ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಪ್ರಕರಣ: ಮಗನ ವಿಡಿಯೋ ಕುರಿತು ಹೆಚ್ ಡಿ ರೇವಣ್ಣ ಮೊದಲ ಪ್ರತಿಕ್ರಿಯೆ
ಲಿಂಕ್ ನಕಲಿಸಲಾಗಿದೆ ✓
Prajwal Revanna Case: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ತುಣುಕು ಇದೀಗ ರಾಜ್ಯ ಹಾಗೂ ದೇಶಾದ್ಯಂತ ಸದ್ದು ಮಾಡುತ್ತಿದೆ. ಈ ಬಗ್ಗೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದು ಹೀಗೆ:
ಹೆಚ್.ಡಿ.ರೇವಣ್ಣ ಹಾಗೂ ಅವರ ಪುತ್ರ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ ಐಆರ್ ದಾಖಲಿಸಿದ ರೇವಣ್ಣ ಪ್ರತಿಕ್ರಿಯಿಸಿ.. ಇದೆಕ್ಕೆಲ್ಲ ಹೆದರಿ ಓಡಿ ಹೋಗುವುದಿಲ್ಲ ಎಂದರು.
ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಪಿತೂರಿ ನಡೆಯುತ್ತಿದೆ. ಕಾನೂನು ಹೋರಾಟ ನಡೆಸುತ್ತೇನೆ ಎಂದರು.
ಪ್ರಜ್ವಲ್ ರೇವಣ್ಣನಿಗೆ ವಿದೇಶ ಪ್ರವಾಸ ಮಾಡುವ ಸಮಯದಲ್ಲಿ ಎಫ್ಐಆರ್ ದಾಖಲಿಸುತ್ತಾರೆ ಎಂಬುದು ಗೊತ್ತಿರಲಿಲ್ಲ. ಎಫ್ ಐಆರ್ ದಾಖಲಿಸುವ ಮುನ್ನವೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಲು ನಿರ್ಧರಿಸಿದ್ದರು ಎಂದು ಅವರು ತಿಳಿಸಿದರು.
ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ನಾನೇನೂ ಹೇಳುವುದಿಲ್ಲ. ಎಸ್ಐಟಿ ತನಿಖೆ ನಡೆಸಬೇಕು ಎಂದು ಎಚ್.ಡಿ.ದೇವೇಗೌಡರ ಭೇಟಿ ಬಳಿಕ ಮಾಜಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು.
ದೇವೇಗೌಡರ ಕುಟುಂಬದ ವಿರುದ್ಧ ಷಡ್ಯಂತ್ರ ಹೊಸದಲ್ಲ. ಇಂತಹ ಹಲವಾರು ಸಂಚುಗಳನ್ನು ನೋಡಿದ್ದೇವೆ. ದೇವೇಗೌಡರ ವಿರುದ್ಧ ಸಿಒಡಿ ತನಿಖೆ ಸಹ ನಡೆದಿತ್ತು, ನಾನು ದೇವೇಗೌಡರ ಜತೆ ಈ ಕುರಿತು ಚರ್ಚಿಸಿಲ್ಲ. ಕಾನೂನಿನ ಪ್ರಕಾರ ಏನು ನಡೆಯಬೇಕೊ ನಡೆಯಲಿ ಎಂದು ಹೇಳಿದರು.
Peepal Media Desk
Peepal Media · ರಾಜ್ಯ ವಿಭಾಗ