ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವರ್ಷಾರಂಭದಲ್ಲಿ ಶುರುವಾಗಲಿದೆ ಭಾರತ್ ಜೋಡೋ ಯಾತ್ರೆ 2.0!

PPeepal Media Desk

Peepal Media Desk ರಾಜಕೀಯ

• 1 ನಿಮಿಷದ ಓದು

ವರ್ಷಾರಂಭದಲ್ಲಿ ಶುರುವಾಗಲಿದೆ ಭಾರತ್ ಜೋಡೋ ಯಾತ್ರೆ 2.0!

ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ 3 ರಾಜ್ಯಗಳ ಸೋಲು ಮತ್ತು ಇನ್ನು ಕೆಲವೇ ತಿಂಗಳಲ್ಲಿ ಶುರುವಾಗುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತೊಂದು ತಂತ್ರಗಾರಿಕೆಗೆ ಮುಂದಾಗಿದೆ. ಆ ಮೂಲಕ ಭಾರತದ ಪೂರ್ವದಿಂದ ಪಶ್ಚಿಮಕ್ಕೆ ಈ ಯಾತ್ರೆ ನಡೆಯುವ ಬಗ್ಗೆ ಕಾಂಗ್ರೆಸ್ ಚಿಂತನೆ ನಡೆಸಿದೆ.

ಬಿಜೆಪಿ ಪಕ್ಷದ ಕೋಮುವಾದಿ ರಾಜಕಾರಣ, ನಿರುದ್ಯೋಗ ಮತ್ತು ಬೆಲೆ ಏರಿಕೆಯನ್ನು ಖಂಡಿಸಿ ಈಶಾನ್ಯದಿಂದ ಪ್ರಾರಂಭಿಸುವ ಈ ಯಾತ್ರೆ, ಈಶಾನ್ಯ ರಾಜ್ಯಗಳಿಂದ ಗುಜರಾತ್ ಗೆ ಬಂದು ತಲುಪುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಪಕ್ಷದ ಮುಂಬರುವ ಕಾರ್ಯಕ್ರಮಗಳ ಕುರಿತು ಚರ್ಚಿಸಲು ಕಾಂಗ್ರೆಸ್ ಪಕ್ಷವು ಸಿಡಬ್ಲ್ಯೂಸಿಯನ್ನು ಸಹ ನಡೆಸಲಿದೆ ಎಂದು ವರದಿಗಳು ಸಿಕ್ಕಿವೆ.

ಕಳೆದ ವರ್ಷ ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಗಾಂಧಿ ಭಾರತ್ ಜೋಡೋ ಯಾತ್ರೆಗೆ ಚಾಲನೆ ನೀಡಿದ್ದರು. ಇದು 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸುಮಾರು 4,000 ಕಿಮೀ ಕ್ರಮಿಸಿದ ನಂತರ ಶ್ರೀನಗರದಲ್ಲಿ ಜನವರಿ 30 ರಂದು ಮುಕ್ತಾಯವಾಯಿತು.

2024 ರ ಪ್ರಾರಂಭದಲ್ಲಿ ಶುರುವಾಗುವ ಭಾರತ್ ಜೋಡೋ ಯಾತ್ರೆಯ ಸಂಪೂರ್ಣ ರೂಪುರೇಷೆ, ಸಮಿತಿಗಳು ಸಧ್ಯದಲ್ಲೇ ರಚನೆಯಾಗುವ ಬಗ್ಗೆ ಪಕ್ಷದ ಉನ್ನತ ಮೂಲಗಳು ತಿಳಿಸಿವೆ. ಡಿಸೆಂಬರ್ 21 ರಂದು ನಡೆಯುವ ಕಾಂಗ್ರೆಸ್ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಅರುಣಾಚಲ ಪ್ರದೇಶದಿಂದ ಗುಜರಾತ್ ವರೆಗೂ ನಡೆಯುವ ಭಾರತ್ ಜೋಡೋ ಯಾತ್ರೆ 2.0 ಉತ್ತರ ಪ್ರದೇಶದ ಹೆಚ್ಚಿನ ಜಿಲ್ಲೆಗಳಲ್ಲಿ ಸಾಗಿ ರಾಜಸ್ಥಾನದ ಹಲವು ಪ್ರದೇಶಗಳಲ್ಲಿ ತನ್ನ ಯಾತ್ರೆ ಮುಂದುವರೆಸಲಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೂ ನಡೆದ ಭಾರತ್ ಜೋಡೋ ಯಾತ್ರೆಯ ಪರಿಣಾಮ ಕರ್ನಾಟಕದಲ್ಲಿ ಅಭೂತಪೂರ್ವಕವಾಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿತ್ತು ಎಂದು ಅಂದಾಜಿಸಲಾಗಿದೆ. ಆದರೆ ಇದನ್ನೇ ಮಧ್ಯಪ್ರದೇಶ ಹಾಗೂ ಛತ್ತೀಸಗಡದ ವಿಚಾರಕ್ಕೆ ಹೋಲಿಕೆ ಮಾಡಲಾಗದು. ಇದೇ ಕಾರಣಕ್ಕೆ ಭಾರತ್ ಜೋಡೋ ಯಾತ್ರೆ 2.0 ಆದಷ್ಟು ಬೇಗನೆ ಶುರುವಾಗುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು