Wednesday, June 19, 2024

ಸತ್ಯ | ನ್ಯಾಯ |ಧರ್ಮ

ಸೆಂಚುರಿ ಸಂಭ್ರಮದಲ್ಲಿ ಸಿದ್ದು ಎಂಡ್‌ ಟೀಮ್:‌ ಇಂದು ಮೈಸೂರಿನಲ್ಲಿ ಗೃಹಲಕ್ಷ್ಮಿಗೆ ಸ್ವಾಗತ

ಮೈಸೂರು: ಗ್ಯಾರಂಟಿಗಳಲ್ಲೇ ಬಹಳ ಪ್ರಮುಖ ಗ್ಯಾರಂಟಿಯಾಗಿದ್ದ ಮನೆಯ ಮುಖ್ಯ ಮಹಿಳೆಗೆ‌ ರೂಪಾಯಿಗೆ 2,000 ನೇರ ವರ್ಗಾವಣೆ ಮಾಡುವ ಕಾಂಗ್ರೆಸ್‌ ಪಕ್ಷದ ಕನಸಿನ ಯೋಜನೆ ಇಂದು ಮೈಸೂರಿನಲ್ಲಿ ಕಾರ್ಯರೂಪಕ್ಕೆ ಬರಲಿದೆ.

ಈ ಬೆಲೆಯೇರಿಕೆಯ ಕಾಲದಲ್ಲಿ ಈ ಯೋಜನೆಯು ಕೇವಲ ಬಡವರಿಗಷ್ಟೇ ಅಲ್ಲದೆ ಮಧ್ಯಮ ವರ್ಗಕ್ಕೂ ಆಶಾಕಿರಣದಂತೆ ಗೋಚರಿಸತೊಡಗಿದೆ. ದುಡಿಯಲು ಪಟ್ಟಣಗಳಿಗೆ ಹೋಗುವ ಮಹಿಳೆಯರಿಗಾಗಿ ಉಚಿತ ಬಸ್‌ ಪ್ರಯಾಣವನ್ನು ನೀಡಿದ್ದ ಸಿದ್ಧರಾಮಯ್ಯನವರ ಸರ್ಕಾರ ಈಗ ಹಣವನ್ನೂ ನೀಡುವುದರೊಂದಿಗೆ ಮಹಿಳೆಯರ ಕಣ್ಮಣಿ ಸರ್ಕಾರವಾಗುವತ್ತ ದಾಪುಗಾಲಿಡುತ್ತಿದೆ.

ಸಿಎಂ ತವರು ಜಿಲ್ಲೆ ಮೈಸೂರಿನಿಂದಲೇ ಈ ಬಹು ನಿರೀಕ್ಷಿತ ಯೋಜನೆಗೆ ಚಾಲನೆ ನೀಡಲಾಗುತ್ತಿದ್ದು, ಬೆಳಗ್ಗೆ 11 ಗಂಟೆಗೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗೃಹಲಕ್ಷ್ಮಿಗೆ ಚಾಲನೆ ನೀಡಿಲಿದ್ದಾರೆ.

ಕುಟುಂಬ ನಿರ್ವಹಣೆಯ ಹೊಣೆಹೊತ್ತ ನಾಡಿನ ಕೋಟಿಗೂ ಅಧಿಕ ಮಹಿಳೆಯರಿಗೆ ಆರ್ಥಿಕ ನೆರವು ನೀಡಿ, ಬೆಲೆಯೇರಿಕೆಯ ಸಂಕಷ್ಟಗಳ ನಡುವೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ಅವರ ಕನಸನ್ನು ನನಸಾಗಿಸುವ ಗೃಹಲಕ್ಷ್ಮಿ ಯೋಜನೆ ಜಾರಿಗೆ ಕ್ಷಣಗಣನೆ ಆರಂಭಗೊಂಡಿದೆ. ಮಹಿಳಾ ಸಬಲೀಕರಣದ ನಮ್ಮ ಪ್ರಯತ್ನಕ್ಕೆ ಕೈಜೋಡಿಸುವಂತೆ ಸಿಎಂ ಮನವಿ ಮಾಡಿದ್ದಾರೆ.

“ಗೃಹಲಕ್ಷ್ಮಿ” ಯೋಜನೆಗೆ ಈ ವರೆಗೆ 1.08 ಕೋಟಿ ಮಹಿಳೆಯರು ಯಶಸ್ವಿಯಾಗಿ ನೋಂದಣಿ ಮಾಡಿಕೊಂಡಿದ್ದು, ಇಂದೇ ಎಲ್ಲಾ ನೋಂದಾಯಿತ ಮಹಿಳೆಯರ ಬ್ಯಾಂಕ್ ಖಾತೆಗೆ ಮಾಸಿಕ ರೂ. 2,000 ನೇರ ವರ್ಗಾವಣೆ ಆಗಲಿದೆ.

ಪ್ರಸಕ್ತ ಸಾಲಿನಲ್ಲಿ ಈ ಕಾರ್ಯಕ್ರಮಕ್ಕಾಗಿ ರೂ. 17,500 ಕೋಟಿ ಮೀಸಲಿಡಲಾಗಿದೆ. ರಾಜ್ಯದ 10,400 ಸ್ಥಳಗಳಲ್ಲಿ ಏಕಕಾಲಕ್ಕೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಗಲಿದೆ. ಇದರ ಜೊತೆಗೆ ಈ ಕಾರ್ಯಕ್ರಮದ ನೇರಪ್ರಸಾರ ಕೂಡ ಇರಲಿದೆ.

ಗ್ರಾಪಂ, ನಗರಪಾಲಿಕೆ, ನಗರಸಭೆ ಮಟ್ಟದಲ್ಲಿ ಈ ಕಾರ್ಯಕ್ರಮ ನೇರ ಪ್ರಸಾರವಾಗುತ್ತಿರುವ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸೇರುವ ನಿರೀಕ್ಷೆ ಇದೆ. ಪ್ರತಿ ಜಿಲ್ಲೆಯ ಒಂದೆರಡು ಗ್ರಾಮ ಪಂಚಾಯಿತಿಗಳಲ್ಲಿ ಫಲಾನುಭವಿಗಳೊಂದಿಗೆ ಸಂವಾದ ಕೂಡ ನಡೆಸಲಾಗುತ್ತಿದ್ದು, ಪ್ರತಿ ಪಂಚಾಯಿತಿಗೂ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಮುಖ್ಯ ವೇದಿಕೆಗೆ 140 ಅಡಿ ಸ್ಕ್ರೀನ್ ಅಳವಡಿಸಲಾಗಿದೆ.

ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಶೇ 80ರಷ್ಟು ನೋಂದಣಿಯಾಗಿವೆ. ರಾಜ್ಯದ ಅತ್ಯಂತ ದೊಡ್ಡ ಜಿಲ್ಲೆಯಾಗಿರುವ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ತವರು ಜಿಲ್ಲೆ ಬೆಳಗಾವಿಯಲ್ಲಿ ಸುಮಾರು 10 ಲಕ್ಷ ಫಲಾನುಭವಿಗಳು ಅಂದರೆ ಶೇ. 95ರಷ್ಟು ಜನರು ನೋಂದಣಿ ಮಾಡಿ ಮಾಡಿಕೊಂಡಿದ್ದಾರೆ.


Related Articles

ಇತ್ತೀಚಿನ ಸುದ್ದಿಗಳು