Monday, June 17, 2024

ಸತ್ಯ | ನ್ಯಾಯ |ಧರ್ಮ

ಫೆ.17ರಂದು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ: ಸಿದ್ದರಾಮಯ್ಯ

ಬೆಂಗಳೂರು: ಫೆ.17ರಂದು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ತಿಳಿಸಿದ್ದಾರೆ.

ಫೆಬ್ರವರಿ 17ರಂದು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸಲಾಗುವುದು, ಅವರ ತತ್ವಗಳನ್ನು ಅಳವಡಿಸಿಕೊಳ್ಳುವಂತೆ ನಾನು ಜನರಲ್ಲಿ ವಿನಂತಿಸುತ್ತೇನೆ. ನಾವು ಇತರರ ಬಗ್ಗೆ ಸಹಾನುಭೂತಿ ಹೊಂದಿರಬೇಕು. ದ್ವೇಷ ಸಲ್ಲದು’ ಎಂದು ಕರ್ನಾಟಕ ಸಾಂಸ್ಕೃತಿಕ ನಾಯಕ ಶ್ರೀ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣಗೊಳಿಸಿ ಮುಖ್ಯಮಂತ್ರಿಗಳು ಮಾತನಾಡಿದರು.

ಶಿವಮೊಗ್ಗದ ಹಳೆ ಜೈಲು ಆವರಣಕ್ಕೆ ಅಲ್ಲಮಪ್ರಭು ಎಂದು ನಾಮಕರಣ ಮಾಡಲಾಗಿದೆ ಎಂದರು. ಬಿಜಾಪುರ ಮಹಿಳಾ ವಿಶ್ವವಿದ್ಯಾಲಯಕ್ಕೆ ಅಕ್ಕ ಮಹಾದೇವಿ ವಿಶ್ವವಿದ್ಯಾಲಯ ಎಂದು ಹೆಸರಿಸಿದ್ದು ನಮ್ಮ ಸರ್ಕಾರ. ಸಮಾಜದಲ್ಲಿ ಬದಲಾವಣೆ ತರಲು ಈ ಕೆಲಸಗಳನ್ನು ಮಾಡುತ್ತಿದ್ದೇವೆ. ಬಸವಾದಿ ಶರಣರ ಬೋಧನೆ ಎಂದೆಂದಿಗೂ ಪ್ರಸ್ತುತವಾಗಿರುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು.

ಬಸವಣ್ಣನವರ ಕಾರ್ಯಕ್ರಮಗಳಿಗೆ ಹಣದ ಕೊರತೆ ಇಲ್ಲ ಎಂದರು.

ಕರ್ನಾಟಕ ಸರ್ಕಾರ ಬಸವಣ್ಣ ಅವರನ್ನು ಕರ್ನಾಟಕ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ ಎಂದು ಹೇಳಿದರು. ಬುದ್ಧ, ಬಸವ, ಮಹಾತ್ಮ ಗಾಂಧಿ, ಅಂಬೇಡ್ಕರ್ ಅವರು ಆರೋಗ್ಯಕರ ಮತ್ತು ಕರುಣಾಮಯಿ ಸಾಮಾಜಿಕ ವ್ಯವಸ್ಥೆಗಾಗಿ ಹಾತೊರೆಯುತ್ತಿದ್ದರು. ಬಸವಣ್ಣ ಅಸಮಾನತೆ ಹೋಗಲಾಡಿಸಲು ಶ್ರಮಿಸಿ ಎಲ್ಲರೂ ಸ್ವಾಭಿಮಾನದಿಂದ ಬದುಕುವಂತೆ ಮಾಡಿದರು’ ಎಂದು ಮುಖ್ಯಮಂತ್ರಿ ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು