Sunday, June 16, 2024

ಸತ್ಯ | ನ್ಯಾಯ |ಧರ್ಮ

ಕೇವಲ ಎರಡು ಸಾವಿರ ರೂಪಾಯಿ ವ್ಯವಹಾರಕ್ಕೆ ನಡೆಯಿತಾ ಕಲ್ಲೇಗ ಟೈಗರ್ಸ್ ಮುಖ್ಯಸ್ಥನ ಹತ್ಯೆ!!??

ದಕ್ಷಿಣ ಕನ್ನಡದ ಪ್ರಖ್ಯಾತ ಹುಲಿವೇಷ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಪುತ್ತೂರಿನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪುತ್ತೂರು ತಾಲೂಕಿನ ನೆಹರೂ ನಗರ ಜಂಕ್ಷನ್‌ನಲ್ಲಿ ಈ ಘಟನೆ ನಡೆದಿದ್ದು ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ.

ಹುಲಿಕುಣಿತದಲ್ಲಿ ಕಲ್ಲೇಗ ಟೈಗರ್ಸ್ ತಂಡದ ನೇತೃತ್ವ ವಹಿಸಿಕೊಂಡಿದ್ದ ಅಕ್ಷಯ್‌ನನ್ನು ಮಾಣಿ-ಮೈಸೂರು ಹೆದ್ದಾರಿಯ ನೆಹರೂ ನಗರ ಜಂಕ್ಷನ್‌ನಲ್ಲಿ ತಲ್ವಾರುಗಳನ್ನು ಬಳಸಿ ಹತ್ಯೆ ಮಾಡಲಾಗಿದೆ. ಸುಮಾರು 58 ಕಡೆಗಳಲ್ಲಿ ತಲ್ವಾರ್ ನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಪೋಸ್ಟ್ ಮಾರ್ಟಂ ಸಂದರ್ಭದಲ್ಲಿ ವೈದ್ಯರೇ ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪುತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಹತ್ಯೆಗೈದ ಬನ್ನೂರು ನಿವಾಸಿ ಮನೀಷ್ ಹಾಗೂ ಚೇತು ಘಟನೆಯ ಬಳಿಕ ಪೊಲೀಸ್ ಠಾಣೆಗೆ ಶರಣಾಗಿದ್ದಾರೆ. ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆರೋಪಿಗಳು ಬಾಯಿ ಬಿಟ್ಟಂತೆ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದ ವಿಚಾರದಲ್ಲಿ ಆರೋಪಿಗಳು ಹಾಗೂ ಅಕ್ಷಯ್ ನಡುವೆ ಗಲಾಟೆಯಾಗಿತ್ತು. ಈ ಸಂದರ್ಭ ಎರಡು ಸಾವಿರ ರೂ. ನೀಡುವ ವಿಚಾರದಲ್ಲಿ ಮಾತುಕತೆ ವಿಕೋಪಕ್ಕೆ ತಿರುಗಿದೆ. ಇದೇ ಹತ್ಯೆಗೆ ಕಾರಣ ಎನ್ನಲಾಗಿದೆ

ಸಧ್ಯಕ್ಕೆ ಹತ್ಯೆಗೆ ಬೇರೆ ಕಾರಣಗಳು ಇರಬಹುದೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು