Friday, June 14, 2024

ಸತ್ಯ | ನ್ಯಾಯ |ಧರ್ಮ

ಕೊಲಿಜಿಯಂ Vs ಕೇಂದ್ರ ಸರ್ಕಾರ: ಮತ್ತೊಮ್ಮೆ ಕೇಂದ್ರದ ವಿರುದ್ಧ ಸುಪ್ರೀಂ ಆಕ್ರೋಶ

Supreme Court Collegium Issue: ಕೊಲಿಜಿಯಂ (Collegium) ಕುರಿತು ಕೇಂದ್ರದ ನಿಲುವು ಸರಿಯಲ್ಲ ಎಂದು ಸುಪ್ರೀಂ ಕೋರ್ಟ್ ಹಲವು ಸಂದರ್ಭಗಳಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದೆ. ಆದರೆ ಈಗಲೂ ಅದೇ ಅಸ್ಪಷ್ಟತೆ ಮುಂದುವರಿದಿದೆ.

ದೇಶದಲ್ಲಿ ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸರ್ಕಾರದ ನಡುವೆ ಭಿನ್ನಾಭಿಪ್ರಾಯಗಳಿಗೆ ಕೊರತೆಯಿಲ್ಲ. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಉಭಯ ಪಕ್ಷಗಳ ನಡುವೆ ವಿವಾದ ಮುಂದುವರೆದಿದೆ. ನ್ಯಾಯಮೂರ್ತಿಗಳ ನೇಮಕಕ್ಕೆ‌ ಸಂಬಂಧಿಸಿದಂತೆ ಕೊಲಿಜಿಯಂ ಶಿಫಾರಸುಗಳಿಗೆ ಒಪ್ಪಿಗೆ ನೀಡುವ ಬಗ್ಗೆ ಉಭಯ ಪಕ್ಷಗಳ ನಡುವೆ ಸಂಘರ್ಷದ ವಾತಾವರಣವಿದೆ. ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ವ್ಯವಸ್ಥೆಯನ್ನು ವಿರೋಧಿಸುತ್ತಿರುವ ಕೇಂದ್ರ ಸರ್ಕಾರವು ಕೊಲಿಜಿಯಂ ಸೂಚಿಸಿದ ಎಲ್ಲಾ ಹೆಸರುಗಳನ್ನು ತಡೆಹಿಡಿಯುತ್ತಿದೆ. ಕೊಲಿಜಿಯಂ ಶಿಫಾರಸಿನ ಮೇಲಿನ ಕೇಂದ್ರದ ಈ ನಿಲುವನ್ನು ಸುಪ್ರೀಂ ಕೋರ್ಟ್ ಖಂಡಿಸಿದೆ. ಸರ್ಕಾರ ತನಗೆ ಇಷ್ಟವಿರುವವರನ್ನು ಆಯ್ಕೆ ಮಾಡಿ ಉಳಿದವರನ್ನು ಬದಿಗಿಡುವುದು ಸರಿಯಲ್ಲ ಎಂದಿದೆ.

ಹೈಕೋರ್ಟ್ ನ್ಯಾಯಮೂರ್ತಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ಕೊಲಿಜಿಯಂ ಕಳುಹಿಸಿರುವ ಶಿಫಾರಸುಗಳ ಕುರಿತು ಕೇಂದ್ರ ಸರ್ಕಾರದ ನಿಲುವಿಗೆ ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಕೊಲಿಜಿಯಂ ಕಳುಹಿಸಿದ ಕೆಲವು ಹೆಸರುಗಳನ್ನು ಅಂಗೀಕರಿಸಿದೆ ಮತ್ತು ಉಳಿದ ಹೆಸರುಗಳನ್ನು ತಡೆ ಹಿಡಿದಿದೆ. ಇದರಿಂದಾಗಿ ಅರ್ಹ ನ್ಯಾಯಮೂರ್ತಿಗಳ ಸೇವಾ ಹಿರಿತನ ನಷ್ಟವಾಗುತ್ತಿದೆ ಎಂದು ಸುಪ್ರೀಕೋರ್ಟ್‌ ಹೇಳುತ್ತಿದೆ.

ವಿವಿಧ ರಾಜ್ಯಗಳ ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಕೊಲಿಜಿಯಂ ಶಿಫಾರಸು ಮಾಡಿರುವ 8 ಮಂದಿಯ ಹೆಸರುಗಳು ಬಾಕಿ ಉಳಿದಿವೆ ಎಂದು ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ಮತ್ತೆ ನೆನಪಿಸಿದೆ. ಕೆಲವರ ಹೆಸರುಗಳನ್ನು ಈಗಾಗಲೇ ಎರಡ್ಮೂರು ಬಾರಿ ಪ್ರಸ್ತಾಪಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿ ವಿಚಾರದಲ್ಲಿ ಕೇಂದ್ರ ಸರ್ಕಾರ ಅನುಸರಿಸುತ್ತಿರುವ ನೀತಿ ಸರಿಯಲ್ಲ ಎಂದು ಸುಪ್ರೀಂ ಕೋರ್ಟ್ ಕೊಲಿಜಿಯಂ ಸದಸ್ಯ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ (Sanjay kishan kaul judgement) ಹೇಳಿದ್ದಾರೆ. ಇದು ಒಳ್ಳೆಯ ಪರಿಣಾಮವಲ್ಲ, ಇಂತಹ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸರ್ಕಾರ ಯಾವ ಸಂದೇಶವನ್ನು ನೀಡಲು ಹೊರಟಿದೆ ಎಂದು ಅವರು ಕೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು