ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಆತ್ಮರಕ್ಷಣೆಗೆ ‘ಪೆಪ್ಪರ್ ಸ್ಪ್ರೇ’ ಬಳಸುವಂತಿಲ್ಲ: ಹೈಕೋರ್ಟ ಮಹತ್ವದ ತೀರ್ಪು

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಆತ್ಮರಕ್ಷಣೆಗೆ ‘ಪೆಪ್ಪರ್ ಸ್ಪ್ರೇ’ ಬಳಸುವಂತಿಲ್ಲ: ಹೈಕೋರ್ಟ ಮಹತ್ವದ ತೀರ್ಪು

ಪೆಪ್ಪರ್ ಸ್ಪ್ರೇ ಅಪಾಯಕಾರಿ ಅಸ್ತ್ರ.. ಅದನ್ನು ಆತ್ಮರಕ್ಷಣೆಗೂ ಸಹ ಬಳಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತಿಳಿಸಿದೆ.

ಸಿ. ಕೃಷ್ಣಯ್ಯ ಚೆಟ್ಟಿ ಅಂಡ್ ಸನ್ಸ್ ಕಂಪನಿ ಚಿನ್ನಾಭರಣಗಳ ಮಳಿಗೆಯ ನಿರ್ದೇಶಕ ಸಿ. ಗಣೇಶ್ ನಾರಾಯಣ ಮತ್ತು ಅವರ ಪತ್ನಿ ವಿದ್ಯಾ ನಟರಾಜ್, ಆತ್ಮರಕ್ಷಣೆಯ ಕಾರಣಕ್ಕೆ ಪೆಪ್ಪರ್ ಸ್ಪ್ರೇ ಅಸ್ತ್ರದ ಬಗ್ಗೆ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಅಂಶದ ಮೂಲಕ ಗಮನ ಸೆಳೆದು ತೀರ್ಪು ನೀಡಿದೆ.

ಚಿಲ್ಲಿ ಸ್ಪ್ರೇ ಬಳಸಿದ ಆರೋಪದ ಮೇಲೆ ಸಂಸ್ಥೆಯ ನಿರ್ದೇಶಕ ಸಿ.ಗಣೇಶ್ ನಾರಾಯಣ್ ಮತ್ತು ಅವರ ಪತ್ನಿ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಲು ಕೋರ್ಟ್ ನಿರಾಕರಿಸಿದೆ. ದೂರುದಾರರು ತಮ್ಮ ಆಸ್ತಿಯನ್ನು ಪ್ರವೇಶಿಸುವಾಗ ಅವರ ಮೇಲೆ ಪೆಪ್ಪರ್ ಸ್ಪ್ರೇ ಬಳಸಿದ ಆರೋಪ ದಂಪತಿಗಳ ಮೇಲಿದೆ.

ದಂಪತಿಗಳ ಮನವಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ, ಈ ಪ್ರಕರಣದಲ್ಲಿ ದಂಪತಿಗಳ ಜೀವಕ್ಕೆ ಯಾವುದೇ ಅಪಾಯವಿಲ್ಲವಾದ್ದರಿಂದ ಆತ್ಮರಕ್ಷಣೆಗಾಗಿ ಪೆಪ್ಪರ್ ಸ್ಪ್ರೇ ಬಳಸಬಾರದಿತ್ತು ಎಂದು ಹೇಳಿದೆ. ಅಂತಹ ಪರಿಸ್ಥಿತಿಯಲ್ಲಿ, ಈ ವಿಷಯದಲ್ಲಿ ತನಿಖೆ ಅಗತ್ಯವಾಗಿದೆ ಎಂದು ತಿಳಿಸಿದೆ.

ನಮ್ಮ ದೇಶದಲ್ಲಿ ಪಪ್ಪೆರ್ ಸ್ಪ್ರೇ ಬಳಕೆಗೆ ಸಂಬಂಧಿಸಿದಂತೆ ಯಾವುದೇ ನಿರ್ದಿಷ್ಟ ಕಾನೂನು ಇಲ್ಲ ಎಂದು ನ್ಯಾಯಾಲಯ ಹೇಳಿದೆ. 2018 ರಲ್ಲಿನ ಅಮೇರಿಕಾದಲ್ಲಿ ಒಂದು ಪ್ರಕರಣ ಉಲ್ಲೇಖಿಸಿ ವಿವಿರಿಸಿದ ನ್ಯಾಯಪೀಠ ಪೆಪ್ಪರ್ ಸ್ಪ್ರೇಯಂತಹ ರಾಸಾಯನಿಕ ಸಿಂಪಡಣೆಗಳು ಅಪಾಯಕಾರಿ ಆಯುಧಗಳಾಗಿವೆ ಎಂದು ಹೇಳಿದೆ ಎಂದು ತಿಳಿಸಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು