ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

ವಿರೋಧ ಪಕ್ಷಗಳ ಸದಸ್ಯರಿಂದ ಗಲಾಟೆಕಲಾಪ ಸೋಮವಾರಕ್ಕೆ ಮುಂದೂಡಿಕೆ

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ವಿರೋಧ ಪಕ್ಷಗಳ ಸದಸ್ಯರಿಂದ ಗಲಾಟೆಕಲಾಪ ಸೋಮವಾರಕ್ಕೆ ಮುಂದೂಡಿಕೆ


ಬೆಂಗಳೂರು: ಸೋಮವಾರ ಸದನದ ಕಲಾ ಆರಂಭವಾಗುತ್ತಿದ್ದಂತೆ ಆಡಳಿತ ಪಕ್ಷ ಕಾಂಗ್ರೆಸ್‌ ಸದಸ್ಯರು ಕೇಂದ್ರ ಸರ್ಕಾರದ ವಿರುದ್ಧ ನಿರ್ಣಯಗಳನ್ನು ಅಂಗೀಕರಿಸುವ ಪ್ರಕ್ರಿಯೆ ಆರಂಭಿಸಿದರು. ಇದನ್ನು ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಧರಣಿ ಮುಂದುವರಿಸಿದರು. ಇದರಿಂದಾಗಿ ವಿಧಾನಸಭೆ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಯಿತು.


ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸಭಾಧ್ಯಕ್ಷರ ಪೀಠದ ಎದುರು ಧರಣಿ ಮುಂದುವರಿಸಿದರು. ಹತ್ತು ನಿಮಿಷ ಕಲಾಪ ಮುಂದೂಡಿದ ಸಭಾಧ್ಯಕ್ಷ ಯು.ಟಿ. ಖಾದರ್, ತಮ್ಮ ಕಚೇರಿಯಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಮಧ್ಯೆ ಸಂಧಾನಕ್ಕೆ ಯತ್ನಿಸಿದರು. ಆದರೆ, ಬಿಜೆಪಿ ಸದಸ್ಯರು ಪಟ್ಟು ಸಡಿಲಿಸದ ಕಾರಣ ಸಂಧಾನ ಯತ್ನ ವಿಫಲವಾಯಿತು.ಪುನಃ ಕಲಾಪ ಆರಂಭವಾದಾಗಲೂ ವಿರೋಧ ಪಕ್ಷಗಳ ಸದಸ್ಯರು ಧರಣಿ‌ ಮುಂದುವರಿಸಿದರು. ಕೇಂದ್ರ ಸರ್ಕಾರದ ವಿರುದ್ಧದ ನಿರ್ಣಯಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸತೊಡಗಿದರು.


ಗಲಾಟೆ ನಡುವೆಯೇ ಎರಡು ವರದಿಗಳ ಮಂಡನೆ ಮತ್ತು ಎರಡು ಮಸೂದೆಗಳ ಅಂಗೀಕಾರ ಆಯಿತು. ಕೇಂದ್ರ ಸರ್ಕಾರವನ್ನು ಬೆಂಬಲಿಸಿ ಪ್ರತಿ ನಿರ್ಣಯ ಮಂಡಿಸಲು ಅವಕಾಶ ನೀಡುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮನವಿ ಮಾಡಿದರು. ಸ್ಪೀಕರ್ ಒಪ್ಪಲಿಲ್ಲ. ಗದ್ದಲದ‌ ಮಧ್ಯೆಯೇ ತಾವು ತಂದಿದ್ದ ನಿರ್ಣಯದ ಕರಡನ್ನು ಅಶೋಕ ಓದಿದರು. ಗದ್ದಲ‌ ಮತ್ತಷ್ಟು ಜೋರಾಗುತ್ತಿದ್ದಂತೆ ಸ್ಪೀಕರ್ ಸದನದ ಕಲಾಪವನ್ನು ಸೋಮವಾರ ಬೆಳಿಗ್ಗೆ 9.30ರವರೆಗೆ ಮುಂದೂಡುವುದಾಗಿ ಪ್ರಕಟಿಸಿ ಕಲಾಪಕ್ಕೆ ಅಂತ್ಯ ಹಾಡಿದರು.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು