ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಾವು ನಡೆಸಿರುವ ಎಲ್ಲಾ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದೆ. ಒಗ್ಗಟ್ಟಾಗಿ ಕೆಲಸ ಮಾಡಿದರೆ ಗೆಲುವು ಖಚಿತ: ಸಿ.ಎಂ.ಸಿದ್ದರಾಮಯ್ಯ

PPeepal Media Desk

Peepal Media Desk ರಾಜಕೀಯ

• 1 ನಿಮಿಷದ ಓದು

ನಾವು ನಡೆಸಿರುವ ಎಲ್ಲಾ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದೆ. ಒಗ್ಗಟ್ಟಾಗಿ ಕೆಲಸ ಮಾಡಿದರೆ ಗೆಲುವು ಖಚಿತ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು ಮಾ 22: ನಾವು ನಡೆಸಿರುವ ಎಲ್ಲಾ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದೆ. ಒಗ್ಗಟ್ಟಾಗಿ ಚುನಾವಣೆ ಮಾಡಿ. ಉತ್ತರ ಕನ್ನಡ ಜಿಲ್ಲೆ ಸೇರಿ ಬೆಳಗಾವಿಯ ಜಿಲ್ಲೆಗಳಿಗೆ ಒಳಪಡುವ ಮೂರೂ ಲೋಕಸಭಾ ಕ್ಷೇತ್ರಗಳಲ್ಲೂ ಖಚಿತವಾಗಿ ಗೆಲುವು ಸಾಧಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕಾವೇರಿಯಲ್ಲಿ ನಡೆದ ಬೆಳಗಾವಿ ಜಿಲ್ಲೆಯ ಸಚಿವರು, ಶಾಸಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಮುಖಂಡರ ಸಭೆಯಲ್ಲಿ ಮುಖ್ಯಮಂತ್ರಿಗಳು ಬೆಳಗಾವಿಯ ಎರಡು ಲೋಕಸಭಾ ಕ್ಷೇತ್ರ ಹಾಗೂ ಬೆಳಗಾವಿ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲೂ ಗೆಲುವು ಸಾಧಿಸಬಹುದಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಐದು ಗ್ಯಾರಂಟಿ ಯೋಜನೆಗಳು ಬೆಳಗಾವಿ ಜಿಲ್ಲೆಯ ಲಕ್ಷಾಂತರ ಕುಟುಂಬಗಳ ಮತ್ತು ಮಹಿಳೆಯರ ಬದುಕಿನ ಸಂಕಟವನ್ನು ಕಡಿಮೆ ಮಾಡಿವೆ. ಇದಕ್ಕಾಗಿ ಯುವತಿಯರು ಮತ್ತು ಮಹಿಳೆಯರು ಶೇ80 ರಷ್ಟು ನಮ್ಮ ಪರವಾಗಿ ಇದ್ದಾರೆ ಎನ್ನುವ ಸಕಾರಾತ್ಮಕ ವರದಿ ಸಮೀಕ್ಷೆಗಳಿಂದ ಹೊರ ಬಂದಿವೆ. ನಾವು ಜನರ ಮನೆ ಬಾಗಿಲಿಗೆ ಹೋಗಿ ಪ್ರತೀ ತಿಂಗಳು ಪ್ರತೀ ಕುಟುಂಬಕ್ಕೆ 5-6 ಸಾವಿರ ರೂಪಾಯಿ ಕೊಡುತ್ತಿರುವ ಮತ್ತು ವರ್ಷಕ್ಕೆ 50-60 ಸಾವಿರ ಪ್ರತಿ ಕುಟುಂಬದ ಖಾತೆಗೆ ಜಮೆ ಆಗುತ್ತಿರುವುದನ್ನು ಮನವರಿಕೆ ಮಾಡಿಸಿ, ಜನರ ನಡುವೆ ಗಟ್ಟಿಯಾಗಿ ನಿಂತು ಗೆದ್ದು ಬನ್ನಿ ಎಂದು ಸಿಎಂ ಕರೆ ನೀಡಿದರು.

ಮುಖ್ಯಮಂತ್ರಿಗಳ ಭರವಸೆಯ ಮಾತುಗಳಿಗೆ ಸ್ಪಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಬೆಳಗಾವಿಯಲ್ಲಿ ನೆವು ಎಲ್ಲರೂ ಒಟ್ಟಾಗಿ ಅಖಾಡಕ್ಕೆ ಇಳಿದಿದ್ದೇವೆ. ಎರಡೂ ಕ್ಷೇತ್ರದಲ್ಲೂ ಗೆದ್ದು ಬಂದು ಈ ಗೆಲುವನ್ನು ನಿಮಗೆ ಅರ್ಪಿಸುತ್ತೇವೆ ಎಂದರು.

ಉತ್ತರ ಕನ್ನಡದಲ್ಲಿ ಬದಲಾವಣೆ ವಾತಾವರಣ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲೂ ಜನರ ಈ ಬಾರಿ ಬದಲಾವಣೆ ಬಯಸಿರುವುದು, ಹಿಂದಿನ ಸಂಸದರು ಕ್ಷೇತ್ರಕ್ಕೆ ಏನೂ ಮಾಡಿಲ್ಲ ಎನ್ನುವ ಅಭಿಪ್ರಾಯಗಳು ಉತ್ತರ ಕನ್ನಡ ಜಿಲ್ಲೆಯ ಜನರ ಆಕ್ರೋಶಕ್ಕೆ ಕಾರಣವಾಗಿದೆ ಎನ್ನುವ ಅಭಿಪ್ರಾಯಗಳು ಸಮೀಕ್ಷೆಗಳಲ್ಲಿ ವ್ಯಕ್ತವಾಗಿವೆ. ಹೀಗಾಗಿ ಇಲ್ಲೂ ಗೆಲುವಿನ ಅವಕಾಶಗಳು ಇವೆ ಎನ್ನುವ ಬಗ್ಗೆಯೂ ಸಭೆಯಲ್ಲಿ ಹಲವರು ಅಭಿಪ್ರಾಯ ವ್ಯಕ್ತಪಡಿಸಿದರು.

ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ ಸೇರಿ ಮಾಜಿ ಸಚಿವರಾದ ಲಕ್ಷ್ಮಣ್ ಸವದಿ ಮತ್ತು ಜಿಲ್ಲೆಯ ಎಲ್ಲಾ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ 40 ಕ್ಕೂ ಹೆಚ್ಚು ಮಂದಿ ಜಿಲ್ಲಾ ಮುಖಂಡರು ಸಭೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು