Sunday, June 16, 2024

ಸತ್ಯ | ನ್ಯಾಯ |ಧರ್ಮ

ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಾಂದೀಪನಿ ಶಿಷ್ಯವೇತನ: ಅರ್ಜಿ ಗಡುವು ವಿಸ್ತರಣೆ

ಬೆಂಗಳೂರು: ಬ್ರಾಹ್ಮಣ ವಿದ್ಯಾರ್ಥಿಗಳಿಗೆ ನೀಡಲಾಗುವ ಶೈಕ್ಷಣಿಕ ನೆರವನ್ನು ಪಡೆಯಲು ಸರ್ಕಾರ ಗಡುವು ವಿಸ್ತರಿಸಿ ಆದೇಶ ಹೊರಡಿಸಿದೆ.

ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವನ್ನು ಸಕಾಲದಲ್ಲಿ ನೀಡುವ ಸಾಂದೀಪನಿ ಶಿಷ್ಯವೇತನ ಯೋಜನೆಯನ್ನು ಮಾರ್ಚ್‌ 1ರವರೆಗೆ ವಿಸ್ತರಿಸಲಾಗಿದೆ ಎಂದು ಕಂದಾಯ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಸಾಂದೀಪನಿ ಶಿಷ್ಯವೇತನ ಯೋಜನೆಯ ಅಡಿಯಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಅಂದರೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ 15,000 ರೂ.ವರೆಗೆ ವಿದ್ಯಾರ್ಥಿವೇತನ ನೀಡಲಾಗುವುದು. ಇನ್ನೂ ಸಿಇಟಿ ಸೇರಿದಂತೆ ಸಾಮಾನ್ಯ ಪ್ರವೇಶ ಪರೀಕ್ಷೆಗಳ ಮೂಲಕ ಪದವಿ ಮತ್ತು ಸ್ನಾತಕೋತ್ತರ ಪದವಿಗಳಿಗೆ ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದ ಒಟ್ಟು ಮೊತ್ತದ 2/3 ಭಾಗ ಅಥವಾ ಗರಿಷ್ಠ ರೂ.1 ಲಕ್ಷದವರೆಗೆ ಶಿಷ್ಯವೇತನ ನೀಡಲು ಉದ್ದೇಶಿಸಲಾಗಿದೆ.

ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಸಮುದಾಯದ ಅರ್ಹ ವಿದ್ಯಾರ್ಥಿಗಳು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು ಎಂದು ಇಲಾಖೆ ಹೇಳಿದೆ.

ಸಾಂದೀಪನಿ ಶಿಷ್ಯ ವೇತನ ಕುರಿತು


ಮೆಟ್ರಿಕ್ ನಂತರದ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಓದುತ್ತಿರುವ ಬ್ರಾಹ್ಮಣ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ 15,000 ರೂ. ವರೆಗೆ “ಸಾಂದೀಪನಿ” ಯೋಜನೆ ಅಡಿ ಶಿಷ್ಯ ವೇತನ ನೀಡಲಾಗುವುದು.

ಯುಜಿ/ಪಿಜಿ ಸೇರಿದಂತೆ ವಿವಿಧ ಕೋರ್ಸ್ ಗಳಿಗೆ ಸಿಇಟಿ ಪ್ರವೇಶ ಪರೀಕ್ಷೆ ಮೂಲಕ ತೇರ್ಗಡೆಯಾದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ, ದಾಖಲಾತಿ ಶುಲ್ಕದ ಮೊತ್ತದ 2/3 ಭಾಗ ಹಾಗೂ ಗರಿಷ್ಠ ರೂ. 1 ಲಕ್ಷದ ವರೆಗೆ ಬ್ರಾಹ್ಮಣ ಅಭಿವೃದ್ಧಿ ನಿಗಮದ ಮೂಲಕ ಸರ್ಕಾರ ಪಾವತಿಸಲಿದೆ. 

scholarships #brahmin #scholarshipforbrahminstudents

Related Articles

ಇತ್ತೀಚಿನ ಸುದ್ದಿಗಳು