ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

ಬೆಂಗಳೂರು ಗ್ರಾಮಾಂತರ: ಕಾಂಗ್ರೆಸ್‌ನ ಡಿಕೆ ಸುರೇಶ್ ವಿರುದ್ಧ ಡಾ ಮಂಜುನಾಥ್ ಅವರನ್ನು ಕಣಕ್ಕಿಳಿಸಲು ಎನ್‌ಡಿಎ ಯೋಜನೆ

PPeepal Media Desk

Peepal Media Desk ರಾಜಕೀಯ

• 1 ನಿಮಿಷದ ಓದು

ಬೆಂಗಳೂರು ಗ್ರಾಮಾಂತರ: ಕಾಂಗ್ರೆಸ್‌ನ ಡಿಕೆ ಸುರೇಶ್ ವಿರುದ್ಧ ಡಾ ಮಂಜುನಾಥ್ ಅವರನ್ನು ಕಣಕ್ಕಿಳಿಸಲು ಎನ್‌ಡಿಎ ಯೋಜನೆ

ಬೆಂಗಳೂರು: ಪ್ರಬಲ ಡಿಕೆಶಿ ಸಹೋದರರನ್ನು ಸೋಲಿಸಲು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರನ್ನು ಕಣಕ್ಕಿಳಿಸಲು ಮುಂದಾಗಿದೆ ಎಂದು ವರದಿಯಾಗಿದೆ. ಗುರುವಾರ ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಭೇಟಿಯಾದ ಸಂದರ್ಭದಲ್ಲಿ ಮಂಜುನಾಥ್ ಅವರ ಹೆಸರನ್ನು ಚರ್ಚಿಸಲಾಯಿತು.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ ಮಂಜುನಾಥ್ ಹೃದ್ರೋಗ ತಜ್ಞ ಮತ್ತು ಬೆಂಗಳೂರಿನ ಜಯದೇವ ಹೃದಯರಕ್ತನಾಳದ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿ 18 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ್ದಾರೆ. 67ರ ಹರೆಯದ ಮಂಜುನಾಥ್ ಜನವರಿಯಲ್ಲಿ ರಾಜ್ಯ ಸರ್ಕಾರ ತಮ್ಮ ನೇಮಕಾತಿಯನ್ನು ನವೀಕರಿಸದ ಹಿನ್ನೆಲೆಯಲ್ಲಿ ಹುದ್ದೆಯಿಂದ ಕೆಳಗಿಳಿದಿದ್ದರು.

ಜಯದೇವ ಆಸ್ಪತ್ರೆಯಿಂದ ಹೊರಬಂದ ನಂತರ ಮಂಜುನಾಥ್ ರಾಜಕೀಯ ಧುಮುಕಬಹುದು ಎಂಬ ಊಹಾಪೋಹಗಳು ಹರಿದಾಡುತ್ತಿವೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ದಿಢೀರ್ ದೆಹಲಿ ಭೇಟಿ ಮತ್ತು ಗುರುವಾರ ಅಮಿತ್ ಶಾ ಅವರನ್ನು ಭೇಟಿ ಮಾಡಿರುವುದು ಊಹಾಪೋಹಗಳಿಗೆ ತುಪ್ಪ ಸುರಿಯುವಂತೆ ಮಾಡಿದೆ.

ವರದಿಗಳ ಪ್ರಕಾರ, ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಮಂಜುನಾಥ್ ಅವರ ಹೆಸರನ್ನು ಕುಮಾರಸ್ವಾಮಿ ಸೂಚಿಸಿದ್ದಾರೆ ಎನ್ನಲಾಗಿದೆ. ಷಾ ಅವರು ಪ್ರಸ್ತಾವನೆಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು ಶೀಘ್ರದಲ್ಲೇ ಅಂತಿಮ ನಿರ್ಧಾರ ತಿಳಿಸಲಿದ್ದಾರೆ ಎನ್ನಲಾಗುತ್ತಿದೆ.

ಮಂಜುನಾಥ್ ಅವರನ್ನು ಕಣಕ್ಕಿಳಿಸಲು ಕಾರಣ

ಮಂಜುನಾಥ್ ಅವರು ತಮ್ಮ ವೈದ್ಯರ ಸೇವೆಯಿಂದ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಸರು ಮಾಡಿದ್ದಾರೆ. ಇವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಳಿಯ.

ಅವರು ಕ್ಲೀನ್ ಇಮೇಜ್ ಮತ್ತು ಸಾಮಾಜಿಕ ಸೇವೆಯ ಹಿನ್ನೆಲೆ ಹೊಂದಿದ್ದದು, ಇದು ಡಿಕೆ ಸಹೋದರರನ್ನು ಮೂಲೆಗುಂಪು ಮಾಡಲು ಎನ್ಡಿಎಗೆ ಸಹಾಯ ಮಾಡುತ್ತದೆ. ಮೇಲಾಗಿ, ಮಂಜುನಾಥ್ ಕ್ಷೇತ್ರದಲ್ಲಿ ಪ್ರಾಬಲ್ಯವಿರುವ ಒಕ್ಕಲಿಗ ಸಮುದಾಯಕ್ಕೆ ಸೇರಿದವರು.

ಬಿಜೆಪಿ ಸೇರುತ್ತಾರಾ ಡಾ ಮಂಜುನಾಥ್?

ಹೆಚ್ಚುವರಿ ಸ್ಥಾನಕ್ಕಾಗಿ ಚೌಕಾಸಿ ಮಾಡಲು, ಮಂಜುನಾಥ್ ಅವರನ್ನು ಬಿಜೆಪಿ ಟಿಕೆಟ್‌ನಲ್ಲಿ ಕಣಕ್ಕಿಳಿಸಲು ಜೆಡಿಎಸ್ ಷಾ ಅವರಿಗೆ ಪ್ರಸ್ತಾಪಿಸಿದೆ ಎನ್ನಲಾಗಿದೆ.

ಸೀಟು ಹಂಚಿಕೆ ಮಾತುಕತೆ ವೇಳೆ ಜೆಡಿಎಸ್‌ಗೆ ಹೆಚ್ಚುವರಿ ಸ್ಥಾನ ಪಡೆಯಲು ಅವಕಾಶ ನೀಡಲಿದೆ. ವರದಿಗಳ ಪ್ರಕಾರ ಮಂಡ್ಯ, ಹಾಸನ ಮತ್ತು ಕೋಲಾರ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಬಿಜೆಪಿ ಒಪ್ಪಿಗೆ ನೀಡಿದೆ. ತುಮಕೂರಿನ ಕುರಿತ ಚರ್ಚೆ ಮುಂದಿನ ಸಭೆಯಲ್ಲಿ ಅಂತಿಮಗೊಳ್ಳುವ ನಿರೀಕ್ಷೆಯಿದೆ.

ಆದರೆ, ಗುರುವಾರ ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಮಂಜುನಾಥ್, ರಾಜಕೀಯಕ್ಕೆ ಧುಮುಕುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ ಎಂದು ಹೇಳಿದ್ದಾರೆ.

ಡಿಕೆ ಸುರೇಶ್ ಪ್ರಸ್ತುತ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. 2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಅವರು ಕರ್ನಾಟಕದ ಏಕೈಕ ಕಾಂಗ್ರೆಸ್ ಲೋಕಸಭಾ ಸಂಸದರಾಗಿದ್ದರು.
ಈ ಮೊದಲು ಮಂಜುನಾಥ್‌ ಅವರು ಮಂಡ್ಯದಿಂದ ಸ್ಪರ್ಧಿಸುತ್ತಾರೆನ್ನುವ ಸುದ್ದಿಯಿತ್ತು. ಈಗ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಹೆಸರು ಮುನ್ನೆಲೆಗೆ ಬಂದಿದ್ದು ಇದೂ ಕೂಡಾ ಊಹಾಪೋಹಗಳ ಮಟ್ಟದಲ್ಲೇ ಉಳಿದು ಹೋಗಲಿದೆಯೇ ಅಥವಾ ಕಾರ್ಯರೂಪಕ್ಕೆ ಬರಲಿದೆಯೇ ಎನ್ನುವುದನ್ನು ಕಾದು ನೋಡಬೇಕಿದೆ.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು