Thursday, June 13, 2024

ಸತ್ಯ | ನ್ಯಾಯ |ಧರ್ಮ

ತೀರ್ಥಹಳ್ಳಿ : ಒಂದೇ ಕುಟುಂಬದ ಮೂವರ ಸಜೀವ ದಹನ ; ಆತ್ಮಹತ್ಯೆ ಶಂಕೆ!

ತೀರ್ಥಹಳ್ಳಿ : ತೀರ್ಥಹಳ್ಳಿ ತಾಲೂಕಿನ ಅರಳಸುರಳಿ ಸಮೀಪ ಕೇಕೋಡ್ ಎಂಬಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನವಾದ ದುರ್ಘಟನೆ ಸುತ್ತಲಿನ ಗ್ರಾಮಸ್ಥರನ್ನು ಕಂಗೆಡಿಸಿದೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿರಬಹುದು ಎಂದು ಸ್ಥಳೀಯರು ಊಹಿಸಿದ್ದಾರೆ.

ತೀರ್ಥಹಳ್ಳಿಯ ಕೇಕೋಡ್ ಗ್ರಾಮದ ಒಂದೇ ಕುಟುಂಬದ ಮೂವರು ಸಜೀವ ದಹನವಾಗಿದ್ದು, ಇದು ಸ್ಪಷ್ಟವಾಗಿ ಪೂರ್ವನಿಯೋಜಿತ ಘಟನೆ, ಹಾಗಾಗಿ ಇದನ್ನು ಆತ್ಮಹತ್ಯೆ ಇರಬಹುದು ಎಂದೇ ಶಂಕಿಸಲಾಗಿದೆ. ಕುಟುಂಬದ ಇನ್ನೋರ್ವ ಅಗ್ನಿ ದುರಂತಕ್ಕೆ ಒಳಗಾಗಿದ್ದು, ಅರೆಬರೆ ಸುಟ್ಟ ಸ್ಥಿತಿಯಲ್ಲಿ ಇರುವ ಇನ್ನೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೇಲ್ನೋಟಕ್ಕೆ ಮನೆಯ ಒಳಗಿನ ಕೋಣೆಯೊಳಗೆ ಕಟ್ಟಿಗೆಗಳನ್ನು ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಬೆಂಕಿ ದುರಂತದಲ್ಲಿ ಕುಟುಂಬದ ಹಿರಿಯರಾದ ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (65), ಪತ್ನಿ ನಾಗರತ್ನಾ (55), ಹಿರಿಯ ಪುತ್ರ ಶ್ರೀರಾಮ್ (30) ಸಜೀವವಾಗಿ ಬೆಂಕಿಗೆ ಆಹುತಿಯಾಗಿದ್ದಾರೆ. ಇನ್ನೋರ್ವ ಪುತ್ರ ಭರತ್ (28) ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ತೀರ್ಥಹಳ್ಳಿ ಹೊಸನಗರ ಮಾರ್ಗ ಮಧ್ಯೆ ಬರುವ ಕೋಕೋಡ್ ಗ್ರಾಮದಲ್ಲಿ ಗ್ರಾಮಸ್ಥರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಒಂದೇ ಕುಟುಂಬದ ಮೂವರ ಸಜೀವ ದಹನ ಘಟನೆ ಇಡೀ ಗ್ರಾಮವನ್ನೇ ಕಂಗೆಡಿಸಿದೆ. ಘಟನೆಗೆ ನಿಖರವಾದ ಕಾರಣ ಏನು ಎಂದು ತಿಳಿದು ಬಂದಿಲ್ಲ. ಮೇಲ್ನೋಟಕ್ಕೆ ಇದು ಮನೆಯ ಆರ್ಥಿಕ ಬಿಕ್ಕಟ್ಟು ಈ ಮಟ್ಟಕ್ಕೆ ಆತ್ಮಹತ್ಯೆಗೆ ಇಳಿಯುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಅಂದಾಜಿಸಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ತನಿಖೆಗಳು ನಡೆಯಬೇಕಿದೆ. ಅಗ್ನಿಶಾಮಕದಳದ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು