Sunday, June 23, 2024

ಸತ್ಯ | ನ್ಯಾಯ |ಧರ್ಮ

ಬಿಜೆಪಿ ಸಂಸದ ಗೌತಮ್ ಗಂಭೀರ್ ರಾಜಕೀಯ ನಿವೃತ್ತಿ

ನವದೆಹಲಿ: ಅಲ್ಪಾವಧಿಯ ರಾಜಕೀಯ ಜೀವನದಿಂದ ಬೇಸತ್ತಿರುವ ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು, ತಮ್ಮನ್ನು ರಾಜಕೀಯ ಕರ್ತವ್ಯಗಳಿಂದ ಬಿಡುಗಡೆಗೊಳಿಸುವಂತೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಶನಿವಾರ ಮನವಿ ಸಲ್ಲಿಸಿದ್ದಾರೆ.

ಲೋಕಸಭೆ ಚುನಾವಣೆ ಹತ್ತಿರ ಬರುತ್ತಿರುವ ಸಂದರ್ಭದಲ್ಲಿ ಈ ನಿರ್ಧಾರ ತೆಗೆದುಕೊಂಡಿರುವುದು ಅಚ್ಚರಿಗೆ ಕಾರಣವಾಗಿದೆ. ಪೂರ್ವ ದೆಹಲಿಯ ಸಂಸದರಾಗಿರುವ ಗಂಭೀರ್, ತಮ್ಮ X ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, ಜನರ ಸೇವೆ ಮಾಡಲು ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದ ಸಲ್ಲಸಿದ್ದಾರೆ.

“ನನ್ನ ಮೇಲೆ ಬೇಕಾದಷ್ಟು ಕ್ರಿಕೆಟ್ ಸಂಬಂಧಿತ ಜವಾಬ್ದಾರಿಗಳಿವೆ. ನಾನು ಆ ಕಡೆಗೆ ಗಮನ ನೀಡಬೇಕಿದೆ. ಹಾಗಾಗಿ ನನ್ನನ್ನು ರಾಜಕೀಯ ಕರ್ತವ್ಯದಿಂದ ಬಿಡುಗಡೆ ಮಾಡುವಂತೆ ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಮನವಿ ಮಾಡಿದ್ದೇನೆ. ಜನರ ಸೇವೆ ಮಾಡಲು ನನಗೆ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದ ಅರ್ಪಿಸುತ್ತೇನೆ, ಜೈ ಹಿಂದ್,” ಎಂದು X ನಲ್ಲಿ ಪೋಸ್ಟ್ ಮಾಡಿದ್ದಾರೆ.

ಭಾರತೀಯ ಕ್ರಿಕೇಟ್ ತಂಡದ ಮಾಜಿ ಕ್ರಿಕೆಟಿಗರಾಗಿರುವ‌ ಗೌತಮ್ ಗಂಭೀರ್, 2007ರಲ್ಲಿ ಟಿ20 ಹಾಗೂ 2011ರಲ್ಲಿ ಏಕದಿನ‌ ಪಂದ್ಯದಲ್ಲಿ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಭಾರತದ ಪರ 147 ಏಕದಿನ, 58 ಟೆಸ್ಟ್ ಹಾಗೂ 37 ಟಿ20 ಪಂದ್ಯಗಳನ್ನು ಆಡಿದ್ದು, ಕ್ರಮವಾಗಿ 5,238 ರನ್, 4,154 ರನ್ ಮತ್ತು 932 ರನ್. ಅವರು 154 ಐಪಿಎಲ್ ಪಂದ್ಯಗಳಿಂದ 4,218 ರನ್ ಭಾರಿಸಿದ್ದಾರೆ. ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಗಂಭೀರ್ ನಾಯಕತ್ವದಲ್ಲಿ 2012 ಮತ್ತು 2014 ರಲ್ಲಿ ಚಾಂಪಿಯನ್‌ಶಿಪ್ ಗೆದ್ದಿತ್ತು. ಕಳೆದ ಎರಡು ಎಡಿಷನ್‌ಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಆಗಿದ್ದ ಇವರು, ಈಗ ಮತ್ತೊಮ್ಮೆ ಕೆಕೆಆರ್ ತಂಡದ ಮೆಂಟರ್ ಆಗಿ ನೇಮಕಗೊಂಡಿರುವುದನ್ನು ನಾವು ನೆನಪಿಸಿಕೊಳ್ಳಬಹುದು.  

Related Articles

ಇತ್ತೀಚಿನ ಸುದ್ದಿಗಳು