ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

31 ವರ್ಷಗಳ ಹಿಂದಿನ ಪ್ರಕರಣ ಕೊನೆಗೂ ತೀರ್ಮಾನ, ಒಂದೇ ಪ್ರಕರಣದಲ್ಲಿ 215 ಮಂದಿಗೆ ಶಿಕ್ಷೆ

PPeepal Media Desk

Peepal Media Desk ದೇಶ

• 2 ನಿಮಿಷದ ಓದು

31 ವರ್ಷಗಳ ಹಿಂದಿನ ಪ್ರಕರಣ ಕೊನೆಗೂ ತೀರ್ಮಾನ, ಒಂದೇ ಪ್ರಕರಣದಲ್ಲಿ 215 ಮಂದಿಗೆ ಶಿಕ್ಷೆ

ರಕ್ಷಣೆ ನೀಡಬೇಕಾದ ಪೊಲೀಸರೇ ತಪಾಸಣೆಯ ಹೆಸರಿನಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಎಸಗಿದ್ದಾರೆ. ಒಬ್ಬರಲ್ಲ, ಇಬ್ಬರಲ್ಲ, 18 ಮಹಿಳೆಯರ ಮೇಲೆ ಒಟ್ಟಿಗೆ ಅತ್ಯಾಚಾರ ನಡೆದಿದೆ. 31 ವರ್ಷಗಳ ನಂತರ ನ್ಯಾಯಾಲಯದ ಮೊರೆ ಹೋದ ಸಂತ್ರಸ್ತರಿಗೆ ನ್ಯಾಯ ಸಿಕ್ಕಿದೆ.

ಈ ಪ್ರಕರಣದಲ್ಲಿ 215 ಮಂದಿಗೆ ಏಕಕಾಲಕ್ಕೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. ಈ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಇದು 1992ರ ಘಟನೆ. ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಕಲ್ವರಾಯನ ಬೆಟ್ಟದಲ್ಲಿ ಈ ಕ್ರೂರ ಘಟನೆ ನಡೆದಿದೆ. ವಾಸಟ್ಟಿ ಕಲ್ವರಾಯನ ಬೆಟ್ಟಗಳ ಹಸಿರು ಮರಗಳ ನಡುವೆ ಇರುವ ಒಂದು ಸಣ್ಣ ಹಳ್ಳಿ. 1992ರ ಜೂನ್ 20ರಂದು ಗ್ರಾಮದಲ್ಲಿ ರಕ್ತ ಚಂದನದ ಕಳ್ಳಸಾಗಣೆ ನಡೆಯುತ್ತಿರುವುದನ್ನು ಪರಿಶೀಲಿಸಲು ಪೊಲೀಸರು ಬಂದಿದ್ದರು.

ಜೂನ್ 20, 1992ರಂದು, 155 ಅರಣ್ಯ ಸಿಬ್ಬಂದಿ, 108 ಪೊಲೀಸರು ಮತ್ತು ಆರು ಕಂದಾಯ ಅಧಿಕಾರಿಗಳು ಒಟ್ಟು 269 ಜನರು ಪ್ರತಿ ಮನೆಗೆ ತೆರಳಿ ಪರಿಶೀಲಿಸಿದರು. ಪೊಲೀಸರು ತಮ್ಮ ಶೋಧದ ವೇಳೆ ಕೆಲವು ರಕ್ತ ಚಂದನದ ಮರದ ದಿಮ್ಮಿಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು 90 ಮಹಿಳೆಯರು ಸೇರಿದಂತೆ 133 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಅಷ್ಟಕ್ಕೇ ನಿಲ್ಲದೆ ತಮಗೆ ಬೇಕಾದಂತೆ ನಡೆದುಕೊಂಡರು.

18 ಬುಡಕಟ್ಟು ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ನಡೆಸಿದ ಪೊಲೀಸರು ಗ್ರಾಮಸ್ಥರನ್ನು ಚಿತ್ರ ಹಿಂಸೆಗೆ ಒಳಪಡಿಸಿದರು. ಸಂತ್ರಸ್ತರು ಆರೂರು ಪೊಲೀಸರನ್ನು ಸಂಪರ್ಕಿಸಿದರೂ ಅವರೆಲ್ಲರೂ ಒಂದೇ ಎಂಬ ಕಾರಣಕ್ಕೆ ಪ್ರಕರಣ ದಾಖಲಿಸಿಕೊಂಡಿರಲಿಲ್ಲ. ನಂತರ ಸಂತ್ರಸ್ತರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಬೇಕಾಯಿತು.

ಪೊಲೀಸರ ವಿರುದ್ಧ ಪ್ರಕರಣ ದಾಖಲಿಸಿದ ಬಳಿಕ ತನಿಖೆ ಪ್ರಗತಿ ಕಾಣದ ಕಾರಣ ಸಂತ್ರಸ್ತರು ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.1995ರ ಫೆ.24ರಂದು ಪೀಠವು ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿತು. ತನಿಖೆಯ ಭಾಗವಾಗಿ ಸಿಬಿಐ ಅಧಿಕಾರಿಗಳು ವಾಸಟ್ಟಿಯಲ್ಲಿ ಅವಾಂತರ ಸೃಷ್ಟಿಸಿದ್ದ ಒಟ್ಟು 269 ಮಂದಿಯನ್ನು ಬಂಧಿಸಿದ್ದಾರೆ. ಅಂತಿಮವಾಗಿ ಧರ್ಮಪುರಿ ಜಿಲ್ಲಾ ನ್ಯಾಯಾಲಯವು 29 ಸೆಪ್ಟೆಂಬರ್ 2011ರಂದು ತೀರ್ಪು ನೀಡಿತು.

269 ​​ಆರೋಪಿಗಳ ಪೈಕಿ 215 ಮಂದಿ ತೀರ್ಪಿನ ವೇಳೆಗೆ ಬದುಕುಳಿದಿದ್ದು, ತಪ್ಪಿತಸ್ಥರೆಂದು ಸಾಬೀತಾಗಿದೆ. ಅವರಲ್ಲಿ 12 ಮಂದಿಗೆ ಹತ್ತು ವರ್ಷ ಜೈಲು, ಐದರಿಂದ ಏಳು ವರ್ಷ ಹಾಗೂ ಉಳಿದವರಿಗೆ ಒಂದರಿಂದ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಈ ತೀರ್ಪನ್ನು ಪ್ರಶ್ನಿಸಿ ಆರೋಪಿಗಳು ಮದ್ರಾಸ್ ಹೈಕೋರ್ಟ್ ಮೊರೆ ಹೋಗಿದ್ದರು.

ಆದರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ್ಯಾಯಮೂರ್ತಿ ವೇಲಮುರುಗನ್ ಅವರು ಕ್ರಾಂತಿಕಾರಿ ತೀರ್ಪು ನೀಡಿದ್ದಾರೆ. ಈ ಪ್ರಕರಣದಲ್ಲಿ 215 ಮಂದಿಗೆ ಜೈಲು ಶಿಕ್ಷೆ ವಿಧಿಸಿ ಕೆಳ ನ್ಯಾಯಾಲಯ ನೀಡಿದ್ದ ತೀರ್ಪನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಇದಲ್ಲದೆ 18 ಸಂತ್ರಸ್ತ ಮಹಿಳೆಯರಿಗೆ ತಲಾ 10 ಲಕ್ಷ ರೂ.ಗಳನ್ನು ನೀಡುವಂತೆ ಕೋರ್ಟ್ ಆದೇಶಿಸಿದೆ. ಸರಕಾರದಿಂದ ರೂ.5 ಲಕ್ಷ ಹಾಗೂ ಆರೋಪಿಗಳಿಂದ ರೂ.5 ಲಕ್ಷ ವಸೂಲಿ ಮಾಡಬೇಕು ಎಂದು ಸ್ಪಷ್ಟಪಡಿಸಿದೆ.

ಮೇಲಾಗಿ ಅಂದಿನ ಧರ್ಮಪುರಿ ಜಿಲ್ಲಾಧಿಕಾರಿ, ಎಸ್ಪಿ ಹಾಗೂ ಅರಣ್ಯ ಇಲಾಖೆ ಅಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಿದೆ. ಒಂದೇ ಪ್ರಕರಣದಲ್ಲಿ ಇಷ್ಟೊಂದು ಮಂದಿಗೆ ಶಿಕ್ಷೆಯಾಗಿರುವುದು ದೇಶದ ಇತಿಹಾಸದಲ್ಲಿ ಇದೇ ಮೊದಲು. ಈ ಘಟನೆ ನಡೆದು ಮೂರು ದಶಕಗಳ ನಂತರ ಇವರಿಗೆ ಶಿಕ್ಷೆಯಾಗಿರುವುದು ಅಪರೂಪದ ಘಟನೆ ಎನ್ನುವುದು ಗಮನಾರ್ಹ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು