ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬೆಲೆ ಏರಿಕೆ ಮತ್ತು ದ್ವೇಷ ದೇಶವನ್ನು ನಾಶ ಮಾಡುತ್ತದೆ: ರಾಹುಲ್‌ ಗಾಂಧಿ

PPeepal Media

Peepal Media • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಬೆಲೆ ಏರಿಕೆ ಮತ್ತು ದ್ವೇಷ ದೇಶವನ್ನು ನಾಶ ಮಾಡುತ್ತದೆ: ರಾಹುಲ್‌ ಗಾಂಧಿ

ನವದೆಹಲಿ: ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ, ಒಳಗೊಂಡಂತೆ ಒಕ್ಕೂಟ ಸರಕಾರದ ಹಲವು ನಿಯಮಗಳನ್ನು ವಿರೋಧಿಸಿ ಕಾಂಗ್ರೆಸ್‌ ಇಂದು ದೆಹಲಿಯ ರಾಮ ಲೀಲಾ ಮೈದಾನದಲ್ಲಿ ಬೃಹತ್‌ ರ್ಯಾಲಿ ನಡೆಸಿದೆ.

ಈ ಮೆಹಂಗಾಯಿ ಪರ್‌ ಹಲ್ಲಾ ಬೋಲ್‌ ರ್ಯಾಲಿಯಲ್ಲಿ ಮಾತಾಡಿದ ರಾಹುಲ್‌ ಗಾಂಧಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ದೇಶದಲ್ಲಿ ದ್ವೇಷ ಹೆಚ್ಚಾಗಿದೆ ಎಂದು ಹೇಳಿದರು. ಬಿಜೆಪಿ ಮತ್ತು ಆರ್‌ಎಸ್‌ ಜನರನ್ನು ವಿಭಜಿಸುತ್ತಾ ಜನರಲ್ಲಿ ಭಯ ಬಿತ್ತುತ್ತಿವೆ. ನರೆಂದ್ರ ಮೋದಿ ಸರಕಾರದಿಂದ ಬಡವರು, ರೈತರು, ಸಣ್ಣ ವ್ಯಾಪಾರಿಗಳಿಗೆ ಏನಾದರೂ ಪ್ರಯೋಜನವಾಗಿದೆಯೇ ಎಂದು ಪ್ರಶ್ನಿಸಿದ ಅವರು ಕೇವಲ ಇಬ್ಬರು ದೊಡ್ಡ ಕೈಗಾರಿಕೋದ್ಯಮಿಗಳು ಮಾತ್ರ ಈ ದ್ವೇಷ ಮತ್ತು ಭಯದ ಲಾಭ ಪಡೆಯುತ್ತಿದ್ದಾರೆ ಎಂದು ಸರಕಾರದ ಮೇಲೆ ಠೀಕಾ ಪ್ರಹಾರ ನೀಡಿದರು.

ಪ್ರಧಾನಿ ವಿರುದ್ಧ ಕಿಡಿಕಾರಿದ ರಾಹುಲ್‌ ಮೂರು ಕಾನೂನುಗಳನ್ನು ತಂದದ್ದು ರೈತರಿಗಾಗಿ ಅಲ್ಲ ಅವುಗಳನ್ನು ತಂದಿರುವುದು ಎರಡು ಕಾರ್ಪೋರೇಟ್‌ ಸಂಸ್ಥೆಗಳಿಗೆ. ಆದರೆ ರೈತರ ಶಕ್ತಿಗೆ ಮಣಿದ ಮೋದಿ ಆ ಮೂರು ಕೃಷಿ ಕಾನೂನುಗಳನ್ನು ರದ್ದು ಮಾಡಬೇಕಾಯಿತು. ಬಿಜೆಪಿ ದೇಶವನ್ನು ಒಡೆಯುತ್ತಿದೆ, ಕಾಂಗ್ರೆಸ್‌ ದೇಶವನ್ನು ಒಗ್ಗೂಡಿಸುತ್ತದೆ. ನಾವು ದ್ವೇಷವನ್ನು ಅಳಿಸುತ್ತೇವೆ, ದ್ವೇಷವನ್ನು ಮಣಿಸಿದಾಗ ಮಾತ್ರ ದೇಶವನ್ನು ಪ್ರಗತಿಯತ್ತ ಮುನ್ನಡೆಸಲು ಸಾಧ್ಯ ಎಂದು ಅವರು ಹೇಳಿದರು.

ರ್ಯಾಲಿಯಲ್ಲಿ ಮಾತಾಡಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ನಿರುದ್ಯೋಗ ಮತ್ತು ಬೆಲೆ ಏರಿಕೆ ಮೋದಿ ಸರಕಾರದ ಇಬ್ಬರು ಸಹೋದರರು ಎಂದು ವಾಗ್ದಾಳಿ ನಡೆಸಿದರು. ನಿರುದ್ಯೋಗ ಮತ್ತು ಬೆಲೆ ಏರಿಕೆ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹುಡುಕಬೇಕಿದೆ ಮತ್ತು ಮೋದಿ ಸರಕಾರಕ್ಕೆ ಪರಿಣಾಮಕಾರಿ ಸಂದೇಶವನ್ನು ನೀಡಬೇಕಿದೆ ಎಂದು ಪ್ರತಿಭಟನೆಯ ಉದ್ದೇಶವನ್ನು ಸ್ಪಷ್ಟ ಪಡಿಸುತ್ತಾ ನುಡಿದರು.

PPeepal Media

Peepal Media

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು