Saturday, June 15, 2024

ಸತ್ಯ | ನ್ಯಾಯ |ಧರ್ಮ

Breaking News : ಚಾಮರಾಜನಗರ ಹಾಲಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ನಿಧನ

ಚಾಮರಾಜನಗರ ಹಾಲಿ ಸಂಸದ, ದಲಿತ ಚಳುವಳಿಯ ಮುಂಚೂಣಿ ನಾಯಕರಾಗಿ ಗುರುತಿಸಿಕೊಂಡಿದ್ದ ಶ್ರೀನಿವಾಸ್ ಪ್ರಸಾದ್ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ, ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ತುರ್ತು ಚಿಕಿತ್ಸೆ ಪಡೆಯುತ್ತಿದ್ದರು.

ರಾಜ್ಯದ ಮೊದಲ ಹಂತದ ಚುನಾವಣೆಯ ದಿನದಂದೇ ಶ್ರೀನಿವಾಸ್ ಪ್ರಸಾದ್ ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿತ್ತು. ತೀವ್ರ ನಿಗಾ ಘಟಕದಲ್ಲಿ ಅವರನ್ನು ಇಡಲಾಗಿತ್ತು. ಆದರೆ ಇಂದು ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಚೇತರಿಕೆ ಕಂಡುಬಂದಿರಲಿಲ್ಲ. ತಡರಾತ್ರಿ 1.30 ರ ಸುಮಾರಿಗೆ ಅವರ ನಿಧನದ ಬಗ್ಗೆ ಕುಟುಂಬ ಮೂಲಗಳು ಸ್ಪಷ್ಟಪಡಿಸಿವೆ‌.

1947 ರಲ್ಲಿ ಹುಟ್ಟಿದ ವಿ. ಶ್ರೀನಿವಾಸ್ ಪ್ರಸಾದ್ ನಂಜನಗೂಡು ಕ್ಷೇತ್ರವನ್ನು ಪ್ರತಿನಿಧಿಸುವ ಮೂಲಕ ಕರ್ನಾಟಕ ವಿಧಾನಸಭೆಗೆ ಮೊದಲ ಬಾರಿ ವಿಧಾನಸಭಾ ಸದಸ್ಯರಾಗಿದ್ದರು. ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಲೋಕಸಭೆಯ ಸದಸ್ಯರಾಗಿದ್ದರು.

ಅವರು ಮೂಲತಃ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನಿಂದ ಬಂದವರು. ನಂತರ ಅವರು ಜನತಾ ದಳ – ಯುನೈಟೆಡ್ ಗೆ ಸೇರಿದರು. ನಂತರ ಅವರು ಕಾಂಗ್ರೆಸ್‌ಗೆ ಮರಳಿದರು ಮತ್ತು 2013 ರಲ್ಲಿ ನಂಜನಗೂಡಿನಿಂದ ಶಾಸಕರಾಗಿ ಆಯ್ಕೆಯಾದರು. ನಂತರ ಅವರು ಮತ್ತೆ ತಮ್ಮ ಪಕ್ಷವನ್ನು ಬದಲಾಯಿಸುವ ಮೂಲಕ 24 ಡಿಸೆಂಬರ್ 2016 ರಂದು ಅಧಿಕೃತವಾಗಿ ಬಿಜೆಪಿ ಸೇರಿದರು. ತಮ್ಮ ಸಿದ್ಧಾಂತಕ್ಕೆ ವಿರುದ್ಧವಾಗಿದ್ದರೂ ಅವರು ತಮ್ಮ ಪಕ್ಷದ ಒಳಗಿನ ವೈಮನಸ್ಸಿನ ಕಾರಣಕ್ಕೆ ಇಷ್ಟವಿಲ್ಲದಿದ್ದರೂ ಬಿಜೆಪಿ ಪಕ್ಷ ಸೇರಿದ್ದರು.

ಅವರು 2013 ರಿಂದ 2016 ರವರೆಗೆ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಸಚಿವರಾಗಿದ್ದರು. ಹಾಗೂ ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸರ್ಕಾರದಲ್ಲೂ ಜೆಡಿ ಯು ಪಕ್ಷವನ್ನು ಪ್ರತಿನಿಧಿಸಿ ಕೇಂದ್ರ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು