ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕರ ಸೇವಕರ ಮೇಲೆ ಕಾಳಜಿಯಿದ್ದಿದ್ದರೆ ಬಿಜೆಪಿ ತನ್ನ ಸರ್ಕಾರವಿದ್ದಾಗ ಅವರ ಮೇಲಿನ ಕೇಸುಗಳನ್ನು ಹಿಂಪಡೆಯಬೇಕಿತ್ತು: ಶೆಟ್ಟರ್

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಕರ ಸೇವಕರ ಮೇಲೆ ಕಾಳಜಿಯಿದ್ದಿದ್ದರೆ ಬಿಜೆಪಿ ತನ್ನ ಸರ್ಕಾರವಿದ್ದಾಗ ಅವರ ಮೇಲಿನ ಕೇಸುಗಳನ್ನು ಹಿಂಪಡೆಯಬೇಕಿತ್ತು: ಶೆಟ್ಟರ್

ಬೆಂಗಳೂರು: ಅಯೋಧ್ಯೆ ಬಾಬರಿ ಮಸೀದಿ ಧ್ವಂಸದ ನಂಥರ ನಡೆದ ಗಲಭೆಯಲ್ಲಿ ಭಾಗಿಯಾಗಿದ್ದ ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದು, ಇದನ್ನು ಸರ್ಕಾರವೇ ಮಾಡಿದೆ ಎನ್ನುವಂತೆ ಬಿಜೆಪಿ ಬಿಂಬಿಸುತ್ತಿರುವುದು ಸರಿಯಲ್ಲ. ಈ ವಿಷಯದಲ್ಲಿ ರಾಜಕೀಯ ಸಲ್ಲ ಎಂದು ಹಿರಿಯ ಕಾಂಗ್ರೆಸ್‌ ನಾಯಕ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.

ಕರ ಸೇವಕರ ಬಂಧನದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸುವುದಾಗಿ ಹೇಳಿರುವ ಬಿಜೆಪಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು “ಅವರು ಪ್ರತಿಭಟನೆ ಮಾಡುವುದಿದ್ದರೆ ಮಾಡಿಕೊಳ್ಳಲಿ. ಆದರೆ ಸರ್ಕಾರ ಕಾರ್ಯಕರ್ತರನ್ನು ಬಂಧಿಸುವಂತೆ ಆದೇಶ ನೀಡಿಲ್ಲ. ಇದು ನ್ಯಾಯಾಲಯದ ಆದೇಶವಾಗಿರಬಹುದು ಅಥವಾ ಪೊಲೀಸ್‌ ನಿರ್ಧಾರವಾಗಿರಬಹುದು. ಬಿಜೆಪಿ ನಿಜಕ್ಕೂ ಕಾಳಜಿಯಿದ್ದಿದ್ದರೆ ಅವರ ಸರ್ಕಾರವಿದ್ದಾಗ ಈ ಪ್ರಕರಣಗಳನ್ನು ರದ್ದುಗೊಳಿಸಬಹುದಿತ್ತು” ಎಂದು ಹೇಳಿದರು.

ಮುಂದುವರೆದು ಮಾತನಾಡಿದ ಅವರು “ಅಯೋಧ್ಯೆ ವಿಚಾರದಲ್ಲಿ ರಾಜಕೀಯ ಬೇಡ. ಅಯೋಧ್ಯೆ ವಿಚಾರವಾಗಿ ದಾಖಲಾದ ಪ್ರಕರಣಗಳನ್ನು ಹಿಂಪಡೆಯಬೇಕು. ಸರ್ಕಾರ ಈ ಕೂಡಲೇ ಪ್ರಕರಣವನ್ನು ವಾಪಾಸ್ ಪಡೆಯಲಿ” ಎಂದು ತಮ್ಮದೇ ಪಕ್ಷದ ಸರ್ಕಾರವನ್ನು ಆಗ್ರಹಿಸಿದರು.

⏩ಪೀಪಲ್ ಮೀಡಿಯಾ⏩ ವಾಟ್ಸಪ್ ಗುಂಪಿಗೆ ಸೇರಲು ಕೆಳಗಿನ ಲಿಂಕ್ ಒಪನ್ ಮಾಡಿ👇

https://chat.whatsapp.com/BoGCVVQyXYVE5m7RhIQRWv

ಈ ಹಿಂದೆ ಬಾಬರಿ ಮಸೀದಿ ಘಟನೆಗೆ ಸಂಬಂಧಿಸಿದಂತೆ ಗಲಭೆಗಳಲ್ಲಿ ಭಾಗಿಯಾದರೆ ಅವರ ವಿರುದ್ಧ ರೌಡಿ ಶೀಟ್‌ ತೆರೆಯಲಾಗುತ್ತಿತ್ತು. ಪ್ರಸ್ತುತ ಅವರಿಗೆ 55-60 ವರ್ಷಗಳಾಗಿವೆ ಹೀಗಾಗಿ ಅವರೆಲ್ಲರ ಮೇಲಿನ ರೌಡಿ ಶೀಟ್‌ ತೆಗೆದು ಹಾಕುವಂತೆ ಕಮಿಷನರುಗಳಿಗೆ ತಿಳಿಸಿದ್ದೇನೆ. ಜೊತೆಗೆ ಸಚಿವ ಸಂಪುಟದಲ್ಲಿ ಈ ವಿಷಯ ಪ್ರಸ್ತಾಪಿಸಿ ಪ್ರಕರಣ ವಾಪಾಸ್ ಮಾಡಿಸುವ ಯತ್ನ ಮಾಡಿದ್ದೇನೆ ಎಂದು ಅವರು ತಿಳಿಸಿದರು.

ಮೂಲತ ಬಿಜೆಪಿಯವರಾದ ಜಗದೀಶ ಶೆಟ್ಟರ್‌ ಅವರು ಕಳೆದ ಬಾರಿಯ ವಿಧಾನಸಭಾ ಚುನಾವಣೆ ವೇಳೆ ಪಕ್ಷದೊಳಗಿನ ಭಿನ್ನಮತದ ಕಾರಣಕ್ಕೆ ಪಕ್ಷದಿಂದ ಹೊರಬಂದು ಕಾಂಗ್ರೆಸ್‌ ಪಕ್ಷವನ್ನು ಸೇರಿದ್ದರು. ನಂತರ ಹುಬ್ಬಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಿಂದ ಕೈ ಚಿನ್ಹೆಯಡಿ ಸ್ಪರ್ಧಿಸಿದ ಅವರು ತಮ್ಮ ಮಾಜಿ ಪಕ್ಷದ ಜ್ಯೂನಿಯರ್‌ ಮಹೇಶ ಟೆಂಗಿನಕಾಯಿ ಅವರೆದುರು ಸೋತಿದ್ದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು