Wednesday, June 26, 2024

ಸತ್ಯ | ನ್ಯಾಯ |ಧರ್ಮ

ಜನತಾ ದರ್ಶನದಲ್ಲಿ ಜಟಾಪಟಿ: ಎಸ್​ ಮುನಿಸ್ವಾಮಿ, ಎಸ್.ಎನ್ ನಾರಾಯಣಸ್ವಾಮಿ ವಿರುದ್ಧ FIR

ಕೋಲಾರ: ಸಂಸದ‌ ಹಾಗೂ ಶಾಸಕರು ಪರಸ್ಪರರ ಮೇಲೆ ದೂರು ದಾಖಲಿಸಿದ್ದಾರೆ. ಸಂಸದ ಮುನಿಸ್ವಾಮಿ, ನಾರಾಯಣಸ್ವಾಮಿ ಇಬ್ಬರ ಮೇಲೂ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧವೂ FIR ದಾಖಲಾಗಿದೆ. ಶಾಸಕರ‌ ವಿರುದ್ದ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಬಾಲಾಜಿ ದೂರು ಸಲ್ಲಿಸಿದ್ದು ಎಫ್ಐಆರ್ ದಾಖಲಾಗಿದೆ. ಬಂಗಾರಪೇಟೆ ಶಾಸಕರ ದೂರಿನ ಅನ್ವಯ ಸಂಸದರ ಮೇಲೆ FIR ದಾಖಲಾಗಿದೆ.

ಕೋಲಾರದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದ ವೇದಿಕೆಯಲ್ಲಿ ಶಾಸಕ ನಾರಾಯಣಸ್ವಾಮಿ ಹಾಗೂ ಸಂಸದ ಮುನಿಸ್ವಾಮಿ ಮಧ್ಯೆ ಜಗಳ ನಡೆದಿತ್ತು. ಅಲ್ಲದೆ ಸ್ಪೀಕರ್ ಹಾಗೂ ರಾಜ್ಯಪಾಲರಿಗೆ ಮುನಿಸ್ವಾಮಿ ಅವರು ದೂರು ನೀಡಿದ್ದರು. ಸದ್ಯ ಈಗ ಇಬ್ಬರ ವಿರುದ್ಧವೂ FIR ದಾಖಲಾಗಿದೆ.

ಅರಣ್ಯ ಇಲಾಖೆ ತೆರವು ಕಾರ್ಯಾಚರಣೆ ವಿಚಾರದಲ್ಲಿ ಮುನಿಸ್ವಾಮಿ ವಿರುದ್ಧ ಸೆಪ್ಟೆಂಬರ್ ತಿಂಗಳಲ್ಲಿ ಒಂದು ಎಫ್ಐಆರ್ ಆಗಿತ್ತು. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಮುನಿಸ್ವಾಮಿ ಅವರನ್ನು ಎ1 ಆರೋಪಿಯಾಗಿ ಗುರುತಿಸಲಾಗಿತ್ತು. ಇದೀಗ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು