Thursday, June 27, 2024

ಸತ್ಯ | ನ್ಯಾಯ |ಧರ್ಮ

ನಕಲಿ ಚಿನ್ನ ಅಡವಿಟ್ಟ ಪ್ರಕರಣ: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಮಂಜುನಾಥ್ ಗೌಡ ನಿವಾಸದ ಮೇಲೆ ಇಡಿ ದಾಳಿ

ಶಿವಮೊಗ್ಗ: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಆರ್.ಎಂ.ಮಂಜುನಾಥ್ ಗೌಡ ಅವರ ನಿವಾಸ ಹಾಗೂ ತೋಟದ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ.

2014ರಲ್ಲಿ ಬೆಳಕಿಗೆ ಬಂದ ನಕಲಿ ಚಿನ್ನಾಭರಣ ಅಡಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಮತ್ತು ತೀರ್ಥಹಳ್ಳಿಯಲ್ಲಿರುವ ಮಂಜುನಾಥ್ ಗೌಡ ಅವರ ನಿವಾಸಗಳ ಮೇಲೆ ಬೆಳಗ್ಗೆಯಿಂದಲೇ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ತೀರ್ಥಹಳ್ಳಿಯಲ್ಲಿರುವ ಅವರ ಎರಡು ಮತ್ತು ಶಿವಮೊಗ್ಗ ನಗರದ ಶರಾವತಿ ನಗರದಲ್ಲಿನ ಒಂದು ಮನೆ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.

15 ಅಧಿಕಾರಿಗಳ ತಂಡ ದಾಳಿ ನಡೆಸುತ್ತಿದ್ದು, ಶಸ್ತ್ರಸಜ್ಜಿತ ಪೊಲೀಸರು ಆವರಣದಲ್ಲಿ ಕಾವಲು ಕಾಯುತ್ತಿದ್ದಾರೆ.

ಡಿಸಿಸಿ ಬ್ಯಾಂಕ್ ನ ಶಿವಮೊಗ್ಗ ನಗರ ಘಟಕದಲ್ಲಿ 2012ರಿಂದ 2014ರ ನಡುವೆ ನಕಲಿ ಚಿನ್ನಾಭರಣ ವಂಚನೆ ನಡೆದಿದೆ.

ಅಧಿಕಾರಿಗಳು ಅಂದಿನ ಅಧ್ಯಕ್ಷ ಮಂಜುನಾಥ ಗೌಡ, ಉಪಾಧ್ಯಕ್ಷ, ಶಾಖಾ ವ್ಯವಸ್ಥಾಪಕ ಹಾಗೂ ಪ್ರಧಾನ ವ್ಯವಸ್ಥಾಪಕರನ್ನು ಬಂಧಿಸಿದ್ದರು. 32 ಖಾತೆಗಳು, ಖಾತೆದಾರರ ವಿವರಗಳು ಮತ್ತು ಕೆವೈಸಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಾಹಿತಿ ನೀಡುವಂತೆ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ತಿಳಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು