ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮುಜರಾಯಿ ಇಲಾಖೆಯ 34,000 ಕ್ಕೂ ಹೆಚ್ಚು ಅರ್ಚಕರಿಗೆ ರಾಜ್ಯ ಸರ್ಕಾರದಿಂದ ವಿಶೇಷ ಅನುಧಾನ

PPeepal Media Desk

Peepal Media Desk • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಮುಜರಾಯಿ ಇಲಾಖೆಯ 34,000 ಕ್ಕೂ ಹೆಚ್ಚು ಅರ್ಚಕರಿಗೆ ರಾಜ್ಯ ಸರ್ಕಾರದಿಂದ ವಿಶೇಷ ಅನುಧಾನ

ರಾಜ್ಯಾದ್ಯಂತ ‘ಸಿ’ ವರ್ಗದ ದೇವಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 34,000 ಕ್ಕೂ ಹೆಚ್ಚು ಅರ್ಚಕರಿಗೆ ಕುಟುಂಬ ಸದಸ್ಯರಿಗೆ ವಿಮೆ ಮತ್ತು ಶೈಕ್ಷಣಿಕ ಅನುದಾನ ಸೇರಿದಂತೆ ಪ್ರಯೋಜನವಾಗಲು ರಾಜ್ಯ ಸರ್ಕಾರ ಶುಕ್ರವಾರ ಕಲ್ಯಾಣ ಕ್ರಮಗಳನ್ನು ಪ್ರಕಟಿಸಿದೆ.

ಅದರಂತೆ ‘ಬಿ’ ಮತ್ತು ‘ಸಿ’ ವರ್ಗದ ದೇವಾಲಯಗಳಲ್ಲಿ ಕೆಲಸ ಮಾಡುವ ಅರ್ಚಕರ ಮಕ್ಕಳು ಯಾವ ಕೋರ್ಸ್‌ಗಳಿಗೆ ಅನುಗುಣವಾಗಿ ವಾರ್ಷಿಕ ಶಿಕ್ಷಣ ಅನುದಾನವನ್ನು ₹ 5,000 ರಿಂದ ₹ 50,000 ವರೆಗೆ ನೀಡಲು ನಿರ್ಧರಿಸಿದ್ದೇವೆ. ವಿದೇಶದಲ್ಲಿ ಶಿಕ್ಷಣ ಪಡೆಯುವವರಿಗೆ ಒಂದು ಬಾರಿ ₹ 1 ಲಕ್ಷ ಅನುದಾನ ನೀಡಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಗುರುತಿನ ಚೀಟಿ ನೀಡುವುದರ ಜೊತೆಗೆ ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಕೆಲಸ ಮಾಡುವ ಎಲ್ಲಾ ಅರ್ಚಕರು ಮತ್ತು ನೌಕರರಿಗೆ ಆಯುಷ್ಮಾನ್ ಭಾರತ್ ಕಾರ್ಡ್ ನೀಡಲಾಗುವುದು ಎಂದು ಅವರು ಹೇಳಿದರು.

‘ಸಿ’ ವರ್ಗದ ದೇವಸ್ಥಾನಗಳಿಗೆ ನೀಡುತ್ತಿರುವ ವಾರ್ಷಿಕ ತಸ್ತಿಕ್ ಮೊತ್ತವನ್ನು ವಾರ್ಷಿಕ ₹ 60,000ದಿಂದ ₹ 1.2 ಲಕ್ಷಕ್ಕೆ ಹೆಚ್ಚಿಸಬೇಕು ಮತ್ತು ‘ಸಿ’ ವರ್ಗದ ದೇವಾಲಯಗಳಲ್ಲಿನ ಅರ್ಚಕರಿಗೆ ತಿಂಗಳಿಗೆ ₹ 10,000 ಗೌರವಧನ ನೀಡಬೇಕೆಂಬ ಬೇಡಿಕೆಯ ನಡುವೆಯೇ ಈ ಘೋಷಣೆ ಮಾಡಲಾಗಿದೆ . ಆದರೆ, ಇದು ಹೆಚ್ಚಿನ ವೆಚ್ಚವನ್ನು ಒಳಗೊಂಡಿರುವ ಕಾರಣ, ಮುಖ್ಯಮಂತ್ರಿಗಳು ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು ಎಂದು ರಾಮಲಿಂಗಾರೆಡ್ಡಿಯವರು ಹೇಳಿದ್ದಾರೆ.

ಎಲ್ಲಾ ಪ್ರಮುಖ ದೇವಾಲಯಗಳಲ್ಲಿ ಅನ್ನಸಂತರ್ಪಣೆ ಕೊಠಡಿಗಳನ್ನು ಸ್ಥಾಪಿಸಲಾಗುತ್ತಿದ್ದು, ಕೊಠಡಿ ಕಾಯ್ದಿರಿಸುವಿಕೆ, ಸೇವೆಗಾಗಿ ಕಾಯ್ದಿರಿಸುವಿಕೆ ಮತ್ತು ದರ್ಶನದ ಸಮಯದ ಮಾಹಿತಿಗಾಗಿ ಕಾಲ್ ಸೆಂಟರ್ ಸ್ಥಾಪಿಸಲು ಪರಿಷತ್ತು ಶುಕ್ರವಾರ ಅನುಮೋದನೆ ನೀಡಿದೆ ಎಂದು ಸಚಿವರು ಹೇಳಿದರು.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು