್ಕೆ ಟೂರ್ನಿ ಮುಕ್ತಾಯಗೊಳ್ಳಲಿದೆ.

ಒಂದೆರಡು ಬದಲಾವಣೆಗಳೊಂದಿಗೆ ವಿಶ್ವಕಪ್‌ ಪಂದ್ಯಾವಳಿಗೂ ಇದೇ ತಂಡ ಆಡುವ ಸಾಧ್ಯತೆಯಿದೆ.

Related Articles

ಇತ್ತೀಚಿನ ಸುದ್ದಿಗಳು