Sunday, June 23, 2024

ಸತ್ಯ | ನ್ಯಾಯ |ಧರ್ಮ

ರಾಜಸ್ಥಾನ ಸಿಎಂ ಆಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿರುವ ಭಜನ್ ಲಾಲ್ ಶರ್ಮಾ

ಜೈಪುರ: ರಾಜಸ್ಥಾನದ ನಿಯೋಜಿತ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರ ಪ್ರಮಾಣ ವಚನ ಸಮಾರಂಭ ಶುಕ್ರವಾರ ಜೈಪುರದಲ್ಲಿ ನಡೆಯಲಿದೆ.

ಶರ್ಮಾ ಅವರೊಂದಿಗೆ ಇತ್ತೀಚೆಗೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಉಪಮುಖ್ಯಮಂತ್ರಿಗಳಾಗಿ ಹೆಸರಿಸಲಾದ ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಬೈರ್ವಾ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಈ ಮೂವರಿಗೆ ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆಪಿ ನಡ್ಡಾ, ಹಲವಾರು ಕೇಂದ್ರ ಸಚಿವರು ಮತ್ತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮಧ್ಯಾಹ್ನ 12 ಗಂಟೆಗೆ ಐತಿಹಾಸಿಕ ಆಲ್ಬರ್ಟ್ ಹಾಲ್ ಎದುರು ನಡೆಯಲಿರುವ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಮಾರಂಭವನ್ನು ವೀಕ್ಷಿಸುವ ಸಾಧ್ಯತೆಯಿರುವ ಸ್ಥಳದಲ್ಲಿ ಭಾರಿ ಭದ್ರತೆ ಮತ್ತು ಆಸನದ ವ್ಯವಸ್ಥೆಯನ್ನು ಮಾಡಲಾಗಿದೆ.

ಸಮಾರಂಭಕ್ಕೆ ಕೇಂದ್ರ ನಾಯಕರು ಮತ್ತು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಆಹ್ವಾನ ಕಳುಹಿಸಲಾಗಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.

ಸ್ಥಳಕ್ಕಾಗಮಿಸುವ ಎಲ್ಲಾ ಪ್ರಮುಖ ರಸ್ತೆಗಳನ್ನು ಕೇಂದ್ರ ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಪೋಸ್ಟರ್ ಮತ್ತು ಬ್ಯಾನರ್‌ಗಳು ಹಾಗೂ ನಾಯಕರ ಕಟೌಟ್‌ಗಳಿಂದ ಅಲಂಕರಿಸಲಾಗಿದೆ.

ನವೆಂಬರ್ 25ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 115 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ, ಕಾಂಗ್ರೆಸ್ 69 ಸ್ಥಾನಗಳನ್ನು ಪಡೆದಿತ್ತು. ರಾಜ್ಯದ 200 ವಿಧಾನಸಭಾ ಸ್ಥಾನಗಳ ಪೈಕಿ 199 ಸ್ಥಾನಗಳಿಗೆ ಮತದಾನ ನಡೆದಿದೆ.

ಪಕ್ಷದ ಕೇಂದ್ರ ವೀಕ್ಷಕರಾದ ರಾಜನಾಥ್ ಸಿಂಗ್, ಸರೋಜ್ ಪಾಂಡೆ ಮತ್ತು ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಮಂಗಳವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮೊದಲ ಬಾರಿಗೆ ಶಾಸಕರಾಗಿರುವ ಶರ್ಮಾ ಅವರನ್ನು ನಿಯೋಜಿತ ಮುಖ್ಯಮಂತ್ರಿ ಎಂದು ಘೋಷಿಸಲಾಯಿತು.

ವಿಧ್ಯಾಧರ್ ನಗರ ಶಾಸಕಿ ಕುಮಾರಿ ಮತ್ತು ದುಡು ಶಾಸಕ ಬೈರ್ವಾ ಅವರನ್ನು ಉಪಮುಖ್ಯಮಂತ್ರಿ ಸ್ಥಾನಗಳಿಗೆ ಮತ್ತು ಅಜ್ಮೀರ್ ಉತ್ತರ ಶಾಸಕ ವಾಸುದೇವ್ ದೇವ್ನಾನಿ ಅವರನ್ನು ವಿಧಾನಸಭೆಯ ಸ್ಪೀಕರ್ ಆಗಿ ಆಯ್ಕೆ ಮಾಡಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು