ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬರ ಪರಿಹಾರದ ವಿಷಯದಲ್ಲಿ ರಾಜ್ಯಕ್ಕಾದ ಅನ್ಯಾಯದ ವಿರುದ್ಧ ಬೀದಿಗಳಲ್ಲಿ ಮಾತ್ರವಲ್ಲ ನ್ಯಾಯಾಲಯದಲ್ಲೂ ಹೋರಾಟ ಮುಂದುವರೆಯಲಿದೆ. – ಸಿದ್ದರಾಮಯ್ಯ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಬರ ಪರಿಹಾರದ ವಿಷಯದಲ್ಲಿ ರಾಜ್ಯಕ್ಕಾದ ಅನ್ಯಾಯದ ವಿರುದ್ಧ ಬೀದಿಗಳಲ್ಲಿ ಮಾತ್ರವಲ್ಲ ನ್ಯಾಯಾಲಯದಲ್ಲೂ ಹೋರಾಟ ಮುಂದುವರೆಯಲಿದೆ. – ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಬರಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಗೆ ಕೂಡಾ ತಪ್ಪು ಮಾಹಿತಿ ನೀಡಿ ನ್ಯಾಯಾಲಯದ ಹಾದಿ ತಪ್ಪಿಸುವ ಪ್ರಯತ್ನ ಮಾಡಿರುವುದು ವಿಷಾದನೀಯ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಹೇಳಿದ್ದಾರೆ.

ನ್ಯಾಯಬದ್ಧವಾಗಿ ಕರ್ನಾಟಕಕ್ಕೆ ನೀಡಬೇಕಾಗಿರುವ ಬರಪರಿಹಾರವನ್ನು ನೀಡದೆ ಕೇಂದ್ರ ಸರ್ಕಾರ ಕಳೆದ ಐದಾರು ತಿಂಗಳುಗಳಿಂದ ಸತಾಯಿಸುತ್ತಿರುವುದನ್ನು ಕಂಡು ಬೇರೆ ದಾರಿ ಕಾಣದೆ ನ್ಯಾಯ ಕೋರಿ ನಮ್ಮ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೊರೆ ಹೋಗಿತ್ತು. ಇಂದು ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಕೇಂದ್ರ ಸರ್ಕಾರದ ಅಡ್ವೋಕೇಟ್ ಜನರಲ್ ತುಷಾರ್ ಮೆಹ್ತಾ ಅವರು ಬರಪರಿಹಾರ ವಿಳಂಬಕ್ಕೆ ಕರ್ನಾಟಕ ಸರ್ಕಾರವೇ ಕಾರಣ. ಇದರ ಹಿಂದೆ ರಾಜಕೀಯ ಉದ್ದೇಶ ಇದೆ ಎಂಬ ಅಭಿಪ್ರಾಯ ಮೂಡುವಂತೆ ವಾದ ಮಾಡಿದ್ದಾರೆ. ಇದು ಖಂಡನೀಯ.

‘’ ಬರ ಪರಿಹಾರಕ್ಕಾಗಿ ಅವರು (ಕರ್ನಾಟಕ) ನಮ್ಮನ್ನು (ಕೇಂದ್ರ ಸರ್ಕಾರ)ವನ್ನು ಸಂಪರ್ಕಿಸಬಹುದಿತ್ತು. ಈ ಅರ್ಜಿ ಸಲ್ಲಿಸಿರುವ ಸಮಯದ ಮಹತ್ವ ನಮಗೆ ಅರ್ಥವಾಗುತ್ತದೆ. ಈ ಅರ್ಜಿಗೆ ಪ್ರತಿಕ್ರಿಯೆ ಕೋರಿ ನಮಗೆ ನೋಟೀಸ್ ನೀಡಬಾರದು. ಹಾಗೆ ಮಾಡಿದರೆ ಅದು ಸುದ್ದಿಯಾಗುತ್ತದೆ’’ ಎಂದು ಅಡ್ವೋಕೇಟ್ ಜನರಲ್ ಕೇಂದ್ರ ಸರ್ಕಾರದ ವೈಫಲ್ಯವನ್ನು ಮುಚ್ಚಿಹಾಕಲು ಕರ್ನಾಟಕ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದಾರೆ.

ಕಳೆದ ಎರಡು ಮೂರು ತಿಂಗಳ ಅವಧಿಯಲ್ಲಿ ನಾನು ಮತ್ತೆ ಮತ್ತೆ ಹೇಳಿರುವಂತೆ ‘ಬರಗಾಲಕ್ಕೆ ಪರಿಹಾರ ಕೋರಿ ನಮ್ಮ ಸರ್ಕಾರ ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿಯೇ ನಷ್ಟದ ವಿವರ ಮತ್ತು ನಿರೀಕ್ಷಿತ ಪರಿಹಾರದ ಮೊತ್ತವನ್ನು ಒಳಗೊಂಡ ಮನವಿ ಪತ್ರವನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದೆವು. ಅದರ ನಂತರ ನಾನು ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಮಾಡಿದ್ದೆವು. ನಮ್ಮ ಉಪಮುಖ್ಯಮಂತ್ರಿಗಳು ಪ್ರತ್ಯೇಕವಾಗಿ ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿದ್ದರು. ಹೀಗಿದ್ದರೂ ಕರ್ನಾಟಕ ಸರ್ಕಾರ ವಿಳಂಬವಾಗಿ ಮನವಿ ಸಲ್ಲಿಸಿದೆ ಎಂದು ಕೇಂದ್ರ ಹಣಕಾಸು ಸಚಿವರು ಮತ್ತು ಗೃಹಸಚಿವರು ಯಾವ ಮುಜುಗರ ಇಲ್ಲದೆ ಸುಳ್ಳು ಹೇಳುತ್ತಾ ಬಂದಿದ್ದಾರೆ. ಇಂದು ಇದೇ ಸುಳ್ಳನ್ನು ಕೇಂದ್ರ ಸರ್ಕಾರ ಸರ್ವೋಚ್ಚ ನ್ಯಾಯಾಲಯದ ಮುಂದೆಯೂ ಹೇಳಿದೆ ಎಂದು ಅವರು ತಮ್ಮ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಅಡ್ವೋಕೇಟ್ ಜನರಲ್ ಅವರ ಹೇಳಿಕೆಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್ ಸದ್ಯಕ್ಕೆ ಪ್ರಕರಣವನ್ನು ಎರಡು ವಾರಗಳ ಕಾಲ ಮುಂದೂಡಿದೆ. ಮುಂದಿನ ವಿಚಾರಣೆಯೊಳಗೆ ಕೇಂದ್ರ ಸರ್ಕಾರ ತನ್ನ ಉತ್ತರವನ್ನು ಸಿದ್ಧಗೊಳಿಸಬೇಕಾಗಿದೆ.

ಬರಪರಿಹಾರ ನೀಡಿಕೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡಿರುವ ಅನ್ಯಾಯದ ವಿರುದ್ಧದ ನಮ್ಮ ಹೋರಾಟ ಬೀದಿಗಳಲ್ಲಿ ಮಾತ್ರವಲ್ಲ ನ್ಯಾಯಾಲಯದಲ್ಲಿಯೂ ಮುಂದುವರಿಯಲಿದೆ. ಕೇಂದ್ರ ಸರ್ಕಾರದ ಸುಳ್ಳುಗಳನ್ನು ಒಂದೊಂದಾಗಿ ಬಯಲುಗೊಳಿಸುತ್ತಾ ಅದರ ನಿಜಸ್ವರೂಪವನ್ನು ರಾಜ್ಯದ ಜನತೆಯ ಮುಂದಿಡುವ ಪ್ರಯತ್ನವನ್ನು ಮಾಡಲಿದ್ದೇವೆ ಎಂದು ಅವರು ಹೇಳಿದ್ದಾರೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು