Saturday, June 29, 2024

ಸತ್ಯ | ನ್ಯಾಯ |ಧರ್ಮ

ಉ.ಕರ್ನಾಟಕ ಭಾಗಕ್ಕೆ ಬರಲಿವೆ 450 ಎಲೆಕ್ಟ್ರಿಕ್ ಬಸ್ ಗಳು

ಉತ್ತರ ಕರ್ನಾಟಕ ಭಾಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ 450 ನಗರ ಮತ್ತು ಗ್ರಾಮೀಣ ಸಾರಿಗೆ ಬಸ್ಸುಗಳನ್ನು ರಸ್ತೆಗೆ ಇಳಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಮಾಹಿತಿ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ‘ಹೆಚ್ಚುತ್ತಿರುವ ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲು ಕ್ರಮವಹಿಸಲಾಗುತ್ತಿದೆ’ ಎಂದು ತಿಳಿಸಿದ್ದಾರೆ.

‘ಶಕ್ತಿ ಯೋಜನೆಗೆ ಮೊದಲು ನಿತ್ಯ 17.48 ಲಕ್ಷ ಜನರು ಪ್ರಯಾಣ ಮಾಡುತ್ತಿದ್ದರು. ಶಕ್ತಿ ಯೋಜನೆ ಜಾರಿಯಾದ ನಂತರ ಪ್ರಯಾಣಿಕರ ಸಂಖ್ಯೆ 24 ರಿಂದ 26 ಲಕ್ಷಕ್ಕೆ ಹೆಚ್ಚಳವಾಗಿದೆ. ನಗರ ಸಾರಿಗೆ ವ್ಯಾಪ್ತಿಯಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಬಹಳಷ್ಟು ಏರಿಕೆಯಾಗಿದೆ. ಜನರು ಇದರ ಹೆಚ್ಚಿನ ಲಾಭ ಪಡೆಯಲಿ ಎಂಬ ಉದ್ದೇಶದಿಂದ ಉತ್ತರ ಕರ್ನಾಟಕ ಭಾಗಕ್ಕೆ ಹೊಸ 450 ಎಲೆಕ್ಟ್ರಿಕ್ ಬಸ್ ಗಳು ರಸ್ತೆಗೆ ಇಳಿಯಲಿವೆ’ ಎಂದು ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದಾರೆ.

ಜನಸಂಖ್ಯೆಗೆ ತಕ್ಕಂತೆ ಸಾರಿಗೆ ಬಸ್ ಒದಗಿಸೋದಕ್ಕೆ ಸಾಧ್ಯವಾಗದೇ ಇದ್ದರೂ, ತೊಂದರೆ ಉಂಟಾಗದಂತೆ ಒಟ್ಟು 450 ಎಲೆಕ್ನಿಕ್ ಬಸ್ಸುಗಳ ಕಾರ್ಯಾಚರಣೆ ಮಾಡಲು ಯೋಜಿಸಲಾಗಿದೆ. ಅವುಗಳಲ್ಲಿ 200 ಗ್ರಾಮಾಂತರ ಸಾರಿಗೆ ಬಸ್ ಗಳು, 150 ನಗರ ಸಾರಿಗೆ ಮಾದರಿ ಹಾಗೂ 100 ಬಿ. ಆರ್. ಟಿ.ಎಸ್. ಮಾದರಿಯ ಬಸ್ ಗಳು ಸೇರಿವೆ ಎಂದು ಹೇಳಿದ್ದಾರೆ.

ಉತ್ತರ ಕರ್ನಾಟಕದ ಗ್ರಾಮಾಂತರ ಹಾಗೂ ನಗರ ಸಾರಿಗೆ ಬಸ್ಸುಗಳನ್ನು ಹು-ಧಾ ನಗರ ಸಾರಿಗೆ ವಿಭಾಗ, ಹುಬ್ಬಳ್ಳಿ ಗ್ರಾಮಾಂತರ, ಧಾರವಾಡ ಹಾಗೂ ಬೆಳಗಾವಿ ವಿಭಾಗಗಳಿಂದ ಕಾರ್ಯಾಚರಣೆ ಮಾಡಲಾಗುವುದು ಎಂಬುದಾಗಿ ತಿಳಿಸಿದ್ದಾರೆ. ಈ ಮೂಲಕ ಉತ್ತರ ಕರ್ನಾಟಕದ ಜನತೆಗೆ ಸಾರಿಗೆ ಸಚಿವರು ಗುಡ್ ನ್ಯೂಸ್ ನೀಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು