Tuesday, June 25, 2024

ಸತ್ಯ | ನ್ಯಾಯ |ಧರ್ಮ

ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ , ಐವರಿಗೆ ಗಂಭೀರ ಗಾಯ

ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದ್ದು, ಐದು ಮಂದಿಗೆ ಗಂಭೀರ ಗಾಯಗಳಾಗಿವೆ. ಸಿಲಿಂಡರ್ ಸ್ಪೋಟಗೊಂಡ ಹಿನ್ನೆಲೆಯಲ್ಲಿ ಈ ಅನಾಹುತ ಸಂಭವಿಸಿದೆ. ಬೆಂಗಳೂರಿನ ವಿವರ್ಸ್ ಕಾಲೋನಿಯಲ್ಲಿ ಈ ಘಟನೆ ಬುಧವಾರ ಮುಂಜಾನೆ ಸಂಭವಿಸಿದೆ.

ವೀವರ್ಸ್ ಕಾಲೋನಿ ಬಳಿಯ ಮಾರುತಿ ಬಡಾವಣೆಯ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಉತ್ತರ ಪ್ರದೇಶದ ವಾರಣಾಸಿ ಮೂಲದ ಐವರು ಗಾಯಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಮುಂಜಾನೆ 5:30ರ ಸುಮಾರಿಗೆ ಸಿಲಿಂಡರ್ ಸೋರಿಕೆಯಾಗಿ ಸ್ಫೋಟಗೊಂಡಿದೆ. ಮನೆಯಲ್ಲಿದ್ದ ಜಮಾಲ್, ನಾಜಿಯಾ, ಇರ್ಫಾನ್, ಗುಲಾಬ್, ಶಹಜಾದ್ ಎಂಬುವವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಲಿಂಡರ್ ಸ್ಫೋಟದ ತೀವ್ರತೆಗೆ ಮನೆಯ ಕಿಟಕಿಗಳು ಛಿದ್ರಗೊಂಡಿವೆ. ಅಲ್ಲದೇ ಮನೆಯ ಮುಂಭಾಗ ನಿಲ್ಲಿಸಿದ್ದ ಕಾರಿನ ಗಾಜುಗಳು ಪುಡಿ ಪುಡಿಯಾಗಿವೆ. ಮಾರ್ಟಿನ್ ಎಂಬುವವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಕೋಣನಕುಂಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು