Sunday, June 23, 2024

ಸತ್ಯ | ನ್ಯಾಯ |ಧರ್ಮ

ಪ್ರೊ.ಸಾಯಿಬಾಬಾ ನಿರಪರಾಧಿ, ಬಾಂಬೆ ಹೈಕೋರ್ಟ್ ತೀರ್ಪು

Professor Saibaba: ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿಎನ್ ಸಾಯಿಬಾಬಾ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಸಾಯಿಬಾಬಾ ಮತ್ತು ಇತರ ಐವರನ್ನು ಬಾಂಬೆ ಹೈಕೋರ್ಟ್ ಮಂಗಳವಾರ ಖುಲಾಸೆಗೊಳಿಸಿದೆ.

ತಮ್ಮನ್ನು ತಪ್ಪಿತಸ್ಥರೆಂದು ಘೋಷಿಸಿದ 2017ರ ಸೆಷನ್ಸ್ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಾಯಿಬಾಬಾ ಮತ್ತು ಇತರರು ಸಲ್ಲಿಸಿದ್ದ ಮೇಲ್ಮನವಿಯ ಕುರಿತು ಬಾಂಬೆ ಹೈಕೋರ್ಟ್ ಇಂದು ತನ್ನ ತೀರ್ಪನ್ನು ನೀಡಿತು.

ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ 2014ರ ಮೇ ತಿಂಗಳಲ್ಲಿ ಸಾಯಿಬಾಬಾ ಅವರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದರು. ಗಡ್ಚಿರೋಲಿಯ ಸೆಷನ್ಸ್ ನ್ಯಾಯಾಲಯವು ಸಾಯಿಬಾಬಾ ಅವರನ್ನು ಯುಎಪಿಎ ಕಾಯ್ದೆಯಡಿಯಲ್ಲಿ ಆರೋಪಿಸಿ ಜೀವಾವಧಿ ಶಿಕ್ಷೆ ವಿಧಿಸಿದೆ. ಇದನ್ನು ಸಾಯಿಬಾಬಾ ಅವರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಅಕ್ಟೋಬರ್ 14, 2022ರಂದು ಜೀವಾವಧಿ ಶಿಕ್ಷೆಯನ್ನು ರದ್ದುಗೊಳಿಸಲಾಯಿತು. ಸಾಯಿಬಾಬಾ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆಯೂ ಆದೇಶಿಸಿತ್ತು. ಆದರೆ, ಪ್ರೊಫೆಸರ್ ಸಾಯಿಬಾಬಾ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದರಿಂದ ಅವರಿಗೆ ಯಾವುದೇ ಪರಿಹಾರ ಸಿಕ್ಕಿರಲಿಲ್ಲ.

ಐವತ್ನಾಲ್ಕು ವರ್ಷದ ಸಾಯಿಬಾಬಾ ಅವರು ಗಾಲಿಕುರ್ಚಿಗೆ ಸೀಮಿತವಾದ ಅಂಗವಿಕಲ ವ್ಯಕ್ತಿ. ಸದ್ಯ ನಾಗ್ಪುರ ಕೇಂದ್ರ ಕಾರಾಗೃಹದಲ್ಲಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು