Friday, June 14, 2024

ಸತ್ಯ | ನ್ಯಾಯ |ಧರ್ಮ

ಮರಾಠ ಮೀಸಲಾತಿ ಬೇಡಿಕೆ ಚಳವಳಿ: ಬಿಜೆಪಿ ಶಾಸಕ ರಾಜೀನಾಮೆ

ಮಹಾರಾಷ್ಟ್ರದಲ್ಲಿ ಮರಾಠರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ನಡೆಯುತ್ತಿರುವ ಚಳವಳಿ ತೀವ್ರಗೊಂಡಿದೆ. ಮಹಾರಾಷ್ಟ್ರದ ಗೆವ್ರಾಯ್‌ನ ಬಿಜೆಪಿ ಶಾಸಕ ಲಕ್ಷ್ಮಣ್ ಪವಾರ್ ಅವರು ಮರಾಠರಿಗೆ ಮೀಸಲಾತಿಗೆ ಆಗ್ರಹಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸೋಮವಾರ ಬೀಡ್ ಜಿಲ್ಲೆಯಲ್ಲಿ ಮರಾಠ ಕೋಟಾ ಆಂದೋಲನದ ವೇಳೆ ದೊಡ್ಡ ಪ್ರಮಾಣದ ಹಿಂಸಾಚಾರ ಸಂಭವಿಸಿದೆ. ಎನ್‌ಸಿಪಿ ಶಾಸಕರೊಬ್ಬರ ಮನೆಗೆ ಚಳವಳಿಗಾರರು ಬೆಂಕಿ ಹಚ್ಚಿದ್ದರು.


https://peepalmedia.com/protesters-set-ncp-mlas-house-on-fire/

ಗೆವರಾಯ್ ವಿಧಾನಸಭಾ ಕ್ಷೇತ್ರದ ಶಾಸಕ ಲಕ್ಷ್ಮಣ ಪವಾರ್ ಮಾತನಾಡಿ, ಮರಾಠ ಕೋಟಾ ಸಮಸ್ಯೆ ಹಲವು ವರ್ಷಗಳಿಂದ ಬಾಕಿ ಇದೆ. ‘‘ಮರಾಠ ಕೋಟಾ ಸಮಸ್ಯೆ ಹಲವು ವರ್ಷಗಳಿಂದ ಬಾಕಿ ಇದೆ. ಮರಾಠ ಸಮುದಾಯದ ಬೇಡಿಕೆಗೆ ನನ್ನ ಬೆಂಬಲವಿದೆ. ನಾನು ನನ್ನ ರಾಜೀನಾಮೆಯನ್ನು ಸಲ್ಲಿಸುತ್ತೇನೆ” ಎಂದು ಪವಾರ್ ವಿಧಾನಸಭಾಧ್ಯಕ್ಷ ರಾಹುಲ್ ನಾರ್ವೇಕರ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ನಿಷ್ಠರಾಗಿರುವ ಮಹಾರಾಷ್ಟ್ರದ ನಾಸಿಕ್ ಮತ್ತು ಹಿಂಗೋಲಿಯ ಶಿವಸೇನೆ ಸಂಸದರು ಮರಾಠ ಮೀಸಲಾತಿ ಬೇಡಿಕೆಯನ್ನು ಬೆಂಬಲಿಸಿ ರಾಜೀನಾಮೆ ನೀಡಿದ ನಂತರ ಲಕ್ಷ್ಮಣ್ ಪವಾರ್ ಈ ನಿರ್ಧಾರ ಕೈಗೊಂಡಿದ್ದಾರೆ.

ಮರಾಠಾ ಸಮುದಾಯದ ಸದಸ್ಯರು, ಹೋರಾಟಗಾರ ಮನೋಜ್ ಜಾರಂಗೆ ನೇತೃತ್ವದಲ್ಲಿ ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಿಶೇಷ ಮೀಸಲಾತಿ ಕೋಟಾಕ್ಕೆ ಒತ್ತಾಯಿಸಿ ಆಂದೋಲನವನ್ನು ಪ್ರಾರಂಭಿಸಿದರು. ಜರಂಜ್ ಅವರು ಜಲ್ನಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಅಕ್ಟೋಬರ್ 25ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು