ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಹಾರಾಷ್ಟ್ರದಲ್ಲಿ NDA ಬಿರುಕು?: ತಡರಾತ್ರಿಯವರೆಗೂ ಸಭೆ ನಡೆದರೂ ಬಗೆಹರಿಯದ ಸೀಟು ಹಂಚಿಕೆ

PPeepal Media Desk

Peepal Media Desk • ದೇಶ

• 1 ನಿಮಿಷದ ಓದು

ಮಹಾರಾಷ್ಟ್ರದಲ್ಲಿ NDA ಬಿರುಕು?: ತಡರಾತ್ರಿಯವರೆಗೂ ಸಭೆ ನಡೆದರೂ ಬಗೆಹರಿಯದ ಸೀಟು ಹಂಚಿಕೆ

ಮುಂಬೈ: ಮಹಾರಾಷ್ಟ್ರದಲ್ಲಿ ಎನ್‌ಡಿಎ ಬಣಗಳಾದ ಬಿಜೆಪಿ, ಶಿವಸೇನೆ (ಶಿಂಧೆ ಬಣ) ಹಾಗೂ ಎನ್‌ಸಿಪಿ (ಅಜಿತ್‌ ಬಣ) ನಡುವಿನ ಸೀಟು ಹಂಚಿಕೆ ಮಾತುಕತೆಯ ಸಭೆಯು ಮಂಗಳವಾರ ತಡರಾತ್ರಿವರೆಗೂ ನಡೆದರೂ ಅಂತಿಮಗೊಂಡಿಲ್ಲ ಎಂದು ಮೂಲಗಳು ತಿಳಿಸಿವೆ. ಸೀಟು ಹಂಚಿಕೆ ಬಿಕ್ಕಟ್ಟು ಬಗೆಹರಿಯುವ ಬದಲು ಮತ್ತಷ್ಟು ಕಗ್ಗಂಟಾಗಿದೆ ಎನ್ನಲಾಗಿದೆ.


ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡಣವಿಸ್‌ ಹಾಗೂ ಅಜಿತ್‌ ಪವಾರ್‌ ಅವರ ಜೊತೆ ಮೊದಲ ಸುತ್ತಿನ ಮಾತುಕತೆ ನಡೆಸಿದರು. ನಂತರ ಎರಡನೇ ಸುತ್ತಿನಲ್ಲಿ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಅವರೊಂದಿಗೆ ಅಮಿತ್‌ ಶಾ ಮಾತುಕತೆ ನಡೆಸಿದರು. ಈ ಎರಡೂ ಸಭೆಗಳಲ್ಲಿ ಸೀಟು ಹಂಚಿಕೆ ಸಂಬಂಧ ಒಮ್ಮತಕ್ಕೆ ಬರಲು ಸಾಧ್ಯವಾಗಲಿಲ್ಲ. ಬುಧವಾರವೂ ಮಾತುಕತೆ ಮುಂದುವರಿಯಲಿದೆ ಎಂದು ಬಿಜೆಪಿ ಮೂಲಗಳಿಂದ ತಿಳಿದು ಬಂದಿದೆ.


ಅಮಿತ್‌ ಶಾ ಅವರು ಶಿವಸೇನೆ, ಎನ್‌ಸಿಪಿ ಮುಂದಿಟ್ಟಿರುವ ಸೂತ್ರವನ್ನು ಶಿಂಧೆ ಮತ್ತು ಅಜಿತ್‌ ಪವಾರ್‌ ಒಪ್ಪಲು ತಯಾರಿಲ್ಲ. ನಮ್ಮಗೆ ಮತ್ತಷ್ಟು ಸೀಟುಗಳು ಬೇಕು ಎಂದು ಪಟ್ಟು ಹಿಡಿದಿದ್ದಾರೆ ಎಂದು ಶಿವಸೇನೆ ಮೂಲಗಳಿಂದ ತಿಳಿದು ಬಂದಿದೆ.


ಮೂರು ಪಕ್ಷಗಳ ಬಲ್ಲಮೂಲಗಳ ಪ್ರಕಾರ 48 ಲೋಕಸಭೆ ಕ್ಷೇತ್ರಗಳ ಪೈಕಿ, ಬಿಜೆಪಿ 30, ಶಿವಸೇನೆ 12, ಎನ್‌ಸಿಪಿ 6 ಸ್ಥಾನಗಳಲ್ಲಿ ಸ್ಫರ್ಧಿಸುವ ಸೂತ್ರವನ್ನು ಅಮಿತ್‌ ಶಾ ಅವರು ಶಿವಸೇನೆ, ಎನ್‌ಸಿಪಿ ಮುಂದಿಟ್ಟಿದ್ದಾರೆ. ಆದರೆ ಶಿವಸೇನೆ 18, ಎನ್‌ಸಿ‍ಪಿ 10 ಕ್ಷೇತ್ರಗಳಿಗೆ ಪಟ್ಟು ಹಿಡಿದಿವೆ. ಇತ್ತ ಇಷ್ಟೂ ಸ್ಥಾನಗಳನ್ನು ಮಿತ್ರ ಪಕ್ಷಗಳಿಗೆ ಬಿಟ್ಟುಕೊಡಲು ಬಿಜೆಪಿ ತಯಾರಿಲ್ಲ ಎಂದು ಪಡಣವೀಸ್‌ ಆಪ್ತರು ಮಾಹಿತಿ ನೀಡಿದ್ದಾರೆ.


ಇಂದು ಮತ್ತೆ ಸರಣಿ ಸಭೆಗಳನ್ನು ನಡೆಸಿ ಸೀಟು ಹಂಚಿಕೆ ಅಂತಿಮಗೊಳಿಸುವ ಸಾಧ್ಯತೆ ಇದೆ.ಈ ಬಿಕ್ಕಟ್ಟಿನಿಂದಾಗಿ ಒಮ್ಮತದ ನಿರ್ಧಾರಕ್ಕೆ ಬರಲು ಸಾಧ್ಯವಾಗದೇ ಎನ್‌ಡಿಎನಲ್ಲಿ ಬಿರುಕು ಸಹ ಮೂಡಬಹುದು ಎನ್ನಲಾಗುತ್ತಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು