ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

SSLC Result: 5 ವರ್ಷಗಳ ನಂತರ ಮೊದಲೆರಡು ಸ್ಥಾನ ಮರಳಿ ಗಳಿಸಿಕೊಂಡ ಉಡುಪಿ ಮತ್ತು ದಕ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

SSLC Result: 5 ವರ್ಷಗಳ ನಂತರ ಮೊದಲೆರಡು ಸ್ಥಾನ ಮರಳಿ ಗಳಿಸಿಕೊಂಡ ಉಡುಪಿ ಮತ್ತು ದಕ

ಬೆಂಗಳೂರು: ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ಇದೇ ವೇಳೆ ಅವರು ಮಾತನಾಡಿ 2023-24 ನೇ ಸಾಲಿನಲ್ಲಿ ಶೇ 76.91ರ ವಿದ್ಯಾರ್ಥಿಗಳು ಪಾಸಾಗಿದ್ದಾರೆ ಅಂತ ತಿಳಿಸಿದರು.

ಇನ್ನೂ ಈ ಬಾರಿ ಮೂರು ಬಾರಿ ಎಕ್ಸಾಂ ಬರೆಯುವುದಕ್ಕೆ ಅವಕಾಶ ನೀಡಲಾಗಿದ್ದು, ಹೆಚ್ಚಿನ ಅಂಕ ತೆಗೆದುಕೊಂಡದನ್ನು ಅಂತಿಮವಾಗಿ ಗಣನೆಗೆ ತೆಗೆದುಕೊಳ್ಳಲಾಗುವುದು ಅಂತ ಹೇಳಿದರು.

ಈ ಬಾರಿ ಉಡುಪಿ ಜಿಲ್ಲೆ ಫಲಿತಾಂಶದಲ್ಲಿ ಪ್ರಥಮ ಸ್ಥಾನವನ್ನು ಶೇಕಡ 94 ರೊಂದಿಗೆ ಪಡೆದುಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆ ದ್ವೀತಿಯ ಸ್ಥಾನವನ್ನು ಪಡೆದುಕೊಂಡಿದೆ. ಅದು ಶೇ 92.12 ಪಡೆದುಕೊಂಡಿದೆ. ಯಾದಗಿರಿ ಜಿಲ್ಲೆಗೆ ಕೊನೆ ಸ್ಥಾನ ಸಿಕ್ಕಿದೆ. ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿಯರದೇ ಮೈಲುಗೈ. ಓರ್ವ ವಿದ್ಯಾರ್ಥಿನಿ ಮಾತ್ರ ಈ ಬಾರಿ 625ಕ್ಕೆ 625 ಅಂಕಗಳನ್ನು ತೆಗೆದುಕೊಂಡಿದ್ದಾರೆ ಎಂದು ಅವರು ತಿಳಿಸಿದರು.

ಬಾಗಲಕೋಟೆಯ ಅಂಕಿತ ಬಸಪ್ಪ (625ಕ್ಕೆ 625) ಅವರು ಪಡೆದುಕೊಂಡಿದ್ದಾರೆ. ಹರ್ಶಿತ ಡಿಎಂ ಮಧುಗಿರಿಯವರು 624/625 ಅಂಕಗಳನ್ನು ಪಡೆದುಕೊಂಢಿದ್ದಾರೆ. ಇನ್ನೂ ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ 631204 ವಿದ್ಯಾರ್ಥಿಗಳು ಪಾಸಾಗಿದ್ದಾರೆ, ಈ ಬಾರಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದಾರೆ ಅಂಥ ತಿಳಿಸಿದರು.

ಈ ವರ್ಷದ ಎಸ್ಸೆಸ್ಸೆಲ್ಸಿ ಫಲಿತಾಂಶದ ವಿಶೇಷ ಎಂದರೆ ಒಬ್ಬ ವಿದ್ಯಾರ್ಥಿನಿ ಮಾತ್ರ 625ಕ್ಕೆ 625 ಅಂಕವನ್ನು ಪಡೆದುಕೊಂಡಿದ್ದಾಳೆ.

2024ರ ಮಾ.25ರಿಂದ 2024ರ ಏಪ್ರಿಲ್ 6ರವರೆಗೆ ನಡೆದಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆ-1ರಲ್ಲಿ 441910 ವಿದ್ಯಾರ್ಥಿಗಳು, 428058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು. ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ 6,31,204 ವಿದ್ಯಾರ್ಥಿಗಳು ಪಾಸ್​​ ಆಗಿದ್ದು ಈ ಬಾರಿ ರಾಜ್ಯಾದ್ಯಂತ 76.91ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

2,87,416 (65.90%) ಬಾಲಕರು ಪಾಸ್ ಆಗಿದ್ದು 3,43,788 (81.11%) ಬಾಲಕಿಯರು ಪಾಸ್​ ಆಗಿದ್ದಾರೆ. 

ಇಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ; ಈ ಲಿಂಕ್ ಬಳಸಿ ಫಲಿತಾಂಶ ವೀಕ್ಷಿಸಿ

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು