ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನನ್ನದು ಗರ್ವ ಅಲ್ಲ, ಕನ್ನಡಿಗನ ಸಹಜ ಸ್ವಾಭಿಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

ನನ್ನದು ಗರ್ವ ಅಲ್ಲ, ಕನ್ನಡಿಗನ ಸಹಜ ಸ್ವಾಭಿಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಜೆಡಿ(ಎಸ್) ವರಿಷ್ಠ ಹೆಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ, ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ ತಲೆ ಎತ್ತಿ, ಎದೆಯುಬ್ಬಿಸಿ ಪ್ರಶ್ನಿಸುವ ಮತ್ತು ಹೋರಾಟ ನಡೆಸುವ ಸ್ವಾಭಿಮಾನ ಎನ್ನುವುದನ್ನು ಅತ್ಯಂತ ವಿನಯಪೂರ್ವಕವಾಗಿ ಅವರ ಗಮನಕ್ಕೆ ತರಬಯಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ದೇವೇಗೌಡರ ಹೇಳಿಕೆಗಳಿಗೆ ಖಾರವಾಗಿ ಪ್ರತಿಕ್ರಿಯಿಸಿರುವ ಅವರು, “ವೈಯಕ್ತಿಕ ಇಲ್ಲವೆ ರಾಜಕೀಯ ಲಾಭಕ್ಕಾಗಿ ನಾನು ಯಾರ ಜೊತೆಯಲ್ಲಿಯೂ ರಾಜಿ ಮಾಡಿಕೊಳ್ಳಲಾರೆ, ಅಂತಹ ಪರಿಸ‍್ಥಿತಿ ಬಂದೊದಗಿದರೆ ರಾಜಕೀಯವಾಗಿ ನಿವೃತ್ತಿಯಾಗುತ್ತೇನೆ ವಿನ: ಕರ್ನಾಟಕದ ಹಿತಾಸಕ್ತಿಯ ವಿರೋಧಿಗಳ ಜೊತೆಯಲ್ಲಿ ನಿಮ್ಮಂತೆ ಹೊಂದಾಣಿಕೆ ಮಾಡಿಕೊಳ್ಳಲಾರೆ” ಎಂದು ಹೇಳಿದ್ದಾರೆ.

ದೇವೇಗೌಡರ ಜೊತೆ ರಾಜಕೀಯವಾಗಿ ನನಗೆ ಭಿನ್ನಾಭಿಪ್ರಾಯವಿದ್ದರೂ. ನಮ್ಮ ನೆಲ, ಜಲ ಮತ್ತು ಭಾಷೆಯ ರಕ್ಷಣೆಯ ಬಗೆಗಿನ ಅವರ ನಿಲುವಿನ ಬಗ್ಗೆ ಗೌರವ ಇತ್ತು. ಆದರೆ ಕಳೆದ ಹತ್ತು ವರ್ಷಗಳ ಅಧಿಕಾರವಧಿಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹೆಜ್ಜೆಹೆಜ್ಜೆಗೂ ಕರ್ನಾಟಕದ ಹಿತಾಸಕ್ತಿಯ ವಿರುದ್ಧವೇ ಕೆಲಸ ಮಾಡಿದೆ. ನಾಡಧ್ವಜಕ್ಕೆ ವಿರೋಧ, ಹಿಂದಿ ಹೇರಿಕೆ, ಕಾವೇರಿ, ಕೃಷ್ಣ, ಮಹದಾಯಿ ಜಲವಿವಾದಗಳಲ್ಲಿ ಅನ್ಯಾಯ, ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗ ಯುವಜನರಿಗೆ ವಂಚನೆ…. ಹೀಗೆ ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ದ್ರೋಹ ಎಸಗುತ್ತಾ ಬಂದಿದೆ. ಹೀಗಿದ್ದರೂ “ದೇಶದ ಎಲ್ಲ ಸಮಸ್ಯೆಗಳಿಗೆ ಮೋದಿ ಮತ್ತು ಶಾ ಬಳಿ ಪರಿಹಾರ ಇದೆ” ಎಂದು ಹೇಳುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯಾದರೂ ನಿಮ್ಮನ್ನು ಚುಚ್ಚಲಿಲ್ಲವೇ? ಎಂದು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ಮುಖ್ಯಮಂತ್ರಿ ಕೇಳಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯಕ್ಕೆ ಕ್ಷಮೆಯೇ ಇಲ್ಲ. ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರದ ಖಜಾನೆಗೆ ಸಂದಾಯವಾಗುವ ಕನ್ನಡಿಗರ ಒಂದು ರೂಪಾಯಿಗೆ ಪ್ರತಿಯಾಗಿ ಕೇವಲ ಹದಿಮೂರು ಪೈಸೆಯಷ್ಟು ಹಣ ಮಾತ್ರ ಕರ್ನಾಟಕಕ್ಕೆ ವಾಪಸು ಬರುತ್ತಿದೆ. ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮೊದಲಾದ ರಾಜ್ಯಗಳ ಪ್ರಾದೇಶಿಕ ಪಕ್ಷಗಳು ಕೂಡಾ ಕೇಂದ್ರ ಸರ್ಕಾರದ ಅನ್ಯಾಯವನ್ನು ಕೂಗಿ ಕೂಗಿ ಹೇಳುತ್ತಿವೆ. ಆದರೆ ಕರ್ನಾಟಕದ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಮಾತ್ರ ನಮ್ಮ ನೆಲ-ಜಲ-ಭಾಷೆಯ ವಿರೋಧಿಗಳ ಜೊತೆಯಲ್ಲಿ ರಾಜಿ ಮಾಡಿಕೊಂಡು ಕನ್ನಡಿಗರಿಗೆ ದ್ರೋಹ ಎಸಗಿದೆ ಎಂದು ಆರೋಪಿಸಿದ್ದಾರೆ.

ಮುಂದುವರೆದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು “ಸನ್ಮಾನ್ಯ ದೇವೇಗೌಡರೇ, ಎಪ್ಪತ್ತು ವರ್ಷಗಳ ಕಾಲ ರಾಜಕೀಯದಲ್ಲಿದ್ದು ಕನ್ನಡಿಗರ ಪ್ರೀತಿ-ಅಭಿಮಾನವನ್ನು ಉಂಡು ಬೆಳೆದ ನೀವು ‘’ನಾವು ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನಲ್ಲಿಯೇ ಚುನಾವಣೆ ನಡೆಸುತ್ತೇವೆ” ಎಂಬ ಶರಣಾಗತಿಯ ಹೇಳಿಕೆಯನ್ನು ನೀಡುವಾಗ ಕನಿಷ್ಠ ನಿಮ್ಮ ಆತ್ಮಾಭಿಮಾನವೂ ಕುಟುಕಲಿಲ್ಲವೇ? ಕನ್ನಡ-ಕರ್ನಾಟಕ ವಿರೋಧಿ ನಾಯಕನಿಗೆ ಈ ರೀತಿ ಶರಣಾಗುವುದು ಸಮಸ್ತ ಕನ್ನಡಿಗರಿಗೆ ಮಾಡುವ ದ್ರೋಹ ಎಂದು ನಿಮಗೆ ಅನಿಸಲಿಲ್ಲವೇ? ನಿಮ್ಮೊಳಗಿನ ರಾಜಕೀಯ ನಾಯಕ ಅಷ್ಟೊಂದು ದುರ್ಬಲ ಅಸಹಾಯಕನಾಗಿ ಹೋದನೇ?” ಎಂದು ಕೇಳಿದ್ದಾರೆ

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು