Sunday, June 16, 2024

ಸತ್ಯ | ನ್ಯಾಯ |ಧರ್ಮ

ರಾಜ್ಯದಲ್ಲಿ ಇನ್ನು 3 ದಿನ ಅತ್ಯಧಿಕ ತಾಪಮಾನ: ಹವಾಮಾನ ಇಲಾಖೆ ಎಚ್ಚರಿಕೆ

ಇಂದಿನಿಂದ ರಾಜ್ಯದಲ್ಲಿನ ಹವಾಮಾನದ ಉಷ್ಣಾಂಶದಲ್ಲಿ ಏರಿಕೆ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಏಪ್ರಿಲ್ 27 ರಿಂದ ಏಪ್ರಿಲ್ 30 ರ ವರೆಗೆ 3 ದಿನಗಳ ಕಾಲ ತಾಪಮಾನ ಮಾಮೂಲಿಗಿಂತ 2, 3 ಪಟ್ಟು ಏರಿಕೆ ಕಾಣಲಿದೆ ಎಂದು ಇಲಾಖೆ ತಿಳಿಸಿದೆ.

ಉಷ್ಣ ಅಲೆಯ ನಡುವೆ ಏ.30ರಿಂದ ಮೂರು ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಉತ್ತರ ಭಾಗದ ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೀದರ್‌, ವಿಜಯನಗರ, ಗದಗ ಹಾಗೂ ದಕ್ಷಿಣ ಭಾಗದ ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಹಾವೇರಿ, ಮೈಸೂರು ಹಾಗೂ ಮಂಡ್ಯದಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ.

ಏ.30ರಿಂದ ಬೀದರ್‌, ಕಲಬುರಗಿ, ಯಾದಗಿರಿ, ವಿಜಯಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು ಹಾಗೂ ಚಿತ್ರದುರ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಮೇ 2024ರ ಅವಧಿಯವರೆಗೆ ಬಿಸಿ ವಾತಾವರಣ ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಾಗಿರುತ್ತದೆ ಎಂದು ಹವಮಾನ ಇಲಾಖೆ ಸೂಚಿಸಿದೆ. ತಾಪಮಾನದ ಹೆಚ್ಚಳದಿಂದ ರಾಜ್ಯಾದ್ಯಂತ ಸಾಮಾನ್ಯ ಶಾಖದ ಅಲೆಗಳ ದಿನಗಳನ್ನು 2-14 ದಿನಗಳ ಮೀರುವ ಸಾಧ್ಯತೆ ಇರುತ್ತದೆ ಎಂದು ಮುನ್ಸೂಚನೆ ಇದೆ. ಈ ಸಂದರ್ಭದಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಬಿಸಿಲಿನಲ್ಲಿ ಹೋಗಬಾರದು. ಅಂದರೆ, ಮಧ್ಯಾಹ್ನ 12 ರಿಂದ 3 ಗಂಟೆಯೊಳಗೆ ಹೊರಗೆ ಹೋಗಬಾರದು. ಇದು ಸಹಜವಾಗಿ ಮನುಷ್ಯ ಮತ್ತು ಪ್ರಾಣಿಗಳ ದೇಹಕ್ಕೆ ಹಾನಿಕರ ಎಂದು ಹವಾಮಾನ ಇಲಾಖೆ ತಿಳಿಸಿದೆ.

Related Articles

ಇತ್ತೀಚಿನ ಸುದ್ದಿಗಳು