ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮುರುಘಾ ಶರಣರ ವಿರುದ್ಧ ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲು

PPeepal Media

Peepal Media • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಮುರುಘಾ ಶರಣರ ವಿರುದ್ಧ ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲು

ಮೈಸೂರು: ʼಹಣ್ಣು ಸಿಹಿಯಲ್ಲಿ ಮತ್ತು ಬರುವ ಔಷಧಿ ಕೊಟ್ಟು ಮಠದ ಉಚಿತ ಹಾಸ್ಟೆಲ್‌ನಲ್ಲಿರುವ ಪ್ರೌಢಶಾಲೆ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗಿದ್ದಾರೆʼ ಎಂದು ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗದ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರ ವಿರುದ್ಧ ಫೊಕ್ಸೊ ಕಾಯ್ದೆಯಡಿ ನಜರಾಬಾದ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಚಿತ್ರದುರ್ಗದ ಬೃಹನ್ಮಠದ ಆಡಳಿತದಲ್ಲಿರುವ ವಿದ್ಯಾರ್ಥಿನಿಲಯದಲ್ಲಿನ ಹಲವು ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಹಲವು ದಿನಗಳಿಂದಲೂ ಲೈಂಗಿಕ ದೌರ್ಜನ್ಯ ಕೊಡುತ್ತಿದ್ದರು ಎಂದು ಇಬ್ಬರು ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಸಂಸ್ಥೆಗೆ ದೂರು ನೀಡಿದ್ದರು. ಈ ಸಂಬಂಧ ಒಡನಾಡಿ ಸಂಸ್ಥೆಯವರು ವಿದ್ಯಾರ್ಥಿನಿಯರನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಿ ವಿಚಾರಣೆ ನಡೆಸಲು ಮನವಿ ಮಾಡಿದ್ದರು.

ವಿದ್ಯಾರ್ಥಿನಿಯರನ್ನು ವಿಚಾರಣೆ ನಡೆಸಿದ ಮಕ್ಕಳ ಕಲ್ಯಾಣ ಸಮಿತಿ, ಸ್ವಾಮೀಜಿ ವಿರುದ್ಧ ಎಫ್‌ ಐ ಆರ್‌ ದಾಖಲಿಸಲು ಆದೇಶ ನೀಡಿತು. ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರು ನಜರಾಬಾದ್‌ ಠಾಣೆಯಲ್ಲಿ ದೂರು ದಾಖಲಿಸಿದರು. ದೂರು ದಾಖಲಿಸಿಕೊಂಡ ಪೊಲೀಸರು Protection of children from sexual affences Act (U/s- 17,5 (L),6); IPC 1860 U/s 376 (2)(n), 376(3), 149 ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ನಡೆದಿರುವುದು ಚಿತ್ರದುರ್ಗದಲ್ಲಿ ಆದ್ದರಿಂದ ಈ ಪ್ರಕರಣ ಚಿತ್ರದುರ್ಗಕ್ಕೆ ವರ್ಗಾವಣೆ ಆಗುವ ಸಾಧ್ಯತೆ ಇದೆ.

ದೂರಿನ ಪ್ರಕಾರ ಮುರುಘಾ ಶರಣರು ಒಬ್ಬ ಬಾಲಕಿಯನ್ನು ಮೂರು ವರ್ಷಗಳಿಂದ ಅತ್ಯಾಚಾರ ನಡೆಸುತ್ತ ಬಂದಿದ್ದಾರೆ. ಇನ್ನೊಬ್ಬ ಬಾಲಕಿಯನ್ನು ಒಂದೂವರೆ ವರ್ಷಗಳಿಂದ ಅತ್ಯಾಚಾರ ನಡೆಸುತ್ತ ಬಂದಿದ್ದಾರೆ.

ಈ ಸತತ ಲೈಂಗಿಕ ದೌರ್ಜನ್ಯಕ್ಕೆ ವಸತಿ ನಿಲಯದ ವಾರ್ಡನ್ ರಶ್ಮಿ, ಮರಿಸ್ವಾಮಿಯಾದ ಬಸವಾದಿತ್ಯ, ಲಾಯರ್ ಗಂಗಾಧರಯ್ಯ,ಲೀಡರ್ ಪರಮಶಿವಯ್ಯ ಸಹಾಯ ಮಾಡಿದ್ದಾರೆ. ಸ್ವಾಮೀಜಿ ಜೊತೆಯಲ್ಲಿ ಈ ನಾಲ್ಕು ಮಂದಿಯನ್ನು ಆರೋಪಿಗಳನ್ನಾಗಿ ಮಾಡಲಾಗಿದೆ.

ಸಂತ್ರಸ್ಥ ಬಾಲಕಿಯರನ್ನು ಒಡನಾಡಿ ಸಂಸ್ಥೆಯಲ್ಲಿ ತಾತ್ಕಾಲಿಕ ವಸತಿ ಕಲ್ಪಿಸಲಾಗಿದೆ.

ವಿದ್ಯಾರ್ಥಿನಿಯರು ಹೇಳಿದ್ದೇನು?

ʻʻಸ್ವಾಮೀಜಿ ಅವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡನ್‌ (ರಶ್ಮಿ) ಅವರೇ ನಮ್ಮನ್ನು ಕಳುಹಿಸುತ್ತಿದ್ದರು. ಸ್ವಾಮೀಜಿ ಇದ್ದ ಸ್ಥಳಕ್ಕೆ ತೆರಳಿದರೆ ಅವರು ನಮಗೆ ಮತ್ತು ಬರುವಂತೆ ಮಾಡಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು. ಇದೇ ಅನುಭವ ಹಲವಾರು ವಿದ್ಯಾರ್ಥಿನಿಯರಿಗೆ ಆಗಿದೆ. ದೂರು ನೀಡಲು ಯಾರಿಗೂ ಧೈರ್ಯವಿರಲಿಲ್ಲ. ಚಿತ್ರದುರ್ಗದಲ್ಲಿ ನಮಗೆ ನ್ಯಾಯ ಸಿಗಲಿಲ್ಲವೆಂಬ ಕಾರಣಕ್ಕೆ ಮೈಸೂರಿನ ಒಡನಾಡಿ ಸಂಸ್ಥೆಯ ಸಹಾಯ ಪಡೆದಿದ್ದೇವೆ.ʼʼ

PPeepal Media

Peepal Media

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು