ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

ರಾಜ್ಯ ಬಿಜೆಪಿಗೆ ನಾರಿಶಕ್ತಿ? ಶೋಭಾ ಕರಂದ್ಲಾಜೆ ಏರಲಿದ್ದಾರೆಯೇ ಅಧ್ಯಕ್ಷ ಪಟ್ಟ?

PPeepal Media Desk

Peepal Media Desk ರಾಜಕೀಯ

• 1 ನಿಮಿಷದ ಓದು

ರಾಜ್ಯ ಬಿಜೆಪಿಗೆ ನಾರಿಶಕ್ತಿ? ಶೋಭಾ ಕರಂದ್ಲಾಜೆ ಏರಲಿದ್ದಾರೆಯೇ ಅಧ್ಯಕ್ಷ ಪಟ್ಟ?

ಬೆಂಗಳೂರು: ರಾಜ್ಯ ಬಿಜೆಪಿಗೆ ಕೊನೆಗೂ ಅಧ್ಯಕ್ಷರನ್ನು ಕಾಣುವ ಯೋಗ ಬಂದಂತಿದೆ. ಚುನಾವಣೆ ನಂತರ ಕಲಕಿದ ನೀರಾಝ್ರಿಯಾನಂತೆ ರಾಡಿಯಾಗಿದ್ದ ಬಿಜೆಪಿ ಈಗ ತಿಳಿಯಾಗುತ್ತಿರುವಂತೆಯೇ ಕೇಂದ್ರ ನಾಯಕರು ಅಖಾಡಕ್ಕೆ ಇಳಿದು ಅಧ್ಯಕ್ಷರ ಹೆಸರನ್ನು ಘೋಷಿಸುವ ಎಲ್ಲಾ ಲಕ್ಷಣಗಳು ಕಾಣತೊಡಗಿವೆ.

ಬಿಜೆಪಿ ಅಧ್ಯಕ್ಷ ಪಟ್ಟಕ್ಕೆ ಪಕ್ಷದಲ್ಲಿ ದೊಡ್ಡ ಸ್ಪರ್ಧೆಯೇ ಇದ್ದು ಹಲವಾರು ಕುರ್ಚಿಯ ಮೇಲೆ ಕಣ್ಣಿಟ್ಟು ತುದಿಗಾಲಿನಲ್ಲಿ ಕಾಯುತ್ತಿದ್ದಾರೆ. ಆದರೆ ರಾಜ್ಯ ರಾಜಕಾರಣದಲ್ಲಿ ಇರುವ ಯಾವುದೇ ನಾಯಕನನ್ನು ಅಧ್ಯಕ್ಷನನ್ನಾಗಿ ಮಾಡಿದರು ಉಳಿದವರು ತಿರುಗಿಬೀಳುವ ಲಕ್ಷಣಗಳು ಕೂಡಾ ಇವೆ.

ಹೀಗಾಗಿಯೇ ಬಿಜೆಪಿ ಕೇಂದ್ರ ರಾಜಕಾರಣದಲ್ಲಿರುವ ಕರಂದ್ಲಾಜೆಯವರನ್ನು ಅಧ್ಯಕ್ಷರನ್ನಾಗಿ ಮಾಡುವ ಆಲೋಚನೆಯಲ್ಲಿದೆ ಎನ್ನಲಾಗುತ್ತಿದೆ. ಈ ಮೂಲಕ ಯಡಿಯೂರಪ್ಪ ಬಣವನ್ನೂ ಮೆಚ್ಚಿಸಿದಂತೆ ಆಗುತ್ತದೆ ಎನ್ನುವುದು ಹೈಕಮಾಂಡ್ ಯೋಚನೆ.

ಬಿ ವೈ ವಿಜಯೇಂದ್ರ ಬಿಜೆಪಿಯ ರಾಜ್ಯಾಧ್ಯಕ್ಷ ಪಟ್ಟದ ಆಕಾಂಕ್ಷೆ ಹೊಂದಿದ್ದರೂ ಬಿಜೆಪಿ ಮೈಸೂರು ಭಾಗದಲ್ಲಿ ಒಕ್ಕಲಿಗ ಮತದ ಮೇಲೆ ಕಣ್ಣಿಟ್ಟಿರುವುದರಿಂದಾಗಿ ಯಡಿಯೂರಪ್ಪ ಬಣದ ಶೋಭಾ ಕರಂದ್ಲಾಜೆಯವರನ್ನು ಅಧ್ಯಕ್ಷರಾಗಿ ನೇಮಿಸಲು ಹೊರಟಿದೆ ಎನ್ನಲಾಗಿದೆ. ಅಲ್ಲದೆ ಬಿಜೆಪಿಯಲ್ಲಿ ಈಗಾಗಲೇ ಲಿಂಗಾಯತ ನಾಯಕರ ನಡುವೆ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಇರುವುದರಿಂದಲೂ ಅವರಲ್ಲಿ ಯಾರಿಗೂ ಕೊಡದೆ ಮತ್ತೆ ಭಿನ್ನಮತೀಯ ಚಟುವಟಿಕೆ ಭುಗಿಲೇಳದ ಹಾಗೆ ನೋಡಿಕೊಳ್ಳಲು ಪಕ್ಷ ಯೋಚಿಸಿದೆ.

ಇದೆಲ್ಲ ಹಿನ್ನೆಲೆಯಲ್ಲಿ ಇನ್ನೆರಡು ದಿನಗಳಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನವನ್ನು ಶೋಭಾ ಕರಂದ್ಲಾಜೆ ಅಲಂಕರಿಸಲಿದ್ದಾರೆ. ಇತ್ತೀಚೆಗೆ ಮಹಿಳಾ ಮೀಸಲಾತಿ ಮಸೂದೆಯನ್ನು ಅನುಮೋದಿಸಿರುವ ಕೇಂದ್ರ ಅದರಿಂದ ಸಾಧ್ಯವಿರುವಷ್ಟು ಪ್ರಚಾರ ಪಡೆಯುವ ಸಲುವಾಯೂ ಹಲವೆಡೆ ಮಹಿಳೆಯರನ್ನು ಮುನ್ನೆಲೆಗೆ ತರುತ್ತಿದೆ.

ರಾಜ್ಯಾಧ್ಯಕ್ಷರ ಆಯ್ಕೆಯ ನಂತರ ದೊಡ್ಡ ಮಟ್ಟದಲ್ಲಿ ಭಿನ್ನಮತ ಎದ್ದಲ್ಲಿ ಅವರಲ್ಲಿ ಒಬ್ಬರಿಗೆ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗುವ ಅವಕಾಶವನ್ನು ಪಕ್ಷ ನೀಡಲಿದೆ. ಈಗಾಗಲೇ ಸಾಕಷ್ಟು ದೊಡ್ಡ ಮಟ್ಟದಲ್ಲಿ ಕೇಂದ್ರ ನಾಯಕತ್ವದ ವಿರುದ್ಧ ದನಿಯೆತ್ತಿದ್ದ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರನ್ನು ಹೈಕಮಾಂಡ್ ತನ್ನ ಬಳಿಗೆ ಕರೆಸಿಕೊಂಡು ತಮಿಳುನಾಡಿನ ಸರ್ಕಾರದ ವಿರುದ್ಧ ಇರುವ ಆರೋಪಗಳ ಪಟ್ಟಿಯನ್ನು ತಯಾರಿಸಿ ತರುವಂತೆ ಚೆನ್ನೈ ವಿಮಾನ ಹತ್ತಿಸಿ ಕಳುಹಿಸಿದೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು