ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಭದ್ರತಾ ನಿಯಮ ಉಲ್ಲಂಘನೆ : ಮೊಹುವಾ ಮೋಯಿತ್ರಾ ಉಚ್ಚಾಟನೆ, ಪ್ರತಾಪ್ ಸಿಂಹಗೆ ಯಾಕಿಲ್ಲ? ಜಾಲತಾಣಗಳಲ್ಲಿ ಹೆಚ್ಚಿದ ಪ್ರಶ್ನೆ

PPeepal Media Desk

Peepal Media Desk ಮೀಡಿಯಾ

• 1 ನಿಮಿಷದ ಓದು

ಭದ್ರತಾ ನಿಯಮ ಉಲ್ಲಂಘನೆ : ಮೊಹುವಾ ಮೋಯಿತ್ರಾ ಉಚ್ಚಾಟನೆ, ಪ್ರತಾಪ್ ಸಿಂಹಗೆ ಯಾಕಿಲ್ಲ? ಜಾಲತಾಣಗಳಲ್ಲಿ ಹೆಚ್ಚಿದ ಪ್ರಶ್ನೆ

ಈಗ ಕೆಲವೇ ದಿನಗಳ ಹಿಂದೆ ಭದ್ರತಾ ನಿಯಮ ಉಲ್ಲಂಘನೆ ಹಾಗೂ ಪ್ರಶ್ನೆಗಾಗಿ ನಗದು ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ಸಂಸದೆ ಮೊಹುವಾ ಮೋಯಿತ್ರಾ ಅವರನ್ನು ಲೋಕಸಭೆ ನೈತಿಕ ಸಮಿತಿ ವರದಿ ಅನ್ವಯ ಸಂಸತ್ ಸ್ಥಾನದಿಂದ ವಜಾಗೊಳಿಸಲಾಗಿದೆ. ಆದರೆ ಇದೇ ಭದ್ರತಾ ನಿಯಮ ಉಲ್ಲಂಘನೆ ಪ್ರಕರಣ ಪ್ರತಾಪ್ ಸಿಂಹ ಮೇಲೆ ಯಾಕೆ ಅನ್ವಯಿಸುವುದಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಎದ್ದಿದೆ.

ಬುಧವಾರದ ದಿನ ಲೋಕಸಭೆಯ ಸದನ ನಡೆಯುತ್ತಿರುವ ಸಂದರ್ಭದಲ್ಲಿ ಅಪರಿಚಿತ ಸಂದರ್ಶಕರೊಬ್ಬರು ಭದ್ರತೆಯನ್ನು ಉಲ್ಲಂಘಿಸಿ ಗ್ಯಾಲರಿಯಿಂದ ಕೊಠಡಿಗೆ ಹಾರಿದ ಕಾರಣ ಲೋಕಸಭೆಯಲ್ಲಿ ಗೊಂದಲ ಉಂಟಾಗಿತ್ತು. ಅದರಲ್ಲೂ ಸಂಸತ್ ಮೇಲಿನ ದಾಳಿಗೆ 22 ವರ್ಷ ಪೂರೈಸಿದ ದಿನವೇ ಈ ಒಂದು ಘಟನೆ ನಡೆದದ್ದು ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳಿಗೆ ಪಾಸ್ ವಿತರಣೆ ಬಗ್ಗೆ ಈಗ ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಅಷ್ಟೆ ಅಲ್ಲದೆ ಪ್ರತಾಪ್ ಸಿಂಹ ಅಮಾನತಿಗೆ ವಿಪಕ್ಷ ನಾಯಕರು ಆಗ್ರಹಿಸಿದ್ದಾರೆ.

ಕೇವಲ ವಿಪಕ್ಷ ನಾಯಕರಲ್ಲದೇ ಈಗ ಸಾಮಾಜಿಕ ಜಾಲತಾಣಗಳಲ್ಲೂ ಸಹ ಸಂಸದ ಪ್ರತಾಪ್ ಸಿಂಹರನ್ನು ಉಚ್ಚಾಟನೆ ಮಾಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ಮೈಸೂರು ಮೂಲದ ಮನೋರಂಜನ್ ಹಾಗೂ ಉತ್ತರ ಪ್ರದೇಶ ಮೂಲದ ಸಾಗರ್ ಶರ್ಮಾ ಅವರಿಗೆ ಲೋಕಸಭೆ ಸದನ ವೀಕ್ಷಣೆ ಪಾಸ್ ನೀಡಿರುವ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಅವರನ್ನು ತನಿಖೆಗೆ ಒಳಪಡಿಸಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಒತ್ತಾಯ ಹೆಚ್ಚಿದೆ.

ಬುಧವಾರದ ದಾಳಿಗೆ ಸಂಸತ್ ನ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಗುರುವಾರ ತೀವ್ರ ಚರ್ಚೆ ಗ್ರಾಸವಾಗಿದೆ. ಈ ನಡುವೆ ಪ್ರತಾಪ್ ಸಿಂಹ ಅವರು, ‘ವೀಕ್ಷಕರ ಪಾಸ್ ನ್ನು ಒತ್ತಾಯಪೂರ್ವಕವಾಗಿ ಪಡೆದುಕೊಂಡಿದ್ದರು’ ಎನ್ನುವ ಉಡಾಫೆ ಉತ್ತರಕ್ಕೆ ವಿರೋಧ ಪಕ್ಷದ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹೇಳಿಕೆ ಹಾಗೂ ಯಾವ ಆಧಾರದಲ್ಲಿ ಪಾಸ್ ನೀಡಲಾಗಿದೆ ಎಂಬುದಕ್ಕೆ ಪ್ರತಾಪ್ ಸಿಂಹ ವಿವರಣೆ ನೀಡಬೇಕು ಹಾಗೂ ಇದರ ತನಿಖೆ ಪೂರ್ಣಗೊಳ್ಳುವ ವರೆಗೂ ಪ್ರತಾಪ್ ಸಿಂಹ ಅವರನ್ನು ಅಮಾನತಿನಲ್ಲಿ ಇಡಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಒತ್ತಾಯಿಸಲಾಗಿದೆ.

ಈ ನಡುವೆ ಟಿಎಂಸಿ ಸಂಸದೆ ಮೋಹುವಾ ಮೋಯಿತ್ರಾ ಅವರನ್ನು ಯಾವ ಮಾನದಂಡಗಳ ಅಡಿಯಲ್ಲಿ ಸಂಸತ್ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆಯೋ ಅದನ್ನು ಈ ಪ್ರಕರಣಕ್ಕೆ ಯಾಕೆ ಅನ್ವಯಿಸಿಲ್ಲ.. ಮೊಹುವಾ ಮೋಯಿತ್ರಾ ಪ್ರಕರಣಕ್ಕಿಂತ ಗಂಭೀರವಾದ ಪ್ರಕರಣ ಇದಾಗಿದೆ. ಅಕಸ್ಮಾತ್ ಟಿಯರ್ ಗ್ಯಾಸ್ ಬದಲು ಬಂದೂಕುಗಳೇ ಬಂದಿದ್ದರೆ ಎಂತಹ ಪ್ರಮಾದವನ್ನು ದೇಶ ಎದುರು ನೋಡುತ್ತಿತ್ತು ಎಂಬ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕರಣದ ಅಡಿಯಲ್ಲಿ ಟೀಕೆಗಳು ವ್ಯಕ್ತವಾಗಿವೆ.

PPeepal Media Desk

Peepal Media Desk

Peepal Media · ಮೀಡಿಯಾ ವಿಭಾಗ

ಸಂಬಂಧಿತ ಸುದ್ದಿಗಳು