Saturday, June 15, 2024

ಸತ್ಯ | ನ್ಯಾಯ |ಧರ್ಮ

KEA ಪರೀಕ್ಷಾ ಅಕ್ರಮ: ತನಿಖೆಯನ್ನುಸಿಐಡಿಗೆ ಹಸ್ತಾಂತರಿಸಿದ ಸರ್ಕಾರ

ಕೆಇಎ ಪರೀಕ್ಷಾ ಅಕ್ರಮ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರ ಮಾಡಿದೆ. ಶುಕ್ರವಾರ ಪರೀಕ್ಷೆ ಅಕ್ರಮದ ಕಿಂಗ್ ಪಿನ್ ಆದ ಆರ್.ಡಿ.ಪಾಟೀಲನ ಬಂಧನವಾದ ಬೆನ್ನಲ್ಲೇ ತನಿಖೆ ಚುರುಕುಗೊಳ್ಳಲು ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಕೆಇಎ ಪರೀಕ್ಷಾ ಅಕ್ರಮದ ಬಗ್ಗೆ ಯಾದಗಿರಿ ಪೊಲೀಸ್ ಠಾಣೆಯಲ್ಲಿ ಐದು ಪ್ರಕರಣಗಳು ದಾಖಲಾಗಿದ್ದವು. ಗೃಹ ಇಲಾಖೆ ಸೂಚನೆ ಮೇರೆಗೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರ ಮಾಡಲಾಗಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ ಸಿಐಡಿ ತನಿಖಾಧಿಕಾರಿಗಳಿಗೆ ಪ್ರಕರಣದ ಕಡತಗಳನ್ನು ಹಸ್ತಾಂತರ ಮಾಡಿದರು.

Related Articles

ಇತ್ತೀಚಿನ ಸುದ್ದಿಗಳು