Friday, June 14, 2024

ಸತ್ಯ | ನ್ಯಾಯ |ಧರ್ಮ

ಹೆಚ್.ಡಿ.ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಇಂದು(ಬುಧವಾರ) ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ತಡರಾತ್ರಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಹೆಚ್.ಡಿ.ಕುಮಾರ ಸ್ವಾಮಿ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆ ಇಂದು ಅವರ ಕೋಲಾರ ಭೇಟಿ ರದ್ದು ಮಾಡಲಾಗಿದೆ. ಕೋಲಾರದ ಶ್ರೀನಿವಾಸಪುರದಲ್ಲಿ ಕುಮಾರಸ್ವಾಮಿ ಅವರು ರೈತರ ಜಮೀನುಗಳಿಗೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತು. ಅರಣ್ಯ ಇಲಾಖೆ ಒತ್ತುವರಿ ತೆರವು ವೇಳೆ ರೈತರ ಬೆಳೆಗಳು ನಷ್ಟವಾಗಿತ್ತು.

ಈ ಪರಿಣಾಮ ರೈತರೊಂದಿಗೆ ಮಾತನಾಡಲು ಹೆಚ್.ಡಿ.ಕುಮಾರಸ್ವಾಮಿ ಆಗಮಿಸಲಿದ್ದರು. ಆದರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾದ ಹಿನ್ನೆಲೆ ಕೋಲಾರ ಪ್ರವಾಸ ರದ್ದಾಗಿದೆ.

ಇನ್ನು ಕುಮಾರಸ್ವಾಮಿ ಆರೋಗ್ಯದ ಬಗೆಗಿನ ಮಾಹಿತಿ ಇನ್ನೂ ಹೊರಬಂದಿಲ್ಲ.

Related Articles

ಇತ್ತೀಚಿನ ಸುದ್ದಿಗಳು