ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ರೇವಣ್ಣ ಜಾಮೀನು ಅರ್ಜಿ ಮುಂದೂಡಿಕೆ ; ಮತ್ತೆ ಮೂರು ದಿನ ಜೈಲೇ ಗತಿ

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ, ರಾಜಕೀಯ

• 1 ನಿಮಿಷದ ಓದು

ರೇವಣ್ಣ ಜಾಮೀನು ಅರ್ಜಿ ಮುಂದೂಡಿಕೆ ; ಮತ್ತೆ ಮೂರು ದಿನ ಜೈಲೇ ಗತಿ

ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಇಂದು ನಡೆಯಿತು. ವಾದ-ಪ್ರತಿವಾದ ಆಲಿಸಿದಂತ ನ್ಯಾಯಪೀಠವು, ಸೋಮವಾರದ ಬೆಳಿಗ್ಗೆ 11.30ಕ್ಕೆ ಮುಂದೂಡಿದೆ.

ಹೀಗಾಗಿ ನ್ಯಾಯಾಂಗ ಬಂಧನದಲ್ಲಿರುವ ಜೆಡಿಎಸ್ ಶಾಸಕ ರೇವಣ್ಣ ಅವರಿಗೆ ಮತ್ತೆ ಮೂರು ದಿನ ಜೈಲೇ ಗತಿಯಾದಂತಾಗಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ನಡೆದ ವಿಚಾರಣೆಯಲ್ಲಿ ಸಂತ್ರಸ್ತೆ ಕಿಡ್ನಾಪ್ ಪ್ರಕರಣದಲ್ಲಿ ಹೆಚ್.ಡಿ ರೇವಣ್ಣಗೆ ಸದ್ಯಕ್ಕೆ ಜಾಮೀನು ನೀಡದಂತೆ ಎಸ್‌ಐಟಿ ಪರ ಎಸ್ ಪಿಪಿ ಅವರು ಆಕ್ಷೇಪಣೆ ಸಲ್ಲಿಸಿದ್ದಾರೆ.

ಕೋರ್ಟ್ ಮುಂದೆ ಎಸ್‌ಐಟಿಯ ಎಸ್ ಪಿಪಿ ಜಾಯ್ನಾ ಕೋಥಾರಿ ಅವರು ವಾದ ಮಂಡಿಸಿ, ಜಾಮೀನು ಅರ್ಜಿಗೆ ನಾವು ಆಕ್ಷೇಪಣೆ ಸಲ್ಲಿಸುತ್ತಿರುವುದರ ಹಿಂದೆ ವಿಳಂಬದ ಉದ್ದೇಶವಿಲ್ಲ. ನಮ್ಮ ವಾದ ಮಂಡನೆಗೆ ಕಾಲಾವಕಾಶ ನೀಡಬೇಕು ಎಂಬುದಾಗಿ ಕೋರಿದರು.

ಈ ವೇಳೆ ನ್ಯಾಯಪೀಠವು ಜಾಮೀನು ಅರ್ಜಿ ವಿಚಾರಣೆಗೆ ಕಾಲಾವಕಾಶ ನೀಡುವುದಿಲ್ಲ. ಬೇರೆ ಪ್ರಕರಣಗಳಲ್ಲಿ ನಾವು ಕಾಲಾವಕಾಶ ನೀಡಿಲ್ಲ. ಸುಪ್ರೀಂ ಕೋರ್ಟ್ ಕೂಡ ಇದನ್ನೇ ಹೇಳಿದೆ ಎಂಬುದಾಗಿ ಸ್ಪಷ್ಟ ಪಡಿಸಿತು.

ಈ ಬಳಿಕ ಹೆಚ್.ಡಿ ರೇವಣ್ಣ ಪರವಾಗಿ ಹಿರಿಯ ವಕೀಲ ಸಿ.ವಿ ನಾಗೇಶ್ ವಾದಿಸುತ್ತಾ, ಜಾಮೀನು ಅರ್ಜಿ ಊರ್ಜಿತವೆಂಬ ನನ್ನ ವಾದದ ಬಗ್ಗೆ ತಕರಾರು ತೆಗೆದಿದ್ದಾರೆ. ನನ್ನ 56 ವರ್ಷಗಳ ವಕೀಲ ವೃತ್ತಿಯಲ್ಲಿ ಎಂದಿಗೂ ತಪ್ಪು ಮಾಹಿತಿ ನೀಡಿಲ್ಲ. 2023ರ ತಿಸ್ತಾ ಸೆಟಲ್ ವಾರ್ಡ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪಿದೆ. ನಿರಂಜರ್ ಸಿಂಗ್ ಕೇಸಲ್ಲೂ ಜಾಮೀನು ಅರ್ಜಿ ಸಲ್ಲಿಸಬಹುದೆಂಬ ತೀರ್ಪಿದೆ. 22 ತೀರ್ಪುಗಳಲ್ಲಿ ನಿರಂಜನ್ ಸಿಂಗ್ ಕೇಸ್ ಅನ್ನು ಅನುಸರಿಸಲಾಗಿದೆ ಎಂಬುದಾಗಿ ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟರು.

ಹೀಗೆ ವಾದ ವಿವಾದಗಳ ಆಲಿಕೃಯ ನಂತರ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಮಾಜಿ ಸಚಿವ ಹೆಚ್.ಡಿ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಸೋಮವಾರ ಬೆಳಿಗ್ಗೆ 11.30ಕ್ಕೆ ಮುಂದೂಡಿಕೆ ಮಾಡಿದೆ. ಹೀಗಾಗಿ ಮೂರು ದಿನ ಜೈಲೇ ಗತಿಯಾಗಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು