ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಯೂಟ್ಯೂಬ್ ವಿಡಿಯೋ ನೋಡಿಕೊಂಡು ಮನೆಯಲ್ಲೇ ಹೆರಿಗೆ: ಮಹಿಳೆಯ ಸಾವು.. ಗಂಡ ಅರೆಸ್ಟ್

PPeepal Media Desk

Peepal Media Desk • ದೇಶ

• 1 ನಿಮಿಷದ ಓದು

ಯೂಟ್ಯೂಬ್ ವಿಡಿಯೋ ನೋಡಿಕೊಂಡು ಮನೆಯಲ್ಲೇ ಹೆರಿಗೆ: ಮಹಿಳೆಯ ಸಾವು.. ಗಂಡ ಅರೆಸ್ಟ್

ಯೂಟ್ಯೂಬ್‌ ವಿಡಿಯೋ ನೋಡಿಕೊಂಡು ಹೆರಿಗೆ ಮಾಡಿಸಲು ಹೋಗಿ ಪತ್ನಿಯ ಸಾವಿಗೆ ಪತಿಯೇ ಕಾರಣನಾದ ಘಟನೆಯೊಂದು ವರದಿಯಾಗಿದೆ.

ಚೆನ್ನೈ: ಯೂಟ್ಯೂಬ್ ನೋಡಿಕೊಂಡು ಗಂಡ ಮನೆಯಲ್ಲೇ ಹೆರಿಗೆ ಮಾಡಿಸಿದ ಕಾರಣ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕೃಷ್ಣಗಿರಿ ಪುಲಿಯಂಪಟ್ಟಿ ಎನ್ನುವಲ್ಲಿ ವರದಿಯಾಗಿದೆ.

ಮಾದೇಶ್ ಎನ್ನುವ ವ್ಯಕ್ತಿಯು ತನ್ನ ಪತ್ನಿ ಎಂ.ಲೋಕನಾಯಕಿಗೆ (27) ಹೆರಿಗೆ ಮಾಡಿಸಿದ ನಂತರ ಅತಿಯಾದ ಆಕೆ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಆಕೆಯ ಪತಿ ಮಾದೇಶನನ್ನು (30) ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ಬದುಕುಳಿದಿರುವ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆರೋಪಿತನು ಮಂಗಳವಾರ ಬೆಳಗ್ಗೆ ಮನೆಯಲ್ಲಿಯೇ ತನ್ನ ಹೆಂಡತಿ ಲೋಕನಾಯಕಿಗೆ ಹೆರಿಗೆ ಮಾಡಿಸಿದ್ದಾನೆ ಎನ್ನಲಾಗಿದೆ. ಯುವತಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಪತಿಯೇ ಮುಂದಾಗಿ ಮನೆಯಲ್ಲಿಯೇ ಹೆರಿಗೆ ಮಾಡಿಸಿದ್ದಾನೆ.

ಆದರೆ ಹೆರಿಗೆ ಬಳಿಕ ಯುವತಿಯ ಸ್ಥಿತಿ ಗಂಭೀರವಾಗಿದೆ. ನಂತರ ಮಾದೇಶ್ ತನ್ನ ಹೆಂಡತಿ ಮತ್ತು ನವಜಾತ ಶಿಶುವನ್ನು ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದನು. ಆದರೆ ಆಸ್ಪತ್ರೆಯಲ್ಲಿ ವೈದ್ಯರು ಆಕೆ ಅದಾಗಲೇ ಮೃತಪಟ್ಟಿದ್ದಾಳೆ ಎಂದು ತಿಳಿಸಿದ್ದಾರೆ. ನಂತರ ವೈದ್ಯಾಧಿಕಾರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮನೆಯಲ್ಲೇ ಹೆರಿಗೆ ಮಾಡುವುದನ್ನು ಯೂಟ್ಯೂಬ್ ನೋಡಿ ಮಾದೇಶ್ ಕಲಿತಿದ್ದಾನೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ನೆರೆಹೊರೆಯವರು ಮಾದೇಶ ಯೂಟ್ಯೂಬ್‌ನಲ್ಲಿ ಮನೆ ಹೆರಿಗೆ ವೀಡಿಯೊಗಳನ್ನು ನಿಯಮಿತವಾಗಿ ವೀಕ್ಷಿಸುತ್ತಿದ್ದ ಎಂದು ಸಾಕ್ಷ್ಯ ಹೇಳಿದ್ದಾರೆ. ಬಳಿಕ ಮಾದೇಶ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪೊಲೀಸರು ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪ ದೃಢಪಟ್ಟರೆ ಆರೋಪಿಯ ಬಂಧನವನ್ನು ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ದಂಪತಿಯ ಮಗು ಪೋಚಂಪಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ.

ವಿಷಯಗಳು: #india #karnataka #news #peepal #peepalmedia
PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು